ಕುಣಿಗಲ್ ಸರ್ಕಾರಿ ಕಾಲೇಜಿನಲ್ಲಿ ಕಳಪೆ ಫಲಿತಾಂಶ; ತಾಲೂಕು ಅಧಿಕಾರಿ ಭೇಟಿ, ಪರಿಶೀಲನೆ

Date:

ತುಮಕೂರಿನ ಕುಣಿಗಲ್ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ಬಾರಿಯ ಪ್ರಥಮ ಸೆಮಿಸ್ಟರ್ ಫಲಿತಾಂಶದಲ್ಲಿ ಕಳಪೆ ಫಲಿತಾಂಶ ಹೊರಬಿದ್ದಿದೆ. ಮೂಲಸೌಕರ್ಯ ಕೊರತೆ ಹಾಗೂ ಕಾಲೇಜಿನ ಅವ್ಯವಸ್ಥೆಯ ಕುರಿತು ಸ್ಥಳೀಯರಿಂದ ದೂರು ಬಂದ ಹಿನ್ನೆಲೆ, ತಾಲೂಕು ಉಸ್ತುವಾರಿ ಅಧಿಕಾರಿ ವಿಶ್ವನಾಥ್ ನಿನ್ನೆ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

ವಾಣಿಜ್ಯ ವಿಭಾಗದಲ್ಲಿ ಒಟ್ಟು 190 ವಿದ್ಯಾರ್ಥಿಗಳು ಪ್ರಥಮ ಸೆಮಿಸ್ಟರ್‌ ಪರೀಕ್ಷೆ ಬರೆದಿದ್ದರು. ಈ ಪೈಕಿ ಕೇವಲ 8 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇಷ್ಟು ಕಡಿಮೆ ಫಲಿತಾಂಶದ ಕುರಿತು ಆತಂಕ ವ್ಯಕ್ತಪಡಿಸಿರುವ ಅವರು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕುರಿತ ವೈಯಕ್ತಿಕ ಮಾಹಿತಿ ಹಾಗೂ ವಿಷಯವಾರು ಉಪನ್ಯಾಸಕರ ಫಲಿತಾಂಶದ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ ಕಾಲೇಜಿನ ಪ್ರಾಂಶುಪಾಲ ಮಾಯಾ ಸಾರಂಗ ಪಾಣಿಯವರಿಗೆ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸುಮಾರು ರೂ 5 ಕೋಟಿ ವೆಚ್ಚದಲ್ಲಿ ಕಾಲೇಜಿನ ಆವರಣದಲ್ಲಿ ಸುಸಜ್ಜಿತ ಗ್ರಂಥಾಲಯ ಮತ್ತು ಪ್ರಯೋಗಾಲಯಗಳು ನಿರ್ಮಾಣಗೊಂಡಿವೆ. ಉದ್ಘಾಟನೆಯಾಗಿ ತಿಂಗಳುಗಳೇ ಕಳೆದರು ಬಳಕೆಗೆ ಸಿಗದಿರುವಷ್ಟು ದುಸ್ಥಿತಿಗೆ ತಲುಪಿರುವುದ ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ತುಮಕೂರು | “ನಮ್ಮ ಕನಸು, ನಮ್ಮ ತುಮಕೂರು ಶೃಂಗಸಭೆ” : ಜಿಲ್ಲೆಯ ಸಮಗ್ರ ಅಭಿವೃದ್ದಿ ಕುರಿತು ಚರ್ಚೆ

ತಾಲೂಕಿನಲ್ಲಿರುವ ಏಕೈಕ ಸರ್ಕಾರಿ ಪ್ರಥಮ ಕಾಲೇಜು ಶೈಕ್ಷಣಿಕ ಕುಂಠಿತ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಮುಂದಿನ ದಿನಗಳಲ್ಲಿ ಶಾಸಕರ ಸಹಿತ ನಿರಂತರವಾಗಿ ಕಾಲೇಜಿಗೆ ಭೇಟಿ ನೀಡಿ ಸಭೆ ನಡೆಸಲಾಗುವುದು. ಶೈಕ್ಷಣಿಕ ಪ್ರಗತಿಗೆ ಪೂರಕವಾದ ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಪ್ರಾಂಶುಪಾಲರಿಗೆ ಸೂಚನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...