ಚಿಕ್ಕಬಳ್ಳಾಪುರ | 2024ರಲ್ಲಿ 190 ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

Date:

Advertisements

ನಿತ್ಯ 5 ಶಾಲೆಗಳಲ್ಲಿ ಕಾನೂನು ಅರಿವು ಕಾರ್ಯಕ್ರಮ | ಕಾನೂನು ಸೇವಾ ಪ್ರಾಧಿಕಾರದ ಮಾದರಿ ನಡೆ

ಜಿಲ್ಲೆಯ 2024ರಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ 190 ಲೈಂಗಿಕ ದೌರ್ಜನ್ಯ ಪ್ರಕರಣಗಳು ಹಾಗೂ 2025ರ ಜನವರಿಯಲ್ಲಿ 9 ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಮಕ್ಕಳಲ್ಲಿ ಕಾನೂನಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಪ್ರತಿದಿನ ಆಯ್ದ 5 ಶಾಲೆಗಳಿಗೆ ಭೇಟಿ ನೀಡಿ ಕಾನೂನು ಅರಿವು ಮೂಡಿಸಲಾಗುತ್ತಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಬಿ.ಶಿಲ್ಪ ತಿಳಿಸಿದರು.

ಚಿಕ್ಕಬಳ್ಳಾಪುರ ಸೆಂಟ್ ಜೋಸೇಫ್ ಪಿಯು ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿಕ್ಷಣ ಇಲಾಖೆ, ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ “ಪೋಕ್ಸೋ ಕಾಯ್ದೆ, ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ, ಮಕ್ಕಳ ಸಂರಕ್ಷಣಾ ಕಾಯ್ದೆ 2012, ಬಾಲ್ಯ ವಿವಾಹ ನಿಷೇಧ ಕಾನೂನುಗಳ ಅರಿವು ನೆರವು ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಹೆಣ್ಣು ಅಥವಾ ಗಂಡು 18 ವರ್ಷದೊಳಗಿನ ಮಕ್ಕಳನ್ನು ನಾವು ಮಕ್ಕಳೆಂದೆ ಪರಿಗಣಿಸುತ್ತೇವೆ. ಮಕ್ಕಳ ಲೈಂಗಿಕ ಚಿತ್ರಗಳನ್ನು, ದೃಶ್ಯಗಳನ್ನು ಇಟ್ಟುಕೊಳ್ಳುವುದು, ಮಕ್ಕಳನ್ನು ಲೈಂಗಿಕ ದೃಷ್ಟಿಯಿಂದ ನೋಡುವುದು, ಅಶ್ಲೀಲ ಚಿತ್ರಗಳನ್ನು, ವಾಕ್ಯಗಳನ್ನು ಮಕ್ಕಳಿಗೆ ತೋರಿಸುವುದು, ಅವರೊಂದಿಗೆ ಅಶ್ಲೀಲವಾಗಿ ಮಾತನಾಡುವುದು ಅಪರಾಧವಾಗುತ್ತದೆ ಹಾಗೂ ರಸ್ತೆ ಬದಿಯಲ್ಲಿ ಹೋಗುವ ಸಂದರ್ಭದಲ್ಲಿ ಯಾರಾದರೂ ಯಾವುದೇ ವ್ಯಕ್ತಿಯನ್ನು ರೇಗಿಸುವುದು, ಕಾಟ ಕೊಡುವುದು, ಹಿಂದೆ ಸುತ್ತಾಡುವುದು ಕಂಡುಬಂದಲ್ಲಿ ಪೋಷಕರಿಗೆ ಅಥವಾ ಚೈಲ್ಡ್ ಹೆಲ್ಪ್ ಲೈನ್ 1098ಗೆ ತಕ್ಷಣ ಕರೆ ಮಾಡಿ ಮಾಹಿತಿ ತಿಳಿಸಬೇಕು. ಆಗ ತಕ್ಷಣ ಪ್ರಾಧಿಕಾರಗಳು ತುರ್ತು ಕ್ರಮಕ್ಕೆ ಮುಂದಾಗಿ ತಪ್ಪಿತಸ್ಥರಿಗೆ ಶಿಕ್ಷೆ ನೀಡುತ್ತವೆ ಎಂದು ಹೇಳಿದರು.

Advertisements

12, 13, 14ನೇ ವಯಸ್ಸಿನಲ್ಲಿರುವ ಹೆಣ್ಣು ಮಕ್ಕಳು ಗರ್ಭಿಣಿಯಾಗಿರುವುದು, ಅಪ್ರಾಪ್ತ ಗರ್ಭಿಣಿಯರು ಪ್ರಾಣ ಕಳೆದುಕೊಳ್ಳುವುದು ಇತ್ತೀಚಿಗೆ ಹೆಚ್ಚಾಗಿ ಕಂಡು ಬರುತ್ತಿದೆ. ಹದಿಹರೆಯದ ವಯಸ್ಸಿನಲ್ಲಿ ಅಕ್ರಮ ಚಟುವಟಿಕೆಗಳ ಕಡೆ ಗಮನ ಹರಿಸಬಾರದು. ಪ್ರೀತಿ ಪ್ರೇಮಗಳ ಮೇಲೆ ಆಕರ್ಷಿಸುವುದನ್ನು ಬಿಟ್ಟು ನಿಮ್ಮ ಶೈಕ್ಷಣಿಕ ಗುರಿಯ ಕಡೆಗೆ ಸಾಗಬೇಕು. ಸಂಯಮ ಕಾಪಾಡಿಕೊಳ್ಳಬೇಕು. ಈ ವಯಸ್ಸಿನಲ್ಲಿ ಶಿಕ್ಷಣದ ಬಗ್ಗೆ ಮಾತ್ರ ನಿಗವಹಿಸುವುದು ನಿಮ್ಮ ಭವಿಷ್ಯಕ್ಕೆ ಉತ್ತಮ. ಎಲ್ಲಾ ಹೆಣ್ಣು ಮಕ್ಕಳಿಗೂ ಜೀವನದಲ್ಲಿ ಮದುವೆ, ಮಕ್ಕಳು ಇತ್ಯಾದಿ ಆಗುವುದು ಸಹಜ. ಆದರೆ ಹದಿಹರೆಯದ ವಯಸ್ಸಿನಲ್ಲಿ ಪ್ರೀತಿ ಪ್ರೇಮ ಮಾಡುವುದನ್ನು ಶೈಕ್ಷಣಿಕ ಸಾಧನೆವರೆಗೂ ಮುಂದೂಡುವ ಮೂಲಕ ನಿಮ್ಮ ಜೀವನವನ್ನು ಸುಂದರವಾಗಿ ರೂಪಿಸಿಕೊಳುವ ಕಡೆ ನಿಮ್ಮ ಹೆಜ್ಜೆ ಹಾಕಬೇಕು. ತಮ್ಮ ಪೋಷಕರಿಗೆ ಉತ್ತಮ ಹೆಸರು ತರಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ವಕೀಲರ ಸಂಘ ಅಧ್ಯಕ್ಷ ಕೆ.ವಿ ಅಭಿಲಾಷ್ ಮಾತನಾಡಿ, ಬಾಲ್ಯ ವಿವಾಹವು ಮಕ್ಕಳ ರಕ್ಷಣಾ ಕಾಯ್ದೆಯ ಉಲ್ಲಂಘನೆಯಾಗಿದ್ದು, ಈ ಅಪಾಯಕಾರಿ ಪದ್ದತಿಯಿಂದ ತಾಯಂದಿರ ಮರಣ, ಶಿಶು ಮರಣ, ಅಪೌಷ್ಟಿಕತೆ ಹೆಚ್ಚಾಗುತ್ತಿದೆ. ಅಲ್ಲದೇ ಮಕ್ಕಳ ಭೌದ್ದಿಕ ಹಾಗೂ ಮಾನಸಿಕ ಸಾಮರ್ಥ್ಯ ಕುಂಠಿತಗೊಳ್ಳುತ್ತದೆ. ವರನಿಗೆ 21 ವರ್ಷ ಹಾಗೂ ವಧುವಿಗೆ 18 ವರ್ಷಗಳು ಆಗದಿದ್ದರೆ ಬಾಲ್ಯ ವಿವಾಹ ಎಂದು ಪರಿಗಣಿಸಲಾಗುವುದು. ಬಾಲ್ಯ ವಿವಾಹ ನಡೆಸುವ ಅಥವಾ ನಿರ್ದೇಶಿಸುವ ವ್ಯಕ್ತಿಗೂ ಶಿಕ್ಷೆ ವಿಧಿಸಲಾಗುತ್ತದೆ ಎಂದು ಮಕ್ಕಳಲ್ಲಿ ಜಾಗೃತಿ ಮೂಡಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮುನಿವೆಂಕಟರಾಮಚಾರಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ 18 ವರ್ಷದೊಳಗಿನ ಮಕ್ಕಳ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯಗಳು, ಕಿರುಕುಳಗಳು ನಡೆಯುತ್ತಿದ್ದು, ಈ ರೀತಿಯ ದುರ್ಘಟನೆಗಳನ್ನು ತಡೆಗಟ್ಟಲು ಹಾಗೂ ಮಕ್ಕಳಿಗೆ ರಕ್ಷಣೆ, ಭದ್ರತೆಗಳ ಬಗ್ಗೆ ಅರಿವು ಮೂಡಿಸಬೇಕು, ಪ್ರತಿ ಶಾಲೆಯಲ್ಲೂ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅನ್ನು ಗೋಡೆ ಬರಹದಲ್ಲಿ ಬರೆಯುವುದು ಮತ್ತು ಈ ಬಗ್ಗೆ ವ್ಯಾಪಕ ಪ್ರಚಾರ ನಡೆಸುವುದು ಮುಖ್ಯ. ಹದಿಹರೆಯದ ಮಕ್ಕಳು ಮಾನಸಿಕವಾಗಿ ತೊಂದರೆಗಳಿಗೆ ಒಳಗಾಗುವುದನ್ನು ತಪ್ಪಿಸಲು ಪೋಷಕರು ಸಹ ಮಕ್ಕಳ ಸಮಸ್ಯೆಗಳನ್ನು ಸಂಯಮದಿಂದ ನಿರಂತರವಾಗಿ ಕೇಳುತ್ತಿರಬೇಕು. ಪೋಕ್ಸೋ ಕಾಯಿದೆ, ಬಾಲ್ಯ ವಿವಾಹದ ಅಪಾಯಗಳ ಬಗ್ಗೆ ವಿವರಿಸಿ ತಮ್ಮ ಮಕ್ಕಳ ಮೇಲೆ ಗಮನ ಹರಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಪಾಠ ಕಲಿಯದ ‘ರೈಲ್ವೆ ಇಲಾಖೆ’

ಈ ಸಂಧರ್ಭದಲ್ಲಿ ಸೆಂಟ್ ಜೋಸೇಫ್ ಫ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಅಮ್ರಿತ ಅರುವಿ ಜೋಸೇಫ್, ಶಿಕ್ಷಕರು, ಹಾಗೂ ಮಕ್ಕಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X