ಬೀದರ್‌ | ಪೊಲೀಸ್ ಶ್ವಾನ ʼಬ್ರುನೋʼ ನಿಧನ; ಪೊಲೀಸ್‌ ಗೌರವದೊಂದಿಗೆ ಅಂತ್ಯಕ್ರಿಯೆ

Date:

ಬೀದರ್ ಜಿಲ್ಲಾ ಪೊಲೀಸ್‌ ಇಲಾಖೆಯ ದಕ್ಷ ಶ್ವಾನವೆಂದೇ ಗುರುತಿಸಿಕೊಂಡಿದ್ದ ʼಬ್ರುನೋʼ ಭಾನುವಾರ ನಿಧನ ಹೊಂದಿದೆ.

ಭಾನುವಾರ ಪೊಲೀಸ್‌ ಹೆಡ್‌ಕ್ವಾರ್ಟರ್‌ನಲ್ಲಿ ಪೊಲೀಸ್‌ ಗೌರವದೊಂದಿದೆ ಶ್ವಾನ ಬ್ರುನೋ ಅಂತ್ಯಕ್ರಿಯೆ ನಡೆಯಿತು.

ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ, ಹೆಚ್ಚುವರಿ ಎಸ್ಪಿ ಮಹೇಶ ಮೇಘಣ್ಣನವರ ಡಿವೈಎಸ್‌ಪಿ ಶಿವನಗೌಡ ಪಾಟೀಲ್‌ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಂತಿಮ ಗೌರವ ಸಲ್ಲಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮಾತನಾಡಿ, “ರಾಜ್ಯಾದ್ಯಂತ ಗಣ್ಯ ವ್ಯಕ್ತಿಗಳ ಭೇಟಿ ಸಂದರ್ಭದ ವೇಳೆ ಪೊಲೀಸ್‌ ಇಲಾಖೆಯ ಶ್ವಾನದಳದಲ್ಲಿ ಸ್ಪೋಟಕ ಪತ್ತೆ ಹಚ್ಚುವ ಕೆಲಸವನ್ನು ಬ್ರುನೋ ಬಹಳ ದಕ್ಷ ರೀತಿಯಲ್ಲಿ ಮಾಡಿದೆ. ಎಎಸ್‍ಸಿ ತಂಡದೊಂದಿಗೆ ಭದ್ರತಾ ತಪಾಸಣಾ ಕಾರ್ಯ ಚುರುಕಾಗಿ ಭಾಗಿಯಾಗಿದ್ದು ಹಾಗೂ ವಲಯ ಮಟ್ಟದ ಪೊಲೀಸ್ ಕರ್ತವ್ಯ ಕೂಟ ಮತ್ತು ಇತರೆ ಜಿಲ್ಲಾ ಮಟ್ಟದ ಶ್ವಾನ ಪ್ರದರ್ಶನಗಳಲ್ಲಿ ಕೂಡ ಭಾಗಿಯಾಗಿ ಪದಕ ವಿಜೇತವಾಗಿದ್ದು, ನಮ್ಮ ಬೀದರ್ ಜಿಲ್ಲಾ ಪೊಲೀಸ್ ಕೀರ್ತಿ ತಂದಿದ್ದ ಶ್ವಾನ ಬ್ರುನೋ ಅಕಾಲಿಕ ನಿಧನ ಹೊಂದಿರುವುದು ದುಃಖದ ವಿಷಯ” ಎಂದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿಗರು ಮನುವಾದಿ, ಸರ್ವಾಧಿಕಾರಿ ಧೋರಣೆಯಲ್ಲಿ ನಂಬಿಕೆ ಇಟ್ಟವರು: ಸಚಿವ ರಾಮಲಿಂಗಾರೆಡ್ಡಿ

ಶ್ವಾನದಳದ ಅಧಿಕಾರಿ ಅಶೋಕ ಮಾತನಾಡಿ, “10 ವರ್ಷ 6 ತಿಂಗಳು ಪೊಲೀಸ್‌ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ಬ್ರುನೋ ಗಣ್ಯರು ಭೇಟಿ ನೀಡಿದ ವೇಳೆ ಅತ್ಯಂತ ದಕ್ಷತೆಯಿಂದ ಕೆಲಸ ನಿರ್ವಹಿಸಿ ಸ್ಫೋಟಕ ಪತ್ತೆ ಹಚ್ಚುವ ಕೆಲಸ ಮಾಡಿದೆ. ಇಂದು ಬ್ರುನೋ ಅಕಾಲಿಕವಾಗಿ ನಮ್ಮನ್ನಗಳಿಲಿರುವುದು ಶ್ವಾನ ದಳಕ್ಕೆ ತುಂಬಲಾರದ ನಷ್ಟವಾಗಿದೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೈಂದೂರು | ಸಮಾಜದ ಎಲ್ಲ ವರ್ಗದವರ ಹಿತ ಕಾಯಲು ಬದ್ಧ: ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್

ಲೋಕಸಭಾ ಚುನಾವಣೆಯಲ್ಲಿ ಬೈಂದೂರು ಮತದಾರರು ನನ್ನ ಕೈ ಬಲಪಡಿಸಿದರೆ, ಸಮಾಜದ ಎಲ್ಲ...

ಚಿಕ್ಕಬಳ್ಳಾಪುರ | ₹400 ಕೋಟಿ ನಕಲಿ ನೋಟು ಹಂಚಿಕೆಗೆ ಸಕಲ ತಯಾರಿ: ಪಕ್ಷೇತರ ಅಭ್ಯರ್ಥಿ ಆರೋಪ 

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಮತದಾರರಿಗೆ ಹಣ ಹಂಚಲು ಜನವರಿ...

ಚಿಕ್ಕಮಗಳೂರು | ಮಾಜಿ ಸಚಿವ ಮಾಧುಸ್ವಾಮಿ ಕಾರು ಅಪಘಾತ

ಮಾಜಿ ಸಚಿವ ಮಾಧುಸ್ವಾಮಿ ಅವರು ತೆರಳುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಚಿಕ್ಕಮಗಳೂರು...

ವಿಶೇಷ ಜಾತ್ರೆ | ತಲೆ ಮೇಲೆ ತೆಂಗಿನಕಾಯಿ ಒಡೆದುಕೊಂಡು ಮಳೆಗಾಗಿ ಪ್ರಾರ್ಥನೆ ಮಾಡಿದ ಖಾಜಿಸೊನ್ನೇನಹಳ್ಳಿ ಗ್ರಾಮಸ್ಥರು

ಅಕಾಲಿಕ ಮಳೆಯಿಂದ ರಾಜ್ಯದಲ್ಲಿ ಬಿರು ಬೇಸಿಗೆ ವಾತಾವರಣ ಸೃಷ್ಟಿಯಾಗಿದೆ. ದಿನದಿಂದ ದಿನಕ್ಕೆ...