ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮಂಕಿ ಠಾಣೆಯ ಪಿಎಸ್‌ಐ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Date:

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣೆಯಲ್ಲಿ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಭಿನಂದನ್ ಗೌಡ ಅವರು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿ ಅವರನ್ನು ಬಂಧಿಸಲಾಗಿದೆ.

- Advertisement -

ಈ ಘಟನೆ ಜಿಲ್ಲೆಯಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಮಾಹಿತಿ ಪ್ರಕಾರ, ಜಿಲ್ಲೆಯ ಮತ್ತೊಂದು ತಾಲೂಕಿನ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಭಟ್ಕಳಕ್ಕೆ ಕರೆತಂದು ನಗರದ ಖಾಸಗಿ ಲಾಡ್ಜ್‌ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಈ ಸುದ್ದಿ ಓದಿದ್ದೀರಾ? ಅಂಕೋಲಾ | ಸಚಿವ ಯು.ಟಿ. ಖಾದರ್ ಅವರ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ; ಯುವಕನಿಗೆ ಗಂಭೀರ ಗಾಯ

ಸಂತ್ರಸ್ತೆಯ ಕುಟುಂಬದವರು ನೀಡಿದ ದೂರಿನ ಮೇರೆಗೆ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ. ಆರೋಪಿ ಅಭಿನಂದನ್ ಗೌಡ ಅವರು ರಾಮನಗರ ಜಿಲ್ಲೆಯ ಕನಕಪುರ ಮೂಲದವರಾಗಿದ್ದು, ಕೆಲ ತಿಂಗಳ ಹಿಂದೆ ಮಂಕಿ ಪೊಲೀಸ್ ಠಾಣೆಗೆ ಕಾನೂನು ಮತ್ತು ಸುವ್ಯವಸ್ಥೆ (L&O) ವಿಭಾಗದ ಪಿಎಸ್‌ಐ ಆಗಿ ವರ್ಗಾವಣೆಯಾಗಿದ್ದರು.

ಭಟ್ಕಳದ ಮುರಿನಕಟ್ಟೆ ಪ್ರದೇಶದಲ್ಲಿ ನಡೆದಿದ್ದ ವಿವಾದದ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರಿಗೆ ಖಾಸಗಿ ಲಾಡ್ಜ್‌ನಲ್ಲಿ ವಸತಿ ವ್ಯವಸ್ಥೆ ಮಾಡಲಾಗಿತ್ತು. ಇದೇ ಅವಧಿಯಲ್ಲಿ ಘಟನೆ ನಡೆದಿರುವ ಆರೋಪ ಕೇಳಿಬಂದಿದ್ದು, ತನಿಖೆ ವೇಳೆ ಲಭ್ಯವಾದ ಪ್ರಾಥಮಿಕ ಮಾಹಿತಿ ಹಾಗೂ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಭಟ್ಕಳ ನಗರ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಬಳಿಕ ಬಂಧಿಸಿದ್ದಾರೆ.

ಸಾರ್ವಜನಿಕರ ಜೀವ, ಆಸ್ತಿ ಮತ್ತು ಗೌರವದ ರಕ್ಷಣೆಯ ಹೊಣೆ ಹೊತ್ತಿರುವ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧವೇ ಇಂತಹ ಗಂಭೀರ ಆರೋಪ ಕೇಳಿಬಂದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂಬ ಆಗ್ರಹವೂ ಕೇಳಿಬರುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮರಗಳೇ ಇಲ್ಲದ ಜಾಗಕ್ಕೆ ಅರಣ್ಯ ಇಲಾಖೆಯ ಆಕ್ಷೇಪ; ಸಾರ್ವಜನಿಕರ ಆಕ್ರೋಶ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಕೇನೆಕುಂಜದ ಸರಕಾರಿ ಜಮೀನಿನಲ್ಲಿ...

ರಾಯಚೂರು | ಬರ ಪರಿಹಾರ ಸಮೀಕ್ಷೆ: ಪಾಟ್ನಾದ ಭತ್ತದ ಅಧಿಕಾರಿ ಭೇಟಿ

ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಾನಸಿಂಗ್ ಅವರ ನೇತೃತ್ವದ ಅಧಿಕಾರಿಗಳ...

161 ಕಾಮಗಾರಿಗಳಿಗೆ ಶಂಕುಸ್ಥಾಪನೆ-ಉದ್ಘಾಟನೆ; ಜನಕಲ್ಯಾಣವೇ ಸರ್ಕಾರದ ಸಂಕಲ್ಪ: ಸಿದ್ದರಾಮಯ್ಯ

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡಲಾಗಿದ್ದು, ದಾಸನೂರು...

ಸಾಗರ | ತಾಲೂಕು ಮಟ್ಟದ ಪ್ರಜಾಸೇವೆ ಸಭೆ; 500ಕ್ಕೂ ಹೆಚ್ಚು ಅರ್ಜಿಗಳ ಸ್ವೀಕಾರ

ಸಾಗರ ತಾಲೂಕಿನಲ್ಲಿ ಮನೆ ಬಾಗಿಲಿಗೆ ಬಂತು ಸರ್ಕಾರ–ಸೇವೆಗೆ ಇರಲಿದೆ ಸಹಕಾರ ಎಂಬ...