ಪೋಕ್ಸೋ ಪ್ರಕರಣ | ಬಾಲಕಿಗೆ ವಂಚಿಸಿದ್ದ ಆರೋಪಿ ಖುಲಾಸೆ ಆದೇಶ ರದ್ದು

Date:

ಸೋದರ ಸಂಬಂಧಿಯಾದ ಅಪ್ರಾಪ್ತೆಯ ಮೇಲೆಯೇ ಅತ್ಯಾಚಾರ ಎಸಗಿದ್ದ ಮತ್ತು ವಂಚಿಸಿದ್ದ ಪೋಕ್ಸೋ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ಆರೋಪಿಯನ್ನು ಖುಲಾಸೆಗೊಳಿಸಿತ್ತು. ಖುಲಾಸೆ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ.

2008ರಲ್ಲಿ ಕೊಡಗು ಜಿಲ್ಲೆಯ ವಿಜಯ್ ಎಂಬಾತ 15 ವರ್ಷದ ಅಪ್ರಾಪ್ತ ಬಾಲಕಿಗೆ ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಬಂಧ ಬೆಳೆಸಿದ್ದ. ಆಕೆ ಗರ್ಭಿಣಿಯಾದ ಬಳಿಕ, ಆತನ ಕೃತ್ಯ ಬೆಳಕಿಗೆ ಬಂದಿತ್ತು. ಗ್ರಾಮಸ್ಥರು ಪಂಚಾಯತಿ ನಡೆಸಿದಾಗ, ಆಕೆಗೆ ಗರ್ಭಪಾತ ಮಾಡಿಸಿದರೆ ಮದುವೆಯಾಗುತ್ತೇನೆ ಎಂದು ಹೇಳಿದ್ದ. ಆದರೆ, ಮಾರನೇ ದಿನವೇ ನಾಪತ್ತೆಯಾಗಿದ್ದ.

ಸಂತ್ರಸ್ತ ಬಾಲಕಿಯ ಪೋಷಕರು ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರ ಮೇಲೆ ಆರೋಪಿ ವಿಜಯ್ ವಿರುದ್ಧ ಪೋಕ್ಸೋ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 376 ಮತ್ತು 420ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?: ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ಹೊರಟಿದ್ದೀರಾ?: ಡಿಕೆ ಶಿವಕುಮಾರ್ ತರಾಟೆ

ಪ್ರಕರಣದ ತನಿಖೆ ನಡೆಸಿದ ಕೊಡಗಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ, “ಸಂತ್ರಸ್ತೆಯ ವಯಸ್ಸು ಸಾಬೀತಾಗಿಲ್ಲ. ಆಕೆ ಗರ್ಭಿಣಿಯಾಗಲು ಆರೋಪಿಯೇ ಕಾರಣವೆಂದು ಸಾಬೀತುಪಡಿಸಲು ‘ವಂಶವಾಹಿ ಪರೀಕ್ಷಾ ವರದಿ’ಯನ್ನು ಕೋರ್ಟ್‌ ಸಲ್ಲಿಸಿಲ್ಲ” ಎಂದು ಹೇಳಿದ್ದು, 2016ರಲ್ಲಿ ಆರೋಪಿಯನ್ನು ಪ್ರಕರಣದಿಂದ ಖುಲಾಸೆಗೊಳಿಸಿತ್ತು.

ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಂತ್ರಸ್ತೆ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಮೇಲ್ಮನವಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ಖಲಾಸೆ ಆದೇಶವನ್ನು ರದ್ದು ಮಾಡಿದೆ. “ಸಂತ್ರಸ್ತೆಯೊಂದಿಗೆ ಆರೋಪಿ ದೈಹಿಕ ಸಂಬಂಧ ಬೆಳೆಸಿ, ವಂಚಿಸಿರುವುದನ್ನು ಗಮನಿಸುವಲ್ಲಿ ಸೆಷನ್ ಕೋರ್ಟ್‌ ವಿಫಲವಾಗಿದೆ. ಆರೋಪಿಯನ್ನು ಖುಲಾಸೆ ಮಾಡಿರುವ ಆದೇಶವು ನ್ಯಾಯದಾನಕ್ಕೆ ಮಾರಕವಾಗಿದೆ” ಎಂದು ಅಭಿಪ್ರಾಯಪಟ್ಟಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಬೀದಿ ಬದಿ ವ್ಯಾಪಾರಿಗಳ ಮೇಲೆ ಅಧಿಕಾರಿಗಳ ದರ್ಪ; ಬದುಕು ಬೀದಿ ಪಾಲು

ಶಿಲ್ಪಕಲೆಗಳ ತವರೂರು, ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿರುವ, ಚನ್ನಕೇಶವನ ನಾಡು ವಗೈರೆ...

ಹಾಸನ | 3ನೇ ಅವಧಿಗೆ ಮೋದಿ ಪ್ರಧಾನಿ; 12 ಕಿ.ಮೀ ದೀಡು ನಮಸ್ಕಾರ ಹಾಕಿ ಹರಕೆ ತೀರಿಸಿದ ಮೋದಿ ಭಕ್ತ

ಮೋದಿ 3ನೇ ಬಾರಿಗೆ ಪ್ರಧಾನಿಯಗಬೇಕೆಂದು ಹರಕೆ ಹೊತ್ತಿದ್ದ ಮೋದಿ ಅಭಿಯಾನಿಯೊಬ್ಬ, 12...

ಜೂನ್‌ 16ರಂದು ಬೆಳಗ್ಗೆ 6 ಗಂಟೆಯಿಂದಲೇ ನಮ್ಮ ಮೆಟ್ರೋ ಆರಂಭ

ಜೂನ್ 16ರಂದು ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ (ಯುಪಿಎಸ್‌ಸಿ) ನಡೆಯುವ ಕಾರಣ...

ವಂಚನೆ, ಜೀವ ಬೆದರಿಕೆ ಆರೋಪ: ಕೇಂದ್ರ ಸಚಿವ ಸೋಮಣ್ಣ ಪುತ್ರನ ವಿರುದ್ಧ ಎಫ್‌ಐಆ‌ರ್

ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿ, ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡ...