ರಾಜ್ಯದಲ್ಲಿ ಬಿರು ಬೇಸಿಗೆಗೆ ಜನ ಕಂಗಾಲು; ಕೊಡಗಿನಲ್ಲಿ ಮಳೆಯ ಸಿಂಚನ

Date:

ರಾಜ್ಯದಲ್ಲಿ ಬಿರು ಬೇಸಿಗೆಯಿಂದ ಜನ ಕಂಗಾಲಾಗಿದ್ದು, ಸುಡುವ ಬಿಸಿಲು, ಬತ್ತಿದ ನದಿ, ಕೆರೆ, ಕೊಳವೆಬಾವಿಗಳಲ್ಲಿಯೂ ನೀರಿಲ್ಲದೆ ಕುಡಿಯುವ ನೀರಿಗೂ ಸಮಸ್ಯೆ ತಂದೊಡ್ಡಿದೆ. ಇದೆಲ್ಲದರ ನಡುವೆ ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದ್ದು, ಅದಕ್ಕೆ ತಕ್ಕಂತೆ ಕೊಡಗು ಜಿಲ್ಲೆಯಲ್ಲಿ ಬುಧವಾರ ಮಳೆಯಾಗಿರುವುದು ಅಚ್ಚರಿ ಮೂಡಿಸಿದ್ದರೂ ಸಂತಸಕ್ಕೆ ಕಾರಣವಾಗಿದೆ.

- Advertisement -

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮೂರ್ನಾಡು ಸಮೀಪದ ಕಿಗ್ಗಾಲು, ಕಾಕೋಟಪರಂಬುವಿನಲ್ಲಿ ಬುಧವಾರ ಕೆಲ ಸಮಯ ಮಳೆಯಾಗಿದ್ದು, ಕಾದಿದ್ದ ಭೂಮಿಗೆ ತಂಪೆರದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಬಗ್ಗೆ ಮುನ್ಸೂಚನೆ ಇದ್ದು, ಮಾರ್ಚ್ 20ರ ಬಳಿಕ ಕೊಡಗು, ಪಶ್ಚಿಮ ಘಟ್ಟಗಳ ಭಾಗದಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿತ್ತು. ಆದರೆ ಅಂದುಕೊಂಡಿದ್ದ ಸಮಯಕ್ಕೂ ಮುನ್ನವೇ ಕೊಡಗು ಜಿಲ್ಲೆಯ ಕಿಗ್ಗಾಲುವಿನಲ್ಲಿ ಮಳೆಯಾಗಿದೆ.

“ಎಲ್‌ ನಿನೋ ಪ್ರಭಾವ ಕಡಿಮೆಯಾಗುತ್ತಿರುವ ಕಾರಣ ಮುಂದಿನ ದಿನಗಳಲ್ಲಿ ಜಾಗತಿಕವಾಗಿ ತಾಪಮಾನ ಸಹಜ ಸ್ಥಿತಿಗೆ ಮರಳಲಿದೆ. ಈ ಬಾರಿ ರಾಜ್ಯದಲ್ಲಿ ಕೂಡ ಉತ್ತಮ ಮುಂಗಾರು ಮಳೆಯ ನಿರೀಕ್ಷೆ ಇದೆ” ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮೇ-ಜೂನ್ ವೇಳೆಗೆ ರಾಜ್ಯದಲ್ಲಿ ಉತ್ತಮ ಮುಂಗಾರು ಆರಂಭವಾಗುವ ಸಾಧ್ಯತೆ ಇದ್ದು, ಜೂನ್ ವೇಳೆಗೆ ರಾಜ್ಯದಲ್ಲಿ ನೀರಿನ ಸಮಸ್ಯೆ ನಿವಾರಣೆಯಾಗಲಿದೆ” ಎಂದು ನಿರೀಕ್ಷಿಸಿದೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | 5, 8, 9ನೇ ತರಗತಿಯ ಪಬ್ಲಿಕ್ ಪರೀಕ್ಷೆ ಈ ವರ್ಷ ಬೇಡ; ಎಐಡಿಎಸ್‌ಒ ಮನವಿ

ಈ ಬಾರಿ ರಾಜ್ಯದಲ್ಲಿ ಮುಂಗಾರು ಕೈಕೊಟ್ಟರೆ ಭೀಕರ ಬರಗಾಲ ಎದುರಾಗಲಿದೆ. ಆದರೆ ಹವಾಮಾನ ತಜ್ಞರು ಉತ್ತಮ ಮಳೆಯಾಗುವ ಮುನ್ಸೂಚನೆ ಕೊಟ್ಟಿರುವುದು ಸದ್ಯ ಸಮಾಧಾನ ತರಿಸಿದೆ. ಆದರೆ ಮಳೆಗಾಲ ಆರಂಭಕ್ಕೆ ಇನ್ನು ಮೂರು ತಿಂಗಳು ಸಮಯ ಇದ್ದು ಅದುವರೆಗೂ ಸುಡು ಬಿಸಿಲಿನ ನಡುವೆ, ನೀರಿನ ಕೊರತೆ ನಡುವೆ ದಿನ ಕಳೆಯುವುದು ಸವಾಲಾಗಿದೆ.

ಎಲ್‌ ನಿನೋ ಕಾರಣದಿಂದಾಗಿ ದೇಶದ ಹಲವು ರಾಜ್ಯಗಳಲ್ಲಿ ಕಳೆದ ವರ್ಷ ಮಳೆ ಸಂಪೂರ್ಣವಾಗಿ ಕೈಕೊಟ್ಟಿತ್ತು. ಪ್ರಮುಖ ಜಲಾಶಯಗಳು ಅರ್ಧ ಕೂಡ ತುಂಬದೇ ಇರುವುದು ಕೃಷಿ ಚಟುವಟಿಕೆ ಮೇಲೆಯೂ ಪರಿಣಾಮ ಬೀರಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...