ಶಿವಮೊಗ್ಗ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಪೊಲೀಸ್ ವಿಶೇಷ ಗಸ್ತು; 197 ಪ್ರಕರಣ ದಾಖಲು

Date:

ಶಿವಮೊಗ್ಗ, ಭದ್ರಾವತಿ, ಸಾಗರ ಹಾಗೂ ಆನವಟ್ಟಿಯಲ್ಲಿ ಆಯಾ ಠಾಣೆಗಳ ಪೊಲೀಸರು ಫೆಬ್ರವರಿ 15ರ ಸಂಜೆ ವಿಶೇಷ ಕಾಲ್ನಡಿಗೆ ಗಸ್ತು ನಡೆಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

- Advertisement -
1001248327

ಈ ಕುರಿತು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆ ನೀಡಿದ್ದು, “ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸ್‌ ಸಿಬ್ಬಂದಿ ವಿಶೇಷ ಕಾಲ್ನಡಿಗೆ ಗಸ್ತು ನಡೆಸಿದ್ದಾರೆ. ಈ ವೇಳೆ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದವರು ಹಾಗೂ ಅಸಭ್ಯವಾಗಿ ವರ್ತಿಸುತ್ತಿದ್ದವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, 123 ಲಘು ಪ್ರಕರಣ, ಕೋಟ್ಪಾ ಕಾಯ್ದೆ(ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯಿದೆ)ಯಡಿ 18 ಪ್ರಕರಣ ಹಾಗೂ ಮೋಟಾರು ಕಾಯ್ದೆಯಡಿ 56 ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...
1001248309

ಎಲ್ಲೆಲ್ಲಿ ಗಸ್ತು?

ಶಿವಮೊಗ್ಗ ನಗರದ ಕಸ್ತೂರ ಬಾ ರಸ್ತೆ, ಎಂಕೆಕೆ ರಸ್ತೆ, ಭರ್ಮಪ್ಪ ನಗರ, ಒಟಿ ರಸ್ತೆ, ಅಣ್ಣಾನಗರ, ಮಂಜುನಾಥ ಬಡಾವಣೆ, ಅಶೋಕ ರಸ್ತೆ, ಕೋಟೆ ರಸ್ತೆ, ಓಲ್ಡ್ ಬಾರ್ ಲೈನ್ ರಸ್ತೆ, ಪೆನ್ಷನ್ ಮೊಹಲ್ಲಾ, ಕಾಮತ್ ಪೆಟ್ರೋಲ್ ಬಂಕ್ ಸಮೀಪ, ಮೇಲಿನ ತುಂಗಾನಗರ, ಕೆಳಗಿನ ತುಂಗಾನಗರ, ರಾಜೇಂದ್ರ ನಗರ, ರವೀಂದ್ರ ನಗರ, ಬಸವನಗುಡಿ, ಜೈಲ್ ರಸ್ತೆ, ಸೋಮಿನಕೊಪ್ಪ, ಬೊಮ್ಮನಕಟ್ಟೆ, ಪುರಲೆ ಹಾಗೂ ತಾಲೂಕಿನ ಆಯನೂರು ಗ್ರಾಮದಲ್ಲಿ ಕಾಲ್ನಡಿಗೆ ಗಸ್ತು ನಡೆಸಲಾಗಿದೆ.

ಭದ್ರಾವತಿ ನಗರದ ನ್ಯೂಟೌನ್, ಖಾಜಿ ಮೊಹಲ್ಲಾ, ಹನುಮಂತನಗರ, ಸತ್ಯಸಾಯಿನಗರ ಹಾಗೂ ಬಾರಂದೂರು, ಶಂಕರಘಟ್ಟ ಗ್ರಾಮದಲ್ಲಿ ಗಸ್ತು ನಡೆಸಲಾಗಿದೆ.

1001248336

ಸಾಗರ ಪಟ್ಟಣದ ಹೊಸನಗರ ರಸ್ತೆ, ಜನ್ನೇಹಕ್ಲು ಹಾಗೂ ಸೊರಬ ತಾಲೂಕಿನ ಆನವಟ್ಟಿ ಪಟ್ಟಣದ ನೆಹರೂ ನಗರ ವೃತ್ತದಲ್ಲಿ ಕಾಲ್ನಡಿಗೆ ಗಸ್ತು ನಡೆಸಲಾಗಿದೆ” ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...