ಗಂಗಾವತಿ ಪ್ರಕರಣ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ; ಹೋಂ ಸ್ಟೇ, ರೆಸಾರ್ಟ್​ಗಳ ಮೇಲೆ ದಾಳಿ

Date:

ಗಂಗಾವತಿ ತಾಲೂಕಿನ ಆನೆಗೊಂದಿ ಮತ್ತು ಕೊಪ್ಪಳ ತಾಲೂಕಿನ ಬಸ್ಸಾಪುರ ಸುತ್ತಮುತ್ತಲಿರುವ ಹೋಂ ಸ್ಟೇ, ರೆಸಾರ್ಟ್​ಗಳ ಮೇಲೆ ಸೋಮವಾರ ಜಿಲ್ಲಾ ಪೊಲೀಸ್​ ಇಲಾಖೆ ದಾಳಿ ಮಾಡಿದೆ.

- Advertisement -

ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿಯಿರುವ ತುಂಗಭದ್ರಾ ಎಡದಂಡೆ ಕಾಲುವೆ ಬಳಿ ವಿದೇಶಿ ಮಹಿಳೆ, ಹೋಂ ಸ್ಟೇ ಮಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಎಚ್ಚೆತ್ತ ಕೊಪ್ಪಳ ಜಿಲ್ಲಾ ಪೊಲೀಸ್ ​ವರಿಷ್ಠಾಧಿಕಾರಿ ಡಾ. ರಾಮ್​ ಅರಸಿದ್ದಿ ನೇತೃತ್ವದಲ್ಲಿ ದಾಳಿ ಮಾಡಿದ್ದು, ಹೋಂ ಸ್ಟೇ, ರೆಸಾರ್ಟ್​ಗಳು ವಿದೇಶಿಗರ ಬಗ್ಗೆ ಯಾವುದೇ ಮಾಹಿತಿ ನೀಡದ ಆರೋಪ ಮತ್ತು ಅಕ್ರಮ ಚಟುವಟಿಕೆ ನಡೆಯುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಹೋಂ ಸ್ಟೇ, ರೆಸಾರ್ಟ್‌ನಲ್ಲಿನ ರಿಜಿಸ್ಟರ್ ಪುಸ್ತಕ ಸೇರಿದಂತೆ ವಿವಿಧ​ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಹೋಂ ಸ್ಟೇ, ರೆಸಾರ್ಟ್​ನಲ್ಲಿ ಅಕ್ರಮ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಂಪೂರ್ಣ ತಪಾಸಣೆ ನಡೆಸಿದರು. ಬಳಿಕ, ಹೋಂ ಸ್ಟೇ, ರೆಸಾರ್ಟ್​ಗಳಲ್ಲಿ ಅಕ್ರಮ ಚಟುವಟಿಕೆ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಾಲೀಕರಿಗೆ ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಈ ಸುದ್ದಿ ಓದಿದ್ದೀರಾ? ಹಾಸನ | ಶಿರಾಡಿ ಘಾಟ್ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ; ಮಾ.15ರಿಂದ ಏಕಮುಖ ಸಂಚಾರ

ಘಟನೆ ಬಳಿಕ ಎಸ್‌ಪಿ ಡಾ.ರಾಮ್ ಎಲ್ ಅರಸಿದ್ದಿ ಗಂಗಾವತಿಯಲ್ಲಿ ರೆಸಾರ್ಟ್ ಮಾಲೀಕರ ಜತೆ ಸೋಮವಾರ ಸಭೆ ನಡೆಸಿದ್ದರು.ಫಾರ್ಮ್ ಸಿಯನ್ನು ಕಡ್ಡಾಯವಾಗಿ ಭರ್ತಿ ಮಾಡಿ, ವಿದೇಶಿಗರ ಬಗ್ಗೆ ಮಾಹಿತಿ ನೀಡಬೇಕು. ಅನೈತಿಕ ಚಟುವಟಿಕೆಗಳನ್ನು ನಡೆಸಬಾರದೆಂದು ರೆಸಾರ್ಟ್ ಮಾಲೀಕರಿಗೆ ಖಡಕ್ ಸೂಚನೆ ನೀಡಿದ್ದಾರೆ.

ರೆಸಾರ್ಟ್​ಗಳಲ್ಲಿ ಗಾಂಜಾ ಪೂರೈಕೆ ಸೇರಿದಂತೆ ಯಾವುದೇ ಅಕ್ರಮ ದಂಧೆ ನಡೆಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ಎಚ್ಚರಿಕೆ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿಐ ಪಾವತಿಗೆ ಶುಲ್ಕ; ಕೇಂದ್ರ ಸಚಿವರು ಪಿಕ್ ಪಾಕೆಟ್‌ನಲ್ಲಿ ಪಿಎಚ್‌ಡಿ: ಸಿಎಂ ಡಿ ಕೆ ಶಿವಕುಮಾರ್

"ಯುಪಿಐ ಪಾವತಿಗೆ ವರ್ತಕರ ಮೇಲೆ ಶುಲ್ಕ ವಿಧಿಸಿರುವ ಕೇಂದ್ರ ಸರ್ಕಾರ ಪಿಕ್...

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ...

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...