ಹುಮನಾಬಾದ್‌ | ವಿಕಲಚೇತನರು ಸಂಘಟಿತರಾಗಿ ಹಕ್ಕುಗಳಿಗೆ ಹೋರಾಡಿ

Date:

Advertisements

ಸಮಾಜದಲ್ಲಿ ವಿಕಲಚೇತನರನ್ನು ಅಶಕ್ತರೆಂದು ಕೀಳಿರಿಮೆಯಿಂದ ನೋಡದೇ ಅವರಲ್ಲಿ ಆತ್ಮಸ್ಥೈರ್ಯ ತುಂಬಬೇಕು. ವಿವಿಧ ಕ್ಷೇತ್ರಗಳಲ್ಲಿರುವ ಸೌಲಭ್ಯಗಳನ್ನು ಪಡೆಯಲು ಸಂಘಟಿತರಾಗಿ ಹೋರಾಡಬೇಕು ಎಂದು ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಹುಮನಾಬಾದ್ ತಾಲೂಕು ಸಂಯೋಜಕ ಪ್ರದೀಪ ಹೇಳಿದರು.

ಹುಮನಾಬಾದ್ ಪಟ್ಟಣದ ಆರ್ಬಿಟ್ ಸಂಸ್ಥೆಯ ಸಭಾಂಗಣದಲ್ಲಿ ಆರ್ಬಿಟ್ ಸಂಸ್ಥೆ ಹಾಗೂ ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದಲ್ಲಿ ನಡೆದ ಮಾನಸಿಕ ಅಸ್ವಸ್ಥರ ಹಾಗೂ ವಿಕಲಚೇತನರಿಗೆ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮದ ಸಂಯೋಜಕ ಪ್ರವೀಣ್ ಮಾತನಾಡಿ, ʼಡಾ.ಬಿ.ಆರ್.ಅಂಬೇಡ್ಕರ್ ಅವರ ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂಬ ತತ್ವಗಳು ಮೈಗೂಡಿಕೊಂಡು ನಾವೆಲ್ಲರೂ ಹೆಚ್ಚಿನ ಅಧ್ಯಯನ ಮಾಡಬೇಕು. ಸಂಘಟನಾತ್ಮಕದಿಂದ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಪ್ರಯತ್ನಿಸಬೇಕುʼ ಎಂದು ಸಲಹೆ ನೀಡಿದರು.

Advertisements

ಆರ್ಬಿಟ್ ಸಂಸ್ಥೆಯ ನಿರ್ದೇಶಕ ಫಾದರ್ ವಿಕ್ಟರ್ ವಾಸ್‌ ಮಾತನಾಡಿ‌, ʼ ಸಂಘಟನಾತ್ಮಕ ಸಾಮರ್ಥ್ಯದಿಂದ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ. ಸರ್ಕಾರ ಅನೇಕ ಯೋಜನೆಗಳು ರೂಪಿಸಿದರೂ ಅದು ಸಂಘಟನಾತ್ಮಕ ಶಕ್ತಿಯ ಕೊರತೆಯಿಂದ ಜನಸಾಮಾನ್ಯರಿಗೆ ಸಮಪರ್ಕವಾಗಿ ತಲುಪಿತ್ತಿಲ್ಲʼ ಎಂದರು.

ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ | ಸಾವಿನಲ್ಲೂ ಒಂದಾದ ದಂಪತಿ

ಕಾರ್ಯಕ್ರಮದಲ್ಲಿ ಬಿಆರ್‌ಸಿ ಚಂದ್ರಕಲಾ, ಬಿಲಾಲ್ ಹಾಗೂ ಎಪಿಎಫ್ ಸಂಸ್ಥೆಯ ಪ್ರತಿನಿಧಿಗಳಾದ ವೀರೇಶ್, ಆರ್ಬಿಟ್ ಸಂಸ್ಥೆಯ ನಿರ್ದೇಶಕರು, ಸಿಬ್ಬಂದಿ ಮತ್ತು 70 ಜನ ವಿಕಲಚೇತನ ಫಲಾನುಭವಿಗಳು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X