ಮಂಗಳೂರು | ಫೆಂಗಲ್ ಚಂಡಮಾರುತ, ಮಂಗಳವಾರ ಸಂಜೆಯವರೆಗೆ ಮಳೆಯ ಅಬ್ಬರ

Date:

Advertisements

ಫೆಂಗಲ್ ಚಂಡಮಾರುತ ರಾತ್ರಿ ವೇಳೆ‌ಗೆ ಪಶ್ಚಿಮ ಭಾಗದಲ್ಲಿ ಕಾಣಿಸಿಕೊಂಡಿದ್ದು, ದ.ಕ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ.

ಫೆಂಗಲ್ ಚಂಡಮಾರುತ ಸದ್ಯ ಪಶ್ಚಿಮ ಕರಾವಳಿ ಭಾಗದ ಅರಬ್ಬಿ ಸಮುದ್ರದಲ್ಲಿ ಇದ್ದು, ಬಳಿಕ ಇದು ಸಮುದ್ರ ಮಧ್ಯೆಗೆ ತೆರಳಿ ಕೊನೆಗೊಳ್ಳಲಿದೆ. ಫೆಂಗಲ್ ಚಂಡಮಾರುತದ ಪ್ರಭಾವದಿಂದ ಮಂಗಳವಾರ ಸಂಜೆಯವರೆಗೆ ಮಳೆಯ ಅಬ್ಬರ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾತ್ರಿ ಸುರಿದ ಮಳೆಗೆ ಪಂಪ್‌ವೆಲ್, ಬಜ್ಜೊಡಿ, ಬಜಾಲ್ ಅಂಡರ್ ಪಾಸ್, ಪಡೀಲ್ ಮೊದಲಾದ ಕಡೆ ಹೆದ್ದಾರಿಯಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.

Advertisements

ಫೆಂಗಲ್ ಸೈಕ್ಲೋನ್ ನಿನ್ನೆಯಿಂದ ಭಾರೀ ಅನಾಹುತಗಳನ್ನೇ ಸೃಷ್ಟಿಮಾಡಿದೆ. ಸೋಮವಾರ ಸಂಜೆ ಪ್ರಾರಂಭಗೊಂಡ ಮಳೆ ಉಡುಪಿ ಜಿಲ್ಲೆಯಲ್ಲಿ ಈಗಲೂ ಮುಂದುವರೆದಿದೆ.

ನಿನ್ನೆಯ ಅಬ್ಬರದ ಮಳೆಗೆ ಸಿಡಿಲು ಬಡಿದು ಮನೆಗೆ ಹಾನಿಯುಂಟಾದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ನೀಲಾವರ ಸಮೀಪದ ಸೊಣಗಾರ ಬೆಟ್ಟು ಎಂಬಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ನೀಲಾವರ ಸಮೀಪದ ಸೊಣಗಾರಬೆಟ್ಟು ರಾಧು ಶೆಡ್ತಿಯವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್‌ಉಪಕರಣಗಳಿಗೆ ಹಾನಿಯುಂಟಾಗಿದ್ದು, ವಿದ್ಯುತ್ ಉಪಕರಣಗಳು ಸುಟ್ಟು ಕರಕಲಾಗಿವೆ. ಇನ್ನು ರಾತ್ರಿಯಿಂದ ಹಲವೆಡೆ ವಿದ್ಯುತ್‌ ವ್ಯತ್ಯಯ ಉಂಟಾಗಿದ್ದು ಜನರು ಪರದಾಡುವಂತಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X