ನೆಟೆ ರೋಗದಿಂದ ಹಾನಿಯಾದ ತೊಗರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಆಗ್ರಹಿಸಿ ರೈತ ಮುಖಂಡರು ಭಾನುವಾರ ಕಲಬುರಗಿಯ ಅನ್ನಪೂರ್ಣ ಕ್ರಾಸ್ ಬಳಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಜಿಲ್ಲೆಯಲ್ಲಿ 2 ಲಕ್ಷ ಹೆಕ್ಟೇರ್ ತೊಗರಿ ಬೆಳೆ ಹಾನಿಯಾಗಿದೆ. ಇದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ಕೂಡಲೇ ಪರಿಹಾರ ಹಾಗೂ ವಿಶೇಷ ಪ್ಯಾಕೇಜ್ ಘೋಷಿಸುವಂತೆ ರೈತರು ಆಗ್ರಹಿಸಿದ್ದರು.
ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ, ಪರಿಹಾರಕ್ಕೆ ಒತ್ತಾಯಿಸುತ್ತಿದ್ದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಮುಖಂಡರಾದ ಎಂ.ಬಿ. ಸಜ್ಜನ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಪ್ರವಾಸದ ವೇಳೆ ವಿದ್ಯಾರ್ಥಿ ಸಾವು : ಮುಖ್ಯ ಶಿಕ್ಷಕ ಸೇರಿ ಆರು ಶಿಕ್ಷಕರ ಅಮಾನತು
ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಕಲಬುರಗಿ ಶಾಖಾ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿಎಂ ಸಿದ್ದರಾಮಯ್ಯ ಇಂದು ಕಲಬುರಗಿಗೆ ಆಗಮಿಸಿದ್ದಾರೆ.