ಹಳಿಯಾಳ ಸಮೀಪ ಪಿಕಪ್ ವಾಹನ ಮರಕ್ಕೆ ಡಿಕ್ಕಿ; 18 ಮಂದಿ ಗಾಯ, ಐವರ ಸ್ಥಿತಿ ಗಂಭೀರ

Date:

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಶಿವಪುರ ಗ್ರಾಮದ ಸಮೀಪ ಶನಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪಿಕಪ್ ವಾಹನ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 18 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಧಾರವಾಡ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

- Advertisement -

ಮಾಹಿತಿಯ ಪ್ರಕಾರ, ಮುಂಡವಾಡ ಗ್ರಾಮದ ಕೂಲಿ ಕಾರ್ಮಿಕರು ಕೃಷಿ ಕೆಲಸಕ್ಕಾಗಿ ಶಿವಪುರ ಗ್ರಾಮದತ್ತ ಟಾಟಾ ಎಸ್ ಪಿಕಪ್ ವಾಹನದಲ್ಲಿ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ವಾಹನದಲ್ಲಿದ್ದ ಮಹಿಳೆಯರು ಸೇರಿದಂತೆ ಎಲ್ಲ ಪ್ರಯಾಣಿಕರಿಗೆ ಗಾಯಗಳಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಈ ಸುದ್ದಿ ಓದಿದ್ದೀರಾ? ದಾಂಡೇಲಿ | ರೀಲ್ಸ್‌ಗಾಗಿ ಅಪಾಯಕಾರಿ ವಾಹನ ಚಾಲನೆ; ತೂಫಾನ್ ಕ್ರೂಸರ್ ಚಾಲಕನ ವಿರುದ್ಧ ಪ್ರಕರಣ ದಾಖಲು

ಅಪಘಾತದ ಬಳಿಕ ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ತಕ್ಷಣ ಹಳಿಯಾಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಗಂಭೀರವಾಗಿ ಗಾಯಗೊಂಡ ಐವರನ್ನು ಹೆಚ್ಚಿನ ಚಿಕಿತ್ಸೆಗೆ ಧಾರವಾಡ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಉಳಿದ ಗಾಯಾಳುಗಳಿಗೆ ಹಳಿಯಾಳ ತಾಲೂಕು ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಹಳಿಯಾಳ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅತಿವೇಗದಿಂದ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂಬ ಶಂಕೆ ವ್ಯಕ್ತವಾಗಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಅಪಘಾತದ ನಿಖರ ಕಾರಣ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದೇ ವೇಳೆ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ ಆರ್.ವಿ. ದೇಶಪಾಂಡೆ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ವೈದ್ಯರಿಂದ ಚಿಕಿತ್ಸೆಯ ಮಾಹಿತಿ ಪಡೆದು, ಗಾಯಾಳುಗಳಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಪಾಲಿಕೆ ಎದುರುಗಡೆ ಪ್ರತಿಭಟನೆ

ನಗರದ ವಾರ್ಡ್‌ ನಂ. 2ರ ಕೆ.ಕೆ. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ...

ಯಾದಗಿರಿ | ಪಂಚಾಯಿತಿ ಚುನಾವಣೆಗಳಲ್ಲೂ ಪರಿಶಿಷ್ಟ ಜಾತಿಗಳಿಗೆ ರಾಜಕೀಯ ಒಳಮೀಸಲಾತಿ ಕಲ್ಪಿಸಲು ಆಗ್ರಹ

ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪರಿಶಿಷ್ಟ ಜಾತಿಗಳನ್ನು ಪ್ರವರ್ಗ-ಎ, ಪ್ರವರ್ಗ-ಬಿ...

ಕಲಬುರಗಿ | ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹ

ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವುದು ಹಾಗೂ ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ...

ಕಲಬುರಗಿ | ಸನ್ನತ್ತಿ ಬ್ಯಾರೇಜ್ ಸಂತ್ರಸ್ತ ರೈತರಿಗೆ 13 ವರ್ಷವಾದರೂ ಪರಿಹಾರವಿಲ್ಲ!

ಸನ್ನತ್ತಿ ಬ್ರಿಡ್ಜ್ ಕಂ ಬ್ಯಾರೇಜ್ ಹಿನ್ನೀರಿನಿಂದ ಭೂಮಿ ಕಳೆದುಕೊಂಡ ಚಿತ್ತಾಪುರ ಹಾಗೂ...