ಕ್ರೀಡೆಯಲ್ಲಿ ಹೆಚ್ಚು ತೊಡಗಿಸಿಕೊಂಡರೆ ಮಾನಸಿಕ, ದೈಹಿಕ ಒತ್ತಡ ನಿವಾರಣೆ ಮಾಡಿಕೊಳ್ಳಲು ಸಾಧ್ಯವಾಗಲಿದೆ ಎಂದು ಜಿಲ್ಲಾ ಪ್ರಧಾನ ಸೆಷನ್ಸ್ ನ್ಯಾಯಾಧೀಶ ಮಾರುತಿ ಬಗಾಡೆ ಹೇಳಿದರು.
ನಗರದ ಕೃಷಿ ವಿಶ್ವ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ರಾಯಚೂರು ಜಿಲ್ಲಾ ವಕೀಲರ ಸಂಘದಿಂದ ಶನಿವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಕೀಲರ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ, ವಕೀಲರು ತಮ್ಮ ದೈನಂದಿನ ಕೆಲಸದ ಜೊತೆಗೆ ಕ್ರೀಡಾ ಮನೋಭಾವನೆ ಮೈಗೂಡಿಸಿಕೊಳ್ಳಬೇಕುʼ ಎಂದರು.
ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಹತ್ತಿಕಾಳು ಪ್ರಭು ಸಿದ್ದಪ್ಪ ಮಾತನಾಡಿ, ʼವಕೀಲರು ದಿನನಿತ್ಯ ನ್ಯಾಯಾಲಯದ ಕೆಲಸದ ಒತ್ತಡಲ್ಲಿರುತ್ತಾರೆ. ಆದರೆ ಇಲ್ಲಿ ಆಯೋಜಿಸಿರುವ ಕ್ರಿಕೆಟ್ ಪಂದ್ಯಾವಳಿಯಲ್ಲಿ ಎಲ್ಲರೂ ಭಾಗವಹಿಸುವ ಮೂಲಕ ತಮ್ಮಲ್ಲಿನ ಪ್ರತಿಭೆ ಅನಾವರಣ ಮಾಡುತ್ತಿರುವುದು ಶ್ಲಾಘನೀಯʼ ಎಂದರು.
ವಕೀಲರ ಸಂಘದ ಮುಖಂಡ ಎನ್. ಶಿವಶಂಕರ್ ಮಾತನಾಡಿ, ʼಪ್ರಥಮ ಬಾರಿಗೆ ವಕೀಲರಿಗೆ ಆಯೋಜಿಸಿದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಎಲ್ಲರೂ ಆಸಕ್ತಿಯಿಂದ ಪಾಲ್ಗೊಂಡಿದ್ದಾರೆ. ಸೋಲು–ಗೆಲುವು ಸಾಮಾನ್ಯ, ಎರಡೂ ಸಮಾನವಾಗಿ ಸ್ವೀಕರಿಸಬೇಕುʼ ಎಂದು ಸಲಹೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಅತಿಥಿ ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಆಗ್ರಹ; ಅನಿರ್ದಿಷ್ಟಾವಧಿ ಸತ್ಯಾಗ್ರಹ
ಕಾರ್ಯಕ್ರಮದಲ್ಲಿ ರಾಯಚೂರು ವಕೀಲರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ, ಸಂಘದ ಉಪಾಧ್ಯಕ್ಷ ನಜೀರ್ ಅಹ್ಮದ್, ಪದಾಧಿಕಾರಿಗಳಾದ ಹನುಮಂತಪ್ಪ ಮೇಟಿ, ಶ್ರೀಧರ್ ಎಲಿ, ಸೈಯದ್ ನವಾಜ್, ರಾಮು, ಅಶೋಕ, ಮಲ್ಲಿಕಾರ್ಜುನ ಗೋನಾಳ, ರವಿ ಪಾಟೀಲ್ ಸೇರಿದಂತೆ ಇತರರಿದ್ದರು.