ಪೊಲೀಸ್‌ ಎನ್ನುವ ಸಮಾಜದ ಆಯುಧ ತುಕ್ಕು ಹಿಡಿಯದಂತೆ ಸಮರ್ಪಕವಾಗಿ ಬಳಸಿಕೊಳ್ಳಬೇಕು: ಡಿವೈಎಸ್‌ಪಿ ಪ್ರಮೋದ್‌ ಕುಮಾರ್‌

Date:

ಡ್ರಗ್ಸ್‌ ದಾಸರ ಕುರಿತು ಅಥವಾ ಡ್ರಗ್ಸ್‌ ಇರುವುದನ್ನು ಕಂಡವರು ತಮ್ಮ ಪಾಡಿಗೆ ತಾವು ಇರುವುದೇ ಅನಾಹುತಗಳಿಗೆ ಕಾರಣವಾಗಿದೆ. ನಮ್ಮ ಕರ್ತವ್ಯದ ಜತೆಗೆ ಸಮಾಜದ ಒಳಿತಿಗಾಗಿ ದುಡಿಯುವ ನಿಟ್ಟಿನಲ್ಲಿ ಮುಂಚೂಣಿಯಲ್ಲಿದ್ದೇವೆ, ಅದರಿಂದ ಪೊಲೀಸ್‌ ಎನ್ನುವಂತಹ ಒಂದು ಸಮಾಜದ ಆಯುಧ ತುಕ್ಕು ಹಿಡಿಯದಂತೆ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಕಲೇಶಪುರ ಡಿವೈಎಸ್‌ಪಿ ಪ್ರಮೋದ್‌ ಕುಮಾರ್‌ ಹೇಳಿದರು.

- Advertisement -

ಹಾಸನ ಜಿಲ್ಲೆಯ ಸಕಲೇಶಪುರ ನಗರದಲ್ಲಿ ಹಮ್ಮಿಕೊಂಡಿದ್ದ ʼಡ್ರಗ್ಸ್‌ ಮುಕ್ತ ಸಕಲೇಶಪುರʼ ಎರಡನೇ ವರ್ಷದ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಡ್ರಗ್ಸ್‌ ಸಂಬಂಧಿತ ವಿಷಗಳು ಕಂಡುಬಂದರೆ ಸಂಬಂಧಪಟ್ಟ ಇಲಾಖೆಗಳಿಗೆ ತಿಳಿಸದೆ, ಮೌನ ವಹಿಸಿದರೆ ಪರೋಕ್ಷವಾಗಿ ನೀವೂ ಕೂಡ ಡ್ರಗ್ಸ್‌ ಸೇವನೆಗೆ ಪ್ರಚೋದಿಸಿದಂತಾಗುತ್ತದೆ. ಹಾಗಾಗಿ ಪ್ರತಿಯೊಬ್ಬರೂ ಇಲಾಖೆಯೊಂದಿಗೆ ಸಹಕರಿಸಬೇಕು” ಎಂದು ಸಾರ್ವಜನಿಕರಲ್ಲಿ ಕೋರಿದರು.

ಬಿಇಒ ಪುಷ್ಪ ಮಾತನಾಡಿ, “ನನ್ನ ಸ್ನೇಹಿತರ ಮನೆಯಲ್ಲಿಯೇ ಅವರ ಮಗ ನಶೆಗೆ ದಾಸನಾಗಿದ್ದು, ತಂದೆ ತಾಯಿಯನ್ನು ವಿಪರೀತವಾಗಿ ಕಾಡುತ್ತಿರುವುದನ್ನು ನೋಡುತ್ತಿದ್ದೇವೆ. ಹಾಗಾಗಿ ನಾವೂ ಕೂಡ ಪ್ರತಿ ಶಾಲೆಗಳಲ್ಲಿಯೂ ವ್ಯಸನ ಮುಕ್ತದ ಕುರಿತು ಶಿಕ್ಷಣ ನೀಡುವಂತಹ ಕಾರ್ಯಗಳನ್ನು ಕೈಗೊಂಡಿದ್ದೇವೆ. ಅದೇ ರೀತಿ ಮನೆಯಲ್ಲಿಯೂ ಕೂಡ ಪೋಷಕರು ಮಕ್ಕಳೊಂದಿಗೆ ಉತ್ತಮ ಒಡನಾಟ ಇಟ್ಟುಕೊಳ್ಳುವ ಮೂಲಕ ವ್ಯಸನಮುಕ್ತಗೊಳಿಸಲು ಮುಂದಾಗಬೇಕು” ಎಂದು ಹೇಳಿದರು.

ಅಲಿಬಾಬಾ ಮಾತನಾಡಿ, “ನಮ್ಮ ಸಮಾಜದಲ್ಲಿ ಒಳ್ಳೆಯವರು ಸುಮ್ಮನಿದ್ದು, ಕೆಟ್ಟವರಿಗೆ ಪರೋಕ್ಷವಾಗಿ ಪ್ರೋತ್ಸಾಹಿಸುತ್ತಿರುವುದರಿಂದಲೇ ಇಂದು ಹೆಚ್ಚಿನ ಯುವಜನರು ನಶೆಗೆ ದಾಸರಾಗಿದ್ದಾರೆ. ಸಂವಿಧಾನದ ಪೀಠಿಕೆಯಲ್ಲಿ ಸ್ವಾತಂತ್ರ್ಯ ಸಮಾನತೆ, ಭ್ರಾತೃತ್ವ ಎನ್ನುವಂತಹ ಅಂಶಗಳಿವೆ. ಆದರೆ ವ್ಯಸನಗಳಿಗೆ ದಾಸರಾದಾಗ ಈ ಮೂರೂ ಪದಗಳ, ಸಂಬಂಧಗಳ ಅರ್ಥವೇ ಇಲ್ಲದಂತಾಗುತ್ತದೆ. ವ್ಯಸನಿಗಳಿಗೆ ಇದರ ಅರಿವೇ ಇಲ್ಲದಂತಾಗುತ್ತದೆ” ಎಂದರು.

“ಕಾನೂನಾತ್ಮ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಡ್ರಗ್ಸ್‌ ಮಾರಾಟಗಾರರಿಗೆ ಮತ್ತು ವ್ಯಸನಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ವ್ಯಸನ ಮುಕ್ತ ಮಾಡಲು ಪ್ರತಿಯೊಬ್ಬರೂ ಶ್ರಮಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಅತಿಥಿಗಳು ಉಪವಿಭಾಗಾಧಿಕಾರಿ ಎಚ್‌ ಡಿ ರಾಜೇಶ್‌, ತಹಶೀಲ್ದಾರ್‌ ಸುಪ್ರೀತ, ಡಿವೈಎಸ್‌ಪಿ ಪ್ರಮೋದ್‌ ಕುಮಾರ್‌, ಕಾರ್ಯನಿರ್ವಹಣಾಧಿಕಾರಿ ಗಂಗಾಧರ್‌, ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪ, ‌ಧರ್ಮಸ್ಥಳ ನಶಾ ಮುಕ್ತ ಕೇಂದ್ರದ ಡಾ. ನವೀನ್‌ ಚಂದ್ರಶೇಕರ್ ಇದ್ದರು. ಪತ್ರಕರ್ತ ಮಲ್ನಾಡ್‌ ಮೆಹಬೂಬ್‌ ಸ್ವಾಗತಿಸಿದರು, ಜೈ ಭೀಮ್‌ ಮಂಜು ಕಾರ್ಯಕ್ರಮದ ನಿರೂಪಣೆ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...

ಹಾವೇರಿ | ವಿರೋಧ ಪಕ್ಷದ ರೀತಿಯಲ್ಲಿ‌ ಕೆಲಸ ಮಾಡೋಣ : ಉಡಚಪ್ಪ ಮಾಳಗಿ ಕರೆ

ಜಿಲ್ಲೆಯಲ್ಲಿ‌ ವಿರೋಧ ಪಕ್ಷವೇ ಇಲ್ಲ. ಇಲ್ಲ ಅನೇಕ ಸಮಸ್ಯೆಗಳು ಇವೆ. ದಲಿತರ...

ಉಡುಪಿ | ಮೇಯಲು ಬಿಟ್ಟ ದನ ಟೆಂಪೋದಲ್ಲಿ ಪತ್ತೆ; 24 ಗಂಟೆಯೊಳಗೆ ನಾಲ್ವರು ಪೊಲೀಸ್ ಬಲೆಗೆ!

ಮೇಯಲು ಬಿಟ್ಟಿದ್ದ ದನವನ್ನು ಅಕ್ರಮವಾಗಿ ಟೆಂಪೋದಲ್ಲಿ ಸಾಗಿಸುತ್ತಿದ್ದರೆಂದು ಆರೋಪಿಸಿ ದಾಖಲಾಗಿದ್ದ ಪ್ರಕರಣಕ್ಕೆ...

ಕಸ್ತೂರಿರಂಗನ್ ವರದಿ ವಿರುದ್ಧ ಆಕ್ರೋಶ: ಶೃಂಗೇರಿ ಬಂದ್‌ಗೆ ರೈತ ಸಂಘಟನೆಗಳ ಬೆಂಬಲ

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಕಸ್ತೂರಿರಂಗನ್ ವರದಿಯ ಅನುಷ್ಠಾನವನ್ನು ವಿರೋಧಿಸಿ ಇಂದು...