ಮುಂಡಗೋಡ-ಹಳಿಯಾಳದ ಮದ್ಯ-ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್ ದಾಳಿ; ಪಾಳಾ ಭಾಗದ ಮಟ್ಕಾ ದಂಧೆಗೆ ಬೀಳುತ್ತಾ ಬ್ರೇಕ್?

Date:

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಮತ್ತು ಹಳಿಯಾಳ ತಾಲೂಕುಗಳಲ್ಲಿ ಪೊಲೀಸರು ಮಿಂಚಿನ ದಾಳಿ ನಡೆಸಿದ್ದು, ಓಸಿ ಜೂಜಾಟ ಹಾಗೂ ಅಕ್ರಮವಾಗಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಡುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

- Advertisement -

ಮುಂಡಗೋಡ ಪೊಲೀಸರು ಎರಡು ಪ್ರತ್ಯೇಕ ಮಟ್ಕಾ ದಾಳಿಗಳಲ್ಲಿ ಆರೋಪಿಗಳನ್ನು ಬಂಧಿಸಿದ್ದರೆ, ಹಳಿಯಾಳದಲ್ಲಿ ಅಬಕಾರಿ ಕಾಯ್ದೆಯಡಿ ಮೂವರು ಆರೋಪಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಲ್ಲವನ್ನೂ ಕಣ್ಣುಮುಚ್ಚಿ ಪಾಲಿಸುವ ವಿಭೀಷಣನೆ ಈ ಸಮಾಜಕ್ಕೆ ಸೂಕ್ತ,...

ರಾಮಾಯಣವನ್ನು ಗೌರವಿಸುವ ನಾವು ರಾವಣನ ದೃಷ್ಟಿಕೋನದಿಂದಲೂ ಕಥೆಯನ್ನು ಓದಬೇಕು. ಈ ಕಾಲಕ್ಕೆ ರಿಟೆಲ್ಲಿಂಗ್ಸ್, ಕೌಂಟರ್ ನರೇಟಿವ್ಸ್ ಹಾಗೂ ಹ್ಯೂಮನೈಸಿಂಗ್ ಸ್ಟೋರಿಸ್ ಅಗತ್ಯತೆ ಬಹಳವಾಗಿದೆ. ಶಿವ ನಮ್ಮ ಅಚ್ಚುಮೆಚ್ಚಿನ ದೇವನಾಗಿದ್ದ. ಅವನನ್ನ ನಾವು ಅತಿಯಾಗಿ ಪ್ರೀತಿಸುತಿದ್ದೆವು....

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ...

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ ಹೆಸರು ಆಜಾದ್. ಅವರ ಕನಸು ಸ್ವತಂತ್ರ ಭಾರತ. ಅವರ ಹೋರಾಟ ರಾಷ್ಟ್ರೀಯ ಏಕತೆ. ಅವರ ನಂಬಿಕೆ ಶಿಕ್ಷಣ. ಅವರ ವೈಚಾರಿಕ...

ಕಿವೀಸ್ ಕೋಟೆಯಲ್ಲಿ ಇತಿಹಾಸ ಬರೆಯುವತ್ತ ಶುಭಮನ್ ಗಿಲ್ ಪಡೆ:...

ನವೆಂಬರ್ 13 ಮತ್ತು 15ರಂದು ನಡೆಯಲಿರುವ ಕಿವೀಸ್ ವಿರುದ್ಧದ ನಾಲ್ಕು ಹಾಗೂ ಐದನೇ ಏಕದಿನ ಪಂದ್ಯಗಳಲ್ಲಿ ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಕೌಶಲ ಮತ್ತೊಮ್ಮೆ ಒರೆಗಲ್ಲಿಗೆ ಹಚ್ಚಲ್ಪಡಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ...

ಮುಂಡಗೋಡ ತಾಲೂಕಿನ ಕಾತೂರ ಗ್ರಾಮದ ಆಲಹಳ್ಳಿ ಕ್ರಾಸ್ ಬಳಿ ಸಾರ್ವಜನಿಕ ರಸ್ತೆಯಲ್ಲಿ ನಿಂತು ‘ಒಂದು ರೂಪಾಯಿಗೆ 80 ರೂಪಾಯಿ’ ನೀಡುವ ಆಮಿಷವೊಡ್ಡಿ ಸಾರ್ವಜನಿಕರಿಂದ ಹಣ ಪಡೆದು ಓಸಿ ಜೂಜಾಟ ನಡೆಸುತ್ತಿದ್ದ ಹಜರತಲಿ ಮಹಬೂಬಸಾಬ ಶೇಖ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ದಾಳಿ ವೇಳೆ 790 ರೂಪಾಯಿ ನಗದು ಹಾಗೂ ಜೂಜಾಟದ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 78(3) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ಗ್ರಾಮದ ಬೊಮ್ಮನಳ್ಳಿ ಕ್ರಾಸ್ ಬಳಿ ಇಂತಹದ್ದೇ ಕೃತ್ಯದಲ್ಲಿ ತೊಡಗಿದ್ದ ನೀಲಪ್ಪ ಹುಚ್ಚಪ್ಪ ವರ್ದಿ ಎಂಬ 61 ವರ್ಷದ ವ್ಯಕ್ತಿಯನ್ನು ಸಿಪಿಐ ರಂಗನಾಥ ಮತ್ತು ಸಿಬ್ಬಂದಿ ದಾಳಿ ಮಾಡಿ ಬಂಧಿಸಿದ್ದು, ಆತನಿಂದ 700 ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ.

ಪಾಳಾ ಗ್ರಾಮದಲ್ಲಿ ಅವ್ಯಾಹತವಾಗಿ ಸಾಗಿರುವ ಮಟ್ಕಾ ದಂಧೆ: ಪೊಲೀಸರು ಒಂದೆಡೆ ದಾಳಿ ನಡೆಸುತ್ತಿದ್ದರೂ, ಮುಂಡಗೋಡು ತಾಲೂಕಿನ ಪಾಳಾ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಮಟ್ಕಾ ದಂಧೆ ಯಾವುದೇ ಭಯವಿಲ್ಲದೆ ರಾಜಾರೋಷವಾಗಿ ನಡೆಯುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಗಲು ಹೊತ್ತಿನಲ್ಲೇ ಸಾರ್ವಜನಿಕ ಸ್ಥಳಗಳಲ್ಲಿ ಸಣ್ಣ ಅಂಗಡಿಗಳನ್ನು ತೆರೆದು ಜನರನ್ನು ಕರೆದು ಹಣದ ಆಸೆ ತೋರಿಸಿ ಈ ದಂಧೆ ನಡೆಸಲಾಗುತ್ತಿದೆ. ಕಷ್ಟಪಟ್ಟು ದುಡಿದ ಕೂಲಿ ಹಣವನ್ನೆಲ್ಲ ಅಮಾಯಕ ಜನರು ಒಂದು ರೂಪಾಯಿಗೆ 80 ರೂಪಾಯಿ ಸಿಗುತ್ತದೆ ಎಂಬ ಆಸೆಗೆ ಬಿದ್ದು ಈ ಜೂಜಿನ ನಂಬರ್‌ಗಳಿಗೆ ಸುರಿಯುತ್ತಿದ್ದಾರೆ. ಇದರಿಂದ ನೂರಾರು ಕುಟುಂಬಗಳು ಬೀದಿಗೆ ಬರುತ್ತಿವೆ ಎಂದು ಗ್ರಾಮಸ್ಥರು ಹೇಳುತ್ತಾರೆ.

ಈ ಸುದ್ದಿ ಓದಿದ್ದೀರಾ ? ಭಟ್ಕಳ | ಕರ್ತವ್ಯ ಲೋಪ ಆರೋಪ: ಗ್ರಾಮೀಣ ಠಾಣೆಯ ಸಿಪಿಐ ಹಾಗೂ ಹೆಡ್ ಕಾನ್ಸ್‌ಟೇಬಲ್ ಅಮಾನತು!

ಕಠಿಣ ಕ್ರಮಕ್ಕೆ ಆಗ್ರಹ: ಪಾಳಾ ಭಾಗದಲ್ಲಿ ಬೇರೂರಿರುವ ಈ ಮಟ್ಕಾ ದಂಧೆಕೋರರ ವಿರುದ್ಧ ಪೊಲೀಸರು ಕೇವಲ ಹೆಸರಿಗಷ್ಟೇ ಪ್ರಕರಣ ದಾಖಲಿಸದೆ, ಅವರಲ್ಲಿ ಕಾನೂನಿನ ಭಯ ಹುಟ್ಟುವಂತೆ ಕಠಿಣ ಕ್ರಮ ಜರುಗಿಸಬೇಕಿದೆ. ಈ ಭಾಗದಲ್ಲಿ ಮಟ್ಕಾ ದಂಧೆಯನ್ನು ಸಂಪೂರ್ಣವಾಗಿ ನಿಷೇಧಿಸಿ, ಬಡವರ ಬದುಕನ್ನು ಸರಿಪಡಿಸಬೇಕು ಎಂದು ಸಾರ್ವಜನಿಕರು ಪೋಲಿಸ್ ಇಲಾಖೆಗೆ ಮನವಿ ಮಾಡಿದ್ದಾರೆ.

ಹಳಿಯಾಳದಲ್ಲಿ ಅಕ್ರಮ ಮದ್ಯ ಸೇವನೆಗೆ ಕಡಿವಾಣ: ಹಳಿಯಾಳದ ಮುರ್ಕವಾಡ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ಅನುವು ಮಾಡಿಕೊಡುತ್ತಿದ್ದ ಅಡ್ಡೆಗಳ ಮೇಲೆ ಹಳಿಯಾಳ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕಾಶ ಹರಿಶ್ಚಂದ್ರ ಶೇಡೆಕಾರ, ಸಂತೋಷ ಬಾಲಕೃಷ್ಣ ಶೆಡೆಕರ ಹಾಗೂ ಸಂಜು ಯಲ್ಲಪ್ಪ ಪಿಂಪಳ್ಕರ್ ಎಂಬುವವರು ತಮ್ಮ ಅಂಗಡಿ ಹಾಗೂ ಗೂಡಂಗಡಿಗಳ ಪಕ್ಕದಲ್ಲಿ ಸಾರ್ವಜನಿಕರಿಗೆ ಮದ್ಯ ಸೇವಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಬಂಧಿತರಾಗಿದ್ದಾರೆ. ಇವರ ವಿರುದ್ಧ ಕರ್ನಾಟಕ ಅಬಕಾರಿ ಕಾಯ್ದೆಯಡಿ ಪಿಎಸ್ಐ ಕೃಷ್ಣಗೌಡ ಅರಕೇರಿ ಮತ್ತು ಬಸವರಾಜ ಮಬನೂರ ಅವರು ಪ್ರಕರಣ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ದೇವನಹಳ್ಳಿ | ಸರ್ಕಾರದ ವತಿಯಿಂದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ಹಾಗೂ ವಿಶ್ವವಿದ್ಯಾಲಯ ಸ್ಥಾಪಿಸಲು ಒತ್ತಾಯ

ಟಿಪ್ಪು ಸೆಕ್ಯುಲರ್ ಸೇನೆಯ ವತಿಯಿಂದ ಇಂದು ದೇವನಹಳ್ಳಿಯಲ್ಲಿ ಹಜರತ್ ಟಿಪ್ಪು ಸುಲ್ತಾನ್...

ರಾಯಚೂರು | ಲೋಹಿಯಾ ಪ್ರತಿಷ್ಠಾನದಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಈರಣ್ಣ ರುದ್ರಾಕ್ಷಿ ಅವರಿಗೆ ಸನ್ಮಾನ

ರಾಯಚೂರು ಲೋಹಿಯ ಪ್ರತಿಷ್ಠಾನದಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಈರಣ್ಣ ರುದ್ರಾಕ್ಷಿ ಅವರಿಗೆ...

ರಾಯಚೂರು | ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಕ್ಷಮೆಯಾಚನೆಗೆ ಜೆಡಿಎಸ್ ಆಗ್ರಹ

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರನ್ನು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ...