ಕೊಡಗು | ಕವಿತೆಗೂ ಸಮಾಜವನ್ನು ತಿದ್ದುವ ಶಕ್ತಿ ಇದೆ: ಮಾಜಿ ಸ್ಪೀಕರ್ ಬೋಪಯ್ಯ

Date:

ಕವಿತೆಗೂ ಸಮಾಜವನ್ನು ತಿದ್ದುವ ಶಕ್ತಿ ಇದೆ. ಪತ್ರಕರ್ತರು ಸಾಹಿತ್ಯ ಕ್ಷೇತ್ರದಲ್ಲಿ ಮುಂದುವರಿಯುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ವಿಧಾನಸಭೆ ಮಾಜಿ ಸಭಾಧ್ಯಕ್ಷ ಕೆ.ಜಿ ಬೋಪಯ್ಯ ಹೇಳಿದ್ದಾರೆ.

ಗೋಣಿಕೊಪ್ಪದ ಕಾವೇರಿ ಕಾಲೇಜಿನಲ್ಲಿ ಕೊಡಗು ಪ್ರೆಸ್‌ಕ್ಲಬ್ ಮತ್ತು ಪತ್ರಕರ್ತರ ಸಂಘ ಯೋಜಿಸಿದ್ದ, ಪತ್ರಕರ್ತ ಕೆ.ಬಿ ಜಗದೀಶ್ ಜೋಡುಬೀಟಿ ಅವರ ‘ಅಪ್ಪನ ಗೋರಿಯಲ್ಲಿ ಕನಸುಗಳ ಬಿಕ್ಕಳಿಕೆ’ ಕವನ ಸಂಕಲನ ಜನಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಪುಸ್ತಕಗಳು ಸಮಾಜದ ಆಗು-ಹೋಗುಗಳನ್ನು ಬಿಂಬಿಸುವ ಕಾರ್ಯ ಮಾಡುತ್ತವೆ. ಕವನಗಳು ಕೂಡ ಸಮಾಜವನ್ನು ತಿದ್ದುವಷ್ಟು ಶಕ್ತಿ ಹೊಂದಿರುತ್ತದೆ. ಪತ್ರಕರ್ತರು ಸಾಹಿತ್ಯ ಕ್ಷೇತ್ರದಲ್ಲಿ ಮುಂದುವರಿಯುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರ ಕಾರ್ಯ ಮೆಚ್ಚುವಂತದ್ದಾಗಿದೆ” ಎಂದು ಅವರು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕವಿ ಟಿ ಸತೀಶ್ ಜವರೇಗೌಡ ಮಾತನಾಡಿ, “ಕನ್ನಡ ಸಾಹಿತ್ಯ ಪರಂಪರೆ ಗಟ್ಟಿಯಾಗಿ ತಳವೂರಲು ಕಾವ್ಯಗಳ ಪಾತ್ರ ದೊಡ್ಡದು. ಚುಟುಕು, ಹನಿಗವನಗಳ ಮೂಲಕ ಕಾವ್ಯ ಸಾಹಿತ್ಯಗಳು ಹುಟ್ಟಿಕೊಳ್ಳುವುದರಿಂದ ಮಹಾ ಕಾವ್ಯಗಳು ಸಾಹಿತ್ಯ ಪರಂಪರೆ ರಕ್ಷಣೆಯ ಭಾಗವಾಗಿದೆ. ಕಾವ್ಯ ಪರಂಪರೆ ಬತ್ತಲು ಅವಕಾಶ ನೀಡುತ್ತಿಲ್ಲ. ಇದರಿಂದಾಗಿ ಪ್ರತೀ ವರ್ಷ ಬಿಡುಗಡೆಯಾಗುವ ಸುಮಾರು 3 ಸಾವಿರ ಪುಸ್ತಕಗಳಲ್ಲಿ ಕಾವ್ಯಗಳೇ ಸಿಂಹಪಾಲು ಹೊಂದಿದೆ. ಕಾವ್ಯ ಪ್ರಕಾಶನಗಳು ಕೂಡ ಜನಪ್ರಿಯಗೊಳ್ಳುತ್ತಿದೆ” ಎಂದರು.

ಪ್ರೆಸ್‌ಕ್ಲಬ್‌ ಬೆಳ್ಳಿಮಹೋತ್ಸವ ಆಚರಣಾ ಸಮಿತಿ ಸದಸ್ಯ ಜಿ. ರಾಜೇಂದ್ರ ಮಾತನಾಡಿ, “ಧನಾತ್ಮಕ ಭಾವನೆಗಳು ಕವನಗಳ ರೂಪದಲ್ಲಿ ಮೂಡಿಬರುವುದರಿಂದ ಸಮಾಜಕ್ಕೆ ಸಾಕಷ್ಟು ಬೆಳವಣಿಗೆಗೆ ಅವಕಾಶ ನೀಡಿದಂತಾಗುತ್ತದೆ. ಅನುಭವ ಹಂಚಿಕೊಳ್ಳಬೇಕೆಂಬ ಅಭಿಪ್ರಾಯಗಳಿದ್ದಾಗ ಉತ್ತಮ ಕವನಗಳು ಮೂಡಿಬರಲಿದೆ. ಪ್ರಕೃತಿಗೆ ಪೂರಕ ಕವನಗಳು ಸಾಮಾಜಿಕ ಕಳಕಳಿಯಾಗಿ ರೂಪುಗೊಳ್ಳಬೇಕು” ಎಂದರು.

ಸಾಹಿತಿ ಸೋಮೆಯಂಡ ಕೌಸಲ್ಯ ಸತೀಶ್ ಪುಸ್ತಕದ ಕುರಿತು ಮಾತನಾಡಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ಕೊಡಗು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ, ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ, ಕಾವೇರಿ ಎಜುಕೇಷನ್ ಸೊಸೈಟಿ ಕಾರ್ಯದರ್ಶಿ ಕುಲ್ಲಚಂಡ ಬೋಪಣ್ಣ, ಕವಿ ಜಗದೀಶ್ ಜೋಡುಬೀಟಿ ಇದ್ದರು.
ಕಲಾವಿದೆ ಪುತ್ತಾಮನೆ ವಿದ್ಯಾ ಜಗದೀಶ್ ಪ್ರಾರ್ಥಿಸಿದರು. ಕಿಶೋರ್ ರೈ ಕತ್ತಲೆಕಾಡು ನಿರೂಪಿಸಿದರು. ಚನ್ನನಾಯಕ್, ಮಂಡೇಡ ಅಶೋಕ್, ದರ್ಶನ್ ದೇವಯ್ಯ ಅತಿಥಿಗಳ ಪರಿಚಯ ಮಾಡಿದರು. ಸಿಂಗಿ ಸತೀಶ್ ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ...

ಗೈರು ಹಾಜರಾದ ಮತಗಟ್ಟೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ: ಬಿಬಿಎಂಪಿ ಮುಖ್ಯ ಆಯುಕ್ತ

ಲೋಕಸಭಾ ಚುನಾವಣೆ ಹಿನ್ನೆಲೆ, ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕ್ಕೊಂಡಿರುವ ತರಬೇತಿಗೆ ಗೈರು ಹಾಜರಾದವರ...

ರಾಯಚೂರು | ಎಸ್‌ಯುಸಿಐ ಅಭ್ಯರ್ಥಿ ರಾಮಲಿಂಗಪ್ಪ ನಾಮಪತ್ರ ಸಲ್ಲಿಕೆ

ರಾಯಚೂರು-ಯಾದಗಿರಿ ಒಳಗೊಂಡ ರಾಯಚೂರು ಲೋಕಸಭಾ (ಪ.ಪಂ) ಕ್ಷೇತ್ರದ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ...

ಗದಗ | ತಾಲೂಕು ಆಡಳಿತದಿಂದ ‘ಮೇವು ಬ್ಯಾಂಕ್’ ಆರಂಭ; ಕೆ.ಜಿಗೆ 2 ರೂ. ದರ ನಿಗದಿ

ಕೊಣ್ಣೂರು : ಜಾನುವಾರುಗಳಿಗೆ ಮೇವು ಕೊರತೆ ನೀಗಿಸಲು ತಾಲೂಕು ಆಡಳಿತದಿಂದ ಮೇವು...