ರಾಯಚೂರು | ಒಳಮೀಸಲಾತಿ, ಕಾಂತರಾಜ ವರದಿ ಜಾರಿಗೊಳಿಸದಿದ್ದರೆ ಜನಪ್ರತಿನಿಧಿಗಳಿಗೆ ಘೇರಾವ್: ಮುನಿಯಪ್ಪ

Date:

Advertisements

ಆಯಾ ರಾಜ್ಯಗಳ ಪ್ರಕಾರ ಸುಪ್ರೀಂ ಕೋರ್ಟ್‌ ಒಳಮೀಸಲಾತಿ ಆದೇಶ ನೀಡಿ ಮೂರು ತಿಂಗಳಾಗಿದ್ದು ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ. ಈ ಹಿಂದೆ ಚುನಾವಣೆಯಲ್ಲಿ ಭರವಸೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಾತಿಗೆ ತಪ್ಪಿದ್ದಾರೆ, ಆದೇಶವನ್ನು ಪಾಲಿಸುವ ಮೂಲಕ ಒಳ ಮೀಸಲಾತಿ ಜಾರಿಗೊಳಿಸಬೇಕು ಹಾಗೂ ಕಾಂತರಾಜ ಆಯೋಗದ ವರದಿ 15 ದಿನಗಳ ಒಳಗಾಗಿ ಜಾರಿಗೊಳಿಸದಿದ್ದರೆ ನ.12ರಂದು ರಾಜ್ಯದ ಎಲ್ಲಾ ಜಿಲ್ಲಾ ಉಸ್ತುವಾರಿ, ಸಂಸದರು, ಶಾಸಕರಗಳಿಗೆ ಘೇರಾವ್ ಹಾಕಲಾಗುತ್ತದೆ ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಒಳಮೀಸಲಾತಿ ಜಾರಿಗೆ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿರುವವರು ಸ್ವಾಗತಿಸಿದ್ದಾರೆ. ರಾಜ್ಯದಲ್ಲಿ ಸದಾಶಿವ ಆಯೋಗ ಮತ್ತು ಕಾಂತರಾಜ ಆಯೋಗ ಎಲ್ಲಾ ಜಾತಿಗಳ ವೈಜ್ಞಾನಿಕ ದತ್ತಾಂಶ ನೀಡಿದೆ. ಇದರ ಆಧಾರದಲ್ಲೇ ಸಿಎಂ ಸಿದ್ದರಾಮಯ್ಯ ಒತ್ತಡಕ್ಕೆ ಮಣಿಯದೇ ಜಾರಿಗೊಳಿಸಬೇಕು ಎಂದರು.

ರಾಜ್ಯದಲ್ಲಿ ಕಳೆದ 30 ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದು, ಎಲ್ಲಾ ಸರ್ಕಾರಗಳು ಆಶ್ವಾಸನೆ ನೀಡುತ್ತಾ ಬಂದಿದೆ. ಕಳೆದ ಚುನಾವಣೆಯ ವೇಳೆ ಕಾಂಗ್ರೆಸ್ ಪಕ್ಷ ಜಾರಿಗೆ ಭರವಸೆ ನೀಡಿದ್ದು ಇದೀಗ ಮಾತಿಗೆ ತಪ್ಪುತ್ತಿದ್ದಾರೆ ಎಂದು ಆರೋಪಿಸಿದರು.

Advertisements

ಸಂವಿಧಾನ ಬದ್ಧವಾಗಿರುವ ಮೀಸಲಾತಿ ನಮ್ಮ ಹಕ್ಕಾಗಿದ್ದು, ಒಳ ಮೀಸಲಾತಿ ಜಾರಿಗೊಳಿಸಿ ಇಲ್ಲ, ರಾಜೀನಾಮೆ ನೀಡಿ ಎಂದ ಅವರು, ವೀರಶೈವ ಲಿಂಗಾಯತ ಸಮುದಾಯ ಕಾಂತರಾಜ ವರದಿ ಜಾರಿ ಮಾಡಬಾರದು ಎಂದು ಸಿಎಂ ಮೇಲೆ ಒತ್ತಡ ಹಾಕಿದ್ದಾರೆ. ರಾಜಕೀಯ ಪ್ರಾಬಲ್ಯ ಹೊಂದಬೇಕು ಎನ್ನುವ ದೃಷ್ಟಿಯಿಂದ ಕಾಂತರಾಜ ವರದಿ ಜಾರಿಗೆ ವಿರೋಧ ಮಾಡುತ್ತಿದ್ದಾರೆ ಎಂದು ದೂರಿದರು.

ಇದನ್ನು ಓದಿದ್ದೀರಾ? ರಾಯಚೂರು | ಒಳಮೀಸಲಾತಿ ಜಾರಿಗೆ ಮತ್ತೊಂದು ಸಮಿತಿ ರಚನೆ ತರಾತುರಿಯ ತೀರ್ಮಾನ : ಎಸ್ ಮಾರೆಪ್ಪ

ಒಳಮೀಸಲಾತಿ ಜಾರಿಗೆ ಮತ್ತು ಕಾಂತರಾಜ ಆಯೋಗದ ವರಧಿ ಜಾರಿಗೊಳಿಸಬೇಕು. 15 ದಿನಗಳ ಒಳಗಾಗಿ ನಿರ್ಣಯ ಕೈಗೊಳ್ಳದಿದ್ದರೆ ಜಿಲ್ಲಾ ಉಸ್ತುವಾರಿ, ಸಂಸದರು, ಶಾಸಕರುಗಳಿಗೆ ನ.12 ರಂದು ಘೇರಾವ್ ಹಾಕಲಾಗುತ್ತದೆ ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಆರ್.ಮುನಿಯಪ್ಪ, ಕೆವಿ ವಾಸು, ಪ್ರಭು ದಳಪತಿ, ವೈ.ನರಸಪ್ಪ, ಆದನಗೌಡ ಪಾಟೀಲ್, ಹಾಜಿಸಾಬ್, ಹಿರೇಬೂದುರು, ವೆಂಕನಗೌಡ ನಾಯಕ ವಕೀಲ ಸೇರಿದಂತೆ ಅನೇಕರು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X