ಮೈಸೂರು | ಹಿರಿಯ ಪತ್ರಕರ್ತ ದೀಪಕ್‌ಗೆ ಪೊಲೀಸ್‌ ಸಮನ್ಸ್‌ – ಮುಚ್ಚಳಿಕೆಗೆ ತಾಕೀತು; ವ್ಯಾಪಕ ಖಂಡನೆ

Date:

Advertisements

ಮೈಸೂರಿನ ಹಿರಿಯ ಪತ್ರಕರ್ತ, ಪ್ರಗತಿಪರ ಚಿಂತಕ ಕೆ ದೀಪಕ್ ಅವರಿಗೆ ಮೈಸೂರು ಪೊಲೀಸರು ಸಮನ್ಸ್‌ ನೀಡಿದ್ದಾರೆ. ಮುಚ್ಚಳಿಕೆ ಪತ್ರ ಬರೆದುಕೊಡುವಂತೆ ತಾಕೀತು ಮಾಡಿದ್ದಾರೆ. ಪೊಲೀಸರ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

2019ರ ಪ್ರಕರಣದಲ್ಲಿ ದೀಪಕ್ ಅವರಿಗೆ ಸಮನ್ಸ್‌ ನೀಡಲಾಗಿದೆ. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದರೂ, ಸಮನ್ಸ್‌ ನೀಡಿರುವುದು ಪತ್ರಕರ್ತರ ಸ್ವಾತಂತ್ರ್ಯವನ್ನು ಹತ್ತಿಕ್ಕುವ ನಡೆಯಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದೆ.

ಮೈಸೂರಿನಲ್ಲಿ ಪ್ರಜಾಭಾರತ ಸಾಮಾಜಿಕ ಮಾಧ್ಯಮ ಸಂಸ್ಥೆ ನಡೆಸುತ್ತಿರುವ ದೀಪಕ್ ಅವರು, 2019ರಲ್ಲಿ ತಮ್ಮ ಪತ್ರಿಕೆಯಲ್ಲಿ ಸಂಸದ ಪ್ರತಾಪ್ ಸಿಂಹ ಅವರನ್ನು ಕುರಿತು ‘ಪ್ರತಾಪಸಿಂಹನ ಬೆತ್ತಲೆ ಜಗತ್ತು’ ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿದ್ದರು. ವರದಿ ಕಾರಣಕ್ಕಾಗಿ ದೀಪಕ್ ವಿರುದ್ದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಯೂ ನಡೆಯುತ್ತಿದೆ.

Advertisements

ವಿಚಾರಣೆಯ ಹಂತದಲ್ಲಿರುವ ಪ್ರಕರಣದಲ್ಲಿ ಮೈಸೂರು ಪೊಲೀಸ್ ಡಿಸಿಪಿ ಮುತ್ತುರಾಜ್ ಅವರು ದೀಪಕ್ ಅವರಿಗೆ ಬುಧವಾರ ಸಂಜೆ ಸಮನ್ಸ್ ಜಾರಿಗೊಳಿಸಿದ್ದಾರೆ.

ಸಮನ್ಸ್‌ನಲ್ಲಿ, “2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರತಾಪ ಸಿಂಹ ಅವರ ವೈಯುಕ್ತಿಕ ಚಾರಿತ್ಯ ಕುರಿತಾಗಿ ಸುಳ್ಳಾಗಿರುವ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರಿಂದ ಶಾಂತಿಭಂಗ ಉಂಟು ಮಾಡುವ ಅಥವಾ ಸಾರ್ವಜನಿಕ ನೆಮ್ಮದಿಗೆ ತೊಂದರೆಯುಂಟು ಮಾಡುವ ಸಂಭವವಿತ್ತು. ನಿಮ್ಮ ವಿರುದ್ದ ಮುಂದಿನ ಕ್ರಮಕ್ಕೆ ನೀಡಿದ ವರದಿ ಮೇರೆಗೆ ಪ್ರಕರಣ ದಾಖಲಿಸಿಲಾಗಿದ್ದು, ಈ ರೀತಿಯ ದುರ್ವರ್ತನೆಯನ್ನು ತೋರದಂತೆ ನಿಮ್ಮ ವಿರುದ್ದ ವಿಚಾರಣೆ ಕೈಗೊಂಡು ನಿಗದಿತ ಅವಧಿಯವರೆಗೆ ವೈಯುಕ್ತಿಕ ಮುಚ್ಚಳಿಕೆ ಮತ್ತು ಅಷ್ಟೇ ಮೊತ್ತದ ಸೂಕ್ತ ಗಣ್ಯ ವ್ಯಕ್ತಿಯ ಜಾಮೀನುದಾರತೆಯನ್ನು ಏಕೆ ಪಡೆಯಬಾರದು” ಎಂದು ಕೇಳಲಾಗಿದೆ. ಅಲ್ಲದೆ, ಏಪ್ರಿಲ್ 12ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಪೊಲೀಸ್‌ ಸಮನ್ಸ್‌ಗೆ ಮೈಸೂರಿನ ಹಲವಾರು ಪ್ರಗತಿಪರ ಚಿಂತಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 25 ವರ್ಷಗಳಿಂದ ಮೈಸೂರಿನಲ್ಲಿ ನಾನಾ ಸುದ್ದಿಮಾಧ್ಯಮಗಳಲ್ಲಿ ಸೇವೆ ಸಲ್ಲಿಸಿರುವ ದೀಪಕ್ ಅವರು ಮೈಸೂರು ಪತ್ರಕರ್ತರ ಸಹಕಾರ ಸಂಘದ ಹಾಲಿ ಅಧ್ಯಕ್ಷರಾಗಿದ್ದಾರೆ. ಜನಪರ ಪತ್ರಿಕೋದ್ಯಮದ ಜೊತೆಗೆ ದಲಿತ ಚಳವಳಿ, ಪ್ರಗತಿಪರ ಚಳವಳಿಗಳಲ್ಲೂ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಚುನಾವಣೆಯ ಸಮಯದಲ್ಲಿ ಸಮನ್ಸ್‌ ನೀಡಿರುವ ಪತ್ರಿಕಾ ಸ್ವಾತಂತ್ರ್ಯದ ಹರಣವೆಂದು ಖಂಡಿಸಿದ್ದಾರೆ.

 

“2019ರ ಚುನಾವಣೆಯ ಸಮಯದಲ್ಲಿಯೂ ‘ಪ್ರಜಾಭಾರತ’ ಮಾಧ್ಯಮದ ಮೂಲಕ ಸರಣಿ ವರದಿ ಪ್ರಕಟಿಸಿ, ಮತದಾರರನ್ನು ಜಾಗೃತಗೊಳಿಸುವ ಕೆಲಸವನನ್ನು ದೀಪಕ್ ಮಾಡಿದ್ದರು. ಆ ಸಂದರ್ಭದಲ್ಲಿ ಬಿಜೆಪಿ ಸಂಸದ ಪ್ರತಾಪಸಿಂಹ ಕುರಿತಾದ ವರದಿ ವಿರುದ್ದ ಪ್ರಕರಣ ದಾಖಲಿಸಲಾಗಿತ್ತು. ನಂತರ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ, ಪ್ರಕರಣದಲ್ಲಿ ದೀಪಕ್ ವಿರುದ್ದ ಆರೋಪಪಟ್ಟಿ ಸಲ್ಲಿಸುವ ಮೂಲಕ ಪತ್ರಕರ್ತರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ನಡೆಸಿತ್ತು” ಎಂದು ಆಕ್ರೋಶ ವ್ಯಕ್ತವಾಗಿದೆ.

ಪ್ರಸ್ತುತ ಪ್ರಗತಿಪರ ಸಿದ್ಧಾಂತಗಳನ್ನು ಪ್ರತಿಪಾದಿಸುತ್ತೇವೆ ಎನ್ನುವ ಕಾಂಗ್ರೆಸ್‌ ಅಧಿಕಾರದಲ್ಲಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿಯೇ ಪತ್ರಕರ್ತರಿಗೆ ಸಮನ್ಸ್‌ ನೀಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X