ಕೊಡಗು | ಪೊನ್ನಂಪೇಟೆ ತಾಲ್ಲೂಕು ಪಂಚಾಯತಿ ಪ್ರಭಾರ ಯೋಜನಾಧಿಕಾರಿ ಹೃದಯಾಘಾತದಿಂದ ನಿಧನ

Date:

Advertisements

ಕೊಡಗು ಜಿಲ್ಲೆ, ವಿರಾಜಪೇಟೆ ತಾಲ್ಲೂಕಿನ ತಿತಿಮತಿಯಿಂದ ಪಿರಿಯಾಪಟ್ಟಣಕ್ಕೆ ಆಲ್ಟೋ ಕಾರಿನಲ್ಲಿ ಶುಕ್ರವಾರ ಸಂಜೆ 4 ರ ಆಸುಪಾಸಿನಲ್ಲಿ ಪ್ರಯಾಣಿಸುವಾಗ ಬೂದಿತಿಟ್ಟು ಬಳಿ ಹೃದಯಾಘಾತದಿಂದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ ಮನಮೋಹನ್ (46) ನಿಧನರಾಗಿದ್ದಾರೆ.

ಮೂಲತಃ ಬೆಂಗಳೂರಿನವರಾಗಿದ್ದು, ಕರ್ತವ್ಯ ನಿಮಿತ್ತ ತಿತಿಮಿತಿಯಲ್ಲಿ ಕುಟುಂಬ ಸಹಿತ ವಾಸಿಸುತ್ತಿದ್ದರು. ಪೊನ್ನಪ್ಪ ಸಂತೆ, ನಿಟ್ಟೂರು, ಬಾಳೆಲೆ, ಸೋಮವಾರಪೇಟೆ, ಸಿದ್ದಾಪುರದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದರು. ಕಳೆದ ಒಂದೂವರೆ ತಿಂಗಳಿನಿಂದ ಪೊನ್ನಂಪೇಟೆ ತಾಲೂಕು ಪಂಚಾಯಿತಿಯಲ್ಲಿ ಪ್ರಭಾರ ಯೋಜನಾಧಿಕಾರಿಯಾಗಿದ್ದರು.

ಮೈಸೂರು ಜಿಲ್ಲೆ ಪಿರಿಯಾಪಟ್ಟಣಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಕಾರಿನ ಚಾಲನೆಯಲ್ಲಿರುವಾಗಲೇ ಹೃದಯಾಘಾತವಾಗಿ ಸಾವನಪ್ಪಿದ್ದಾರೆ ಎಂದು ಸ್ಥಳೀಯರಿಂದ ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಅರ್ಚರಿ, ಫೆನ್ಸಿಂಗ್ ಕ್ರೀಡಾ ನಿಲಯಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಭೇಟಿ; ಪರಿಶೀಲನೆ

ಮೃತರ ನಿಧನಕ್ಕೆ ಪೊನ್ನಂಪೇಟೆ ತಾಲೂಕು ಪಂಚಾಯಿತಿಯ ಕಾರ್ಯನಿರ್ವಣಾಧಿಕಾರಿ ಹಾಗೂ ಸಿಬ್ಬಂದಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X