ಉಡುಪಿ ಪ್ರಕರಣ | ಪೊಲೀಸರು ಅಧಿಕಾರಸ್ಥರ ಒತ್ತಡಕ್ಕೆ ಮಣಿಯುತ್ತಿದ್ದಾರೆ: ಬೊಮ್ಮಾಯಿ ಆರೋಪ

Date:

  • ‘ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಸಿದ್ದಾರೆ’
  • ಈ ಬಗ್ಗೆ ಗೃಹ ಸಚಿವರ ಸ್ಪಷ್ಟೀಕರಣ ನೀಡಬೇಕು: ಆಗ್ರಹ

ಉಡುಪಿ ಕಾಲೇಜೊಂದರ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಚಿತ್ರಗಳನ್ನು ತೆಗೆಯುವುದು ಹೇಯ ಕೃತ್ಯ ಮತ್ತು ಖಂಡನೀಯ. ಈ ಬಗ್ಗೆ ಟ್ವೀಟ್ ಮಾಡಿರುವ ವಿದ್ಯಾರ್ಥಿನಿಯ ವಿರುದ್ಧವೇ ತನಿಖೆ ಮಾಡುವ ರೀತಿ ಪೊಲೀಸರು ನಡೆದುಕೊಳ್ಳುತ್ತಿದ್ದು, ಅವರು ಯಾರ ಅಣತಿಯಂತೆ ನಡೆಯುತ್ತಿದ್ದಾರೆ? ಪೊಲೀಸರು ಅಧಿಕಾರಸ್ಥರ ಒತ್ತಡಕ್ಕೆ ಮಣಿಯುತ್ತಿದ್ದಾರೆ ಎಂದು ಆರೋಪಿಸಿದರು.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಮೊಬೈಲ್ ವಿಡಿಯೊಗಳನ್ನು ಸೀಜ್ ಮಾಡಬೇಕು. ಅದೇನು ದೊಡ್ಡ ಪ್ರಕರಣ ಅಲ್ಲ ಅಂತ ಗೃಹ ಸಚಿವರು ಈಗಲೇ ಹೇಳುತ್ತಿದ್ದಾರೆ. ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಸಿದ್ದಾರೆ.‌ ಸುಮ್ಮನೇ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಾಯಿತಾ? ಸುಮ್ಮನೇ ವಿದ್ಯಾರ್ಥಿಗಳು ತಪ್ಪೊಪ್ಪಿಗೆ ನೀಡಿದ್ದಾರಾ? ಏನೂ ಇಲ್ಲದೆ ಕಾಲೇಜಿನವರು ವಿದ್ಯಾರ್ಥಿಗಳನ್ನು ಅಮಾನತು ಮಾಡಿದ್ದಾರಾ? ಅವರ ಮೇಲೆ ಪ್ರಕರಣ ದಾಖಲಿಸಲು ತಪ್ಪೊಪ್ಪಿಗೆ ಒಂದೇ ಸಾಕು”ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಂತ್ರಾಲಯದಲ್ಲಿ ರಾಮನ ವಿಗ್ರಹ; ಆಂಧ್ರದಲ್ಲಿ ಬಿಜೆಪಿಯ ಪ್ರತಿಮಾ ರಾಜಕಾರಣ

“ಈ ಪ್ರಕರಣದಲ್ಲಿ ಏನೂ ಇಲ್ಲ ಎಂದು ಹೇಳುವುದಾದರೆ, ಪೊಲೀಸರಿಂದ ರಕ್ಷಣೆ ಸಿಗುವುದಿಲ್ಲ ಎನ್ನುವ ಭಾವನೆ ಮೂಡಲಿದೆ. ಹಿರಿಯ ಅಧಿಕಾರಿಗಳು ಕಾನೂನು ಪ್ರಕಾರ ನಡೆದುಕೊಳ್ಳಲು ಕ್ರಮ ಕೈಗೊಳ್ಳಬೇಕು. ಕೆಳಗಿನ ಅಧಿಕಾರಿಗಳು ಒತ್ತಡಕ್ಕೆ ಮಣಿದು ಕೆಲಸ ಮಾಡಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಹಿರಿಯ ಪೊಲೀಸ್ ಅಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳಬೇಕು. ತಗ್ಗಿ ಬಗ್ಗಿ ನಡೆದರೆ, ಪೊಲೀಸ್ ಇಲಾಖೆಯ ಮೇಲೆ ವಿಶ್ವಾಸ ಕಡಿಮೆಯಾಗಲಿದೆ” ಎಂದರು.

“ಗೃಹ ಸಚಿವರು ಇದು ಫೆಕ್ ನ್ಯೂಸ್ ಅಂತ ಹೇಳಿದ್ದಾರೆ. ಹಾಗಾದರೆ, ಕಾಲೇಜು ವಿದ್ಯಾರ್ಥಿಗಳು ತಪ್ಪೊಪ್ಪಿಗೆ ಯಾಕೆ ಕೊಟ್ಟಿದ್ದಾರೆ. ಅವರನ್ನು ಯಾಕೆ ಅಮಾನತು ಮಾಡಿದರು? ಈ ಬಗ್ಗೆ ಗೃಹ ಸಚಿವರು ಸ್ಪಷ್ಟೀಕರಣ ನೀಡಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...