ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕೊಲೆ ಮಾಡಿದೆ: ದಿಂಗಾಲೇಶ್ವರ ಸ್ವಾಮೀಜಿ

Date:

ಅನ್ಯಾಯ ತಡೆಯುವಂತೆ ಮನವಿ ಮಾಡಿದರೆ, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಹೋರಾಟವನ್ನೇ ತಡೆಗಟ್ಟಲು ಮುಂದಾಗಿದೆ. ಶಿರಹಟ್ಟಿಯಲ್ಲಿ 144 ಸೆಕ್ಷನ್ ಜಾರಿ ಮಾಡಿರುವ ಪೊಲೀಸ್ ಇಲಾಖೆ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕೊಲೆ ಮಾಡಿದೆ ಎಂದು ಫಕೀರೇಶ್ವರ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಆರೋಪಿಸಿದ್ದಾರೆ.

ತೋಂಟದಾರ್ಯ ಮಠವನ್ನು ಭಾವೈಕ್ಯತೆ ಮಠ ಮಾಡುವ ವಿಚಾರಕ್ಕೆ ಆಕ್ಷೇಪಿಸಿ ಫಕೀರೇಶ್ವರ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಮಠದ ಸುತ್ತ ಪೊಲೀಸ್ ಸರ್ಪಗಾವಲು ಇಟ್ಟಿದ್ದು, ಭಕ್ತರನ್ನು ಮಠಕ್ಕೆ ಬಿಡುತ್ತಿಲ್ಲ. ರಾತ್ರೋರಾತ್ರಿ ನೋಟಿಸ್ ನೀಡಲಾಗಿದೆ. ಗದಗದಲ್ಲಿ ಹೋರಾಟ ಮಾಡಲು ನಿರ್ಧರಿಸಿದ್ದೆವು. ಆದರೆ, ಅಲ್ಲಿ 144 ಸೆಕ್ಷನ್ ಜಾರಿ ಮಾಡದೆ, ಶಿರಹಟ್ಟಿಯಲ್ಲಿ ಜಾರಿ ಮಾಡಿದ್ದಾರೆ. ಇದು ಅಕ್ಷಮ್ಯ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ತೋಂಟದಾರ್ಯ ಮಠ ವಿರಕ್ತ ಮಠವೇ ಹೊರತು ಭಾವೈಕ್ಯತೆ ಮಠವಲ್ಲ. ವಿರಕ್ತ ಮಠವನ್ನು ಭಾವೈಕ್ಯತೆ ಮಠ ಮಾಡುವುದು ಭಾವೈಕ್ಯತೆ ಹೊಂದಿರುವ ಮಠಕ್ಕೆ ಮಾಡುವ ಘೋರ ಅನ್ಯಾಯ. ಇಂತಹ ಜಾತಿವಾದಿ ಸ್ವಾಮಿಗಳಿಗೆ ಮಣೆ ಹಾಕಬಾರದು. ಸದ್ಯ ನಮ್ಮ ಮೇಲೆ ಆಗುತ್ತಿರುವ ಅನ್ಯಾಯವನ್ನು ಮಾಧ್ಯಮಗಳ ಮೂಲಕ ಸರ್ಕಾರದ ಗಮನಕ್ಕೆ ತರುತ್ತಿದ್ದೇವೆ. ಭಾವೈಕ್ಯತೆ ಹೋರಾಟ ಮುಂದುವರೆಸುತ್ತೇವೆ” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಐಸಿಯುನಲ್ಲಿದ್ದ ರೋಗಿಗೆ ರಕ್ತ ಬರುವ ಹಾಗೆ ಥಳಿಸಿದ ಕೆ.ಸಿ.ಜನರಲ್ ಆಸ್ಪತ್ರೆ ಸಿಬ್ಬಂದಿ

ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಯೊಬ್ಬರಿಗೆ ಆಸ್ಪತ್ರೆ ಸಿಬ್ಬಂದಿ...

ಉಡುಪಿ | ಎರಡು ತಂಡಗಳ ನಡುವೆ ಗ್ಯಾಂಗ್ ವಾರ್; ತಡವಾಗಿ ಬೆಳಕಿಗೆ ಬಂದ ಪ್ರಕರಣ

ಉಡುಪಿ ನಗರದಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್‌ ವಾ‌ರ್ ನಡೆದ ಪ್ರಕರಣ...

ಸರ್ಕಾರೇತರ ವಾಹನಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆ; 7 ವಿಶೇಷ ತಂಡ ರಚನೆ, ಕಾರ್ಯಾಚರಣೆಗಿಳಿದ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಾಹನಗಳನ್ನು ಹೊರತುಪಡಿಸಿ,...

ಪೊಲೀಸ್ ಸಿಬ್ಬಂದಿ ದೈಹಿಕ ಮತ್ತು ಮಾನಸಿಕ ಆರೋಗ್ಯ ಸ್ವಾಸ್ಥ್ಯಕ್ಕಾಗಿ ಕ್ರಮ; ಪೊಲೀಸ್ ಆಯುಕ್ತ ಬಿ.ದಯಾನಂದ್

ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಶೇ.87 ರಷ್ಟು ಪೊಲೀಸರು ಸ್ಥೂಲಕಾಯ, ಬೊಜ್ಜು ಅಥವಾ ಕಡಿಮೆ...