ಪೋಕ್ಸೋ ಪ್ರಕರಣ | ಯಡಿಯೂರಪ್ಪಗೆ ಸಮನ್ಸ್ ಜಾರಿ ಮಾಡಿದ ಕೋರ್ಟ್‌

Date:

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಮೇಲಿನ ವಿಚಾರಣೆಗೆ ಬೆಂಗಳೂರಿನ 1ನೇ ತ್ವರಿತ ನ್ಯಾಯಾಲಯ ಸಮ್ಮತಿ ನೀಡಿದೆ. ವಿಚಾರಣೆಗೆ ಹಾಜರಾಗುವಂತೆ ಆರೋಪಿ ಯಡಿಯೂರಪ್ಪಗೆ ಸಮನ್ಸ್‌ ಜಾರಿ ಮಾಡಿದೆ.

- Advertisement -

ಅತ್ಯಾಚಾರಕ್ಕೆ ಒಳಗಾಗಿದ್ದ ಸಂತ್ರಸ್ತೆ ಮತ್ತು ಆಕೆಯ ತಾಯಿ ನ್ಯಾಯ ಪಡೆಯಲು ಸಹಾಯ ಮಾಡುವಂತೆ ಮನವಿ ಮಾಡಲು ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ, ಸಂತ್ರಸ್ತ ಬಾಲಕಿಯನ್ನು ಪ್ರತ್ಯೇಕ ಕೊಠಡಿಗೆ ಕರೆದೊಯ್ದಿದ್ದ ಯಡಿಯೂರಪ್ಪ, ಆಕೆಯನ್ನು ಅಸಭ್ಯವಾಗಿ ಸ್ಪರ್ಶಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಬಳಿಕ, ಸಂತ್ರಸ್ತೆಯ ತಾಯಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ದೂರು ಸಲ್ಲಿಸಿದ್ದರು. ತನಿಖೆ ವೇಳೆ, ಸಂತ್ರಸ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆಯೋ ಇಲ್ಲವೋ ಎಂಬುದನ್ನು ಪರೀಕ್ಷಿಸಲು ಸಂತ್ರಸ್ತೆಯ ಖಾಸಗಿ ಭಾಗ ಸ್ಪರ್ಶಿಸಿದ್ದೆ ಎಂದು ಯಡಿಯೂರಪ್ಪ ಒಪ್ಪಿಕೊಂಡಿದ್ದರು ಎಂದು ತಿಳಿದುಬಂದಿದೆ.

ತನಿಖೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ ಜಾರ್ಜ್‌ಶೀಟ್‌ ಸಲ್ಲಿಸಿದ್ದರು. ಈ ನಡುವೆ, ತಮ್ಮ ವಿರುದ್ಧ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಪ್ರಕರಣ ರದ್ದು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದ ಕೋರ್ಟ್‌, ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

ಇದೀಗ, ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಬೆಂಗಳೂರಿನ 1ನೇ ತ್ವರಿತ ನ್ಯಾಯಲಯವು ಯಡಿಯೂರಪ್ಪಗೆ ಸಮನ್ಸ್‌ ಜಾರಿ ಮಾಡಿದೆ. ಮಾರ್ಚ್‌ 15ರಂದು ಖುದ್ದಾಗಿ ನ್ಯಾಯಾಲಯದ ಎದುರು ಹಾಜರಾಗುವಂತೆ ಸೂಚನೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...