ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ಮೋದಿ : ಸಿಎಂ ಸಿದ್ದರಾಮಯ್ಯ

Date:

Advertisements

ಪ್ರಧಾನಿ ನರೇಂದ್ರ ಮೋದಿಯವರು ಬಂದ ಬಳಿಕ ಹೆಚ್ಚು ಬೆಲೆ ಏರಿಕೆಯಾಗಿದೆ. ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ಮೋದಿ ಅವರೇ ಅನ್ನುವುದರಲ್ಲಿ ಅನುಮಾನವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಯಾದಗಿರಿ ನಗರದಲ್ಲಿ ಶನಿವಾರ ನಡೆದ ‘ಆರೋಗ್ಯ ಆವಿಷ್ಕಾರ’ ಕಾರ್ಯಕ್ರಮದಡಿ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಆರೋಗ್ಯ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

‘ವರ್ಷಕ್ಕೆ ₹5,000 ಕೋಟಿ ಕೆ.ಕೆ.ಆರ್‌.ಡಿ.ಬಿ ಗೆ ಕೊಡುವುದಾಗಿ ಚುನಾವಣೆ ವೇಳೆ ಭರವಸೆ ನೀಡಿದ್ದೆವು. ನಮ್ಮ ಭರವಸೆಯಂತೆ ಇಲ್ಲಿಯವರೆಗೂ ₹13,000 ಕೋಟಿ ಹಣ ನೀಡಿದ್ದೇವೆ. ಇಲ್ಲಿಯವರೆಗೂ ₹5,300 ಕೋಟಿ ಮೊತ್ತ ಖರ್ಚಾಗಿದ್ದು, ಹಲವು ಕಾಮಗಾರಿಗಳ ಫಲ ಜನರಿಗೆ ತಲುಪಿದೆ. ಕೆಕೆಆರ್‌ಡಿಬಿಗೆ ಕೊಡುವ ಈ ಅನುದಾನದ ಹೊರತಾಗಿ ಸರ್ಕಾರ ಈ ಭಾಗಕ್ಕೆ ಇಲಾಖಾವಾರು ಕಾರ್ಯಕ್ರಮಗಳಿಗಾಗಿ ಅನುದಾನ ನೀಡುತ್ತಲಿದೆ’ ಎಂದು ಹೇಳಿದರು.

Advertisements

‘ಡಿ.ಎಂ.ನಂಜುಂಡಪ್ಪ ಅವರ ವರದಿಯ ಆಶಯಗಳನ್ನು ನಮ್ಮ ಸರ್ಕಾರ ಈಡೇರಿಸುತ್ತಿದೆ. ಆರೋಗ್ಯ, ಶಿಕ್ಷಣ, ಉದ್ಯೋಗದಲ್ಲಿ ಕಲ್ಯಾಣ ಕರ್ನಾಟಕ ಪ್ರಗತಿ ಸಾಧಿಸುವ ಜೊತೆಗೆ ಮೂಲಭೂತ ಸೌಕರ್ಯಗಳ ಈಡೇರಿಕೆಗೆ ಹಣ ವಿನಿಯೋಗ ಮಾಡಲು ಸೂಚನೆ ನೀಡಿದ್ದೇನೆ. ಇದರ ಪ್ರಕಾರ ಅಕ್ಷರ ಆವಿಷ್ಕಾರ ನಡೆದು ಈಗ ₹440.63 ಕೋಟಿ ವೆಚ್ಚದ ಆರೋಗ್ಯ ಆವಿಷ್ಕಾರ ಕಾರ್ಯಕ್ರಮ ಉದ್ಘಾಟನೆಯಾಗಿದೆ’ ಎಂದರು.

’42 ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವ, ಹೊಸ ಆಸ್ಪತ್ರೆಗಳ ನಿರ್ಮಾಣ ಆಗುತ್ತಿದೆ. ಈ ಭಾಗದ ಆರೋಗ್ಯ ಸವಲತ್ತು ವಿಸ್ತರಿಸಲು ಒಟ್ಟು ₹847 ಕೋಟಿ ಕೊಡಲು ಸರ್ಕಾರ ಯೋಜನೆ ರೂಪಿಸಿದೆ. ರಾಜ್ಯದಲ್ಲಿ ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿಯ ಎಲ್ಲಾ ಸುಳ್ಳುಗಳಿಗೆ ಜನರೇ ಉತ್ತರ ನೀಡುತ್ತಿದ್ದಾರೆ. ಏಕೆಂದರೆ ನಾವು ಅಭಿವೃದ್ಧಿಗೆ ಕೊಟ್ಟಿರುವ ಹಣ ರಾಜ್ಯದ ಜನರ ಮನೆ ಬಾಗಿಲಿಗೆ ತಲುಪಿದೆ’ ಎಂದರು.

‘ಸುಳ್ಳೇ ಬಿಜೆಪಿಯ ಮನೆ ದೇವರು. ಬಿಜೆಪಿಗೆ ಅಧಿಕಾರ ಇದ್ದಾಗಲೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾಡಲಿಲ್ಲ. ಬಿಜೆಪಿ 371(ಜೆ) ಗೆ ವಿರುದ್ಧವಿತ್ತು. ಉಪ ಪ್ರಧಾನಿ ಆಗಿದ್ದ ಎಲ್.ಕೆ.ಅಡ್ವಾಣಿ ಅವರು 371(ಜೆ) ಜಾರಿ ಮಾಡುವುದಿಲ್ಲ ಎಂದು ಪತ್ರ ಬರೆದಿದ್ದರು. ಕೊನೆಗೆ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಖರ್ಗೆ, ಧರಂ‌ಸಿಂಗ್ ಅವರ ಹೋರಾಟಕ್ಕೆ ಮಾನ್ಯತೆ ನೀಡಿ 371(ಜೆ) ಜಾರಿ ಮಾಡಿದರು. ಅವರ ಶ್ರಮ‌ ಮತ್ತು ಹೋರಾಟ 371ಜೆ ಜಾರಿ ಹಿಂದೆ ಕೆಲಸ ಮಾಡಿದೆ’ ಎಂದರು.

ಇದನ್ನೂ ಓದಿ : ಯಾದಗಿರಿ: ಕಲ್ಯಾಣ ಕರ್ನಾಟಕ ಆರೋಗ್ಯ ಸುಧಾರಣೆಗೆ ಸರ್ಕಾರ ಬದ್ಧ : ಸಿಎಂ ಸಿದ್ದರಾಮಯ್ಯ

‘ಬಸವಣ್ಣನವರ ಆಶಯದ ಪ್ರಕಾರ ನುಡಿದಂತೆ ನಡೆಯುವರು. ನಾವು ಚುನಾವಣೆಯಲ್ಲಿ ಕೊಟ್ಟ ಭರವಸೆಗಳಲ್ಲಿ ಐದು ಗ್ಯಾರಂಟಿಗಳು ಸೇರಿ 200 ಭರವಸೆಗಳು ಈಡೇರಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಎಲ್ಲಾ ಭರವಸೆಗಳನ್ನೂ ಈಡೇರಿಸಿ ಸಮಗ್ರ ಕರ್ನಾಟಕದ ಅಭಿವೃದ್ಧಿ ಸಾಧಿಸಿ ತೋರಿಸುತ್ತೇವೆ. ಜಿಎಸ್‌ಟಿ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿರುವುದು ಆರ್ಥಿಕವಾಗಿ ರಾಜ್ಯ ಪ್ರಗತಿ ಪಥದಲ್ಲಿರುವುದಕ್ಕೆ ಸಾಕ್ಷಿ. ಕಲ್ಯಾಣ ಕರ್ನಾಟಕದ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೂ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X