ಬೀದರ್‌ | ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ : ಕಾಂಗ್ರೆಸ್‌ ಪ್ರತಿಭಟನೆ

Date:

ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಬೀದರ್‌ನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಸಿದರು.

- Advertisement -

ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ರಾಷ್ಟ್ರಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ʼರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್ ಅವರು ಕೇಂದ್ರ ಸರ್ಕಾರದ ಅಣತಿಯಂತೆ ರಾಜಭವನ ಅಧಿಕಾರ ದುರ್ಬಳಕೆ ಮಾಡಿಕೊಂಡು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಅಹಿಂದ ನಾಯಕ ಸಿಎಂ ಸಿದ್ದರಾಮಯ್ಯನವರ ಏಳಿಗೆ ಹತ್ತಿಕ್ಕಲು ಬಿಜೆಪಿ-ಜೆಡಿಎಸ್‌ ಷಡ್ಯಂತ್ರ ರೂಪಿಸುತ್ತಿದೆʼ ಎಂದು ಕಿಡಿಕಾರಿದರು.

ಮಾಜಿ ಎಂಎಲ್ಸಿ ಅರವಿಂದಕುಮಾರ್‌ ಅರಳಿ ಮಾತನಾಡಿ, ʼಈ ಹಿಂದೆ ಕೇಂದ್ರ ಸಚಿವರಾಗಿ ಉತ್ತಮ ಆಡಳಿತ ನೀಡಿದ ರಾಜ್ಯಪಾಲ ಥಾವರ್‌ ಚಂದ್‌ ಅವರು ಈಗ ಕರ್ನಾಟಕ ರಾಜ್ಯಪಾಲರಾದ ಬಳಿಕ ಪಕ್ಷಪಾತಿ ಧೋರಣೆ ಅನುಸರಿಸುತ್ತಿರುವುದು ಸಂವಿಧಾನ ವಿರೋಧಿ ನಡೆಯಾಗಿದೆ. ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಪ್ರಾಸಿಕ್ಯೂಷನ್‌ಗೆ ನೀಡಿದ ಅನುಮತಿ ಹಿಂಪಡೆಯಲು ರಾಜ್ಯಪಾಲರಿಗೆ ಸೂಚಿಸಬೇಕು ಹಾಗೂ ಅವರನ್ನು ವಾಪಸ್‌ ಕರೆಸಿಕೊಳ್ಳಬೇಕುʼ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ನಾಗರಿಕ ಸಮಾಜ

ಪ್ರತಿಭಟನೆಯಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಅಮೃತರಾವ ಚಿಮಕೋಡೆ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಚಂದ್ರಕಾಂತ ಹಿಪ್ಪಳಗಾಂವ, ಮಾಜಿ ಸಂಸದ ನರಸಿಂಗ್‌ರಾವ್ ಸೂರ್ಯವಂಶಿ, ನಗರ ಸಭೆ ಅಧ್ಯಕ್ಷ ಮಹಮ್ಮದ್‌ ಗೌಸ್‌, ಮಾಜಿ ಎಂಎಲ್ಸಿ ಕೆ.ಪುಂಡಲಿಕರಾವ್‌ ಮುಖಂಡರಾದ ಸಂಜಯ ಜಾಗಿರದಾರ್‌, ವಿನೋದ್‌ ಅಪ್ಪೆ, ಮಹಮ್ಮದ್‌ ರಿಯಾಜ್‌, ಚಂದ್ರಶೇಖರ ಚನ್ನಶೆಟ್ಟಿ, ಹಣಮಂತ ಮಲ್ಕಾಪುರೆ, ಇಮ್ರಾನ್‌ ಖಾನ್‌, ಆನಂದ ಚಹ್ವಾಣ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಬೀದರ್‌ | ಯುವ ಸಂಸತ್‍ನಲ್ಲಿ ಮಹತ್ವದ ಚರ್ಚೆ

ಬೀದರ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶನಿವಾರ...

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...