ಬೀದರ್‌ | ಔರಾದ್‌ ತಾಲೂಕಿನಲ್ಲಿ ಜೆಜೆಎಂ ಕಾಮಗಾರಿ ಕಳಪೆ: ತನಿಖೆಗೆ ಆಗ್ರಹ

Date:

‌ಬೀದರ್‌ ಜಿಲ್ಲೆಯ ಔರಾದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಕೂಡಲೇ ತನಿಖೆ ನಡೆಸಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಜಾ ಶಕ್ತಿ ಸಮಿತಿಯಿಂದ ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರುಗಡೆ ಧರಣಿ ಸತ್ಯಾಗ್ರಹ ನಡೆಸಿದರು.

- Advertisement -

ʼಔರಾದ ತಾಲೂಕಿನ ನಿಡೋದಾ, ಬೆಡಕುಂದಾ, ಬಳತ (ಬಿ) ಬಳತ (ಕೆ), ನಾಗೂರ (ಎಂ), ಹೆಡಗಾಪೂರ, ರಕ್ಷಾಳ, ಆಲೂರ (ಕೆ), ಬೋರಾಳ, ಅಲ್ಲಾಪೂರ, ಸಂತಪೂರ, ಬಲ್ಲೂರ, ಸುಂಧಾಳ, ಮಮದಾಪೂರ, ಕೌಡಗಾಂವ, ಕೌಠಾ, ಜವಲತಾಂಡಾ, ಕಾರಬಾರ ತಾಂಡ, ಮಾಹರಾಜವಾಡಿ ತಾಂಡಾ ಸೇರಿದಂತೆ ಹಲವು ಗ್ರಾಮಗಳಲ್ಲಿ ಕೈಗೊಂಡಿರುವ ಜಲ ಜೀವನ್‌ ಮಿಷನ್ ಕಾಮಗಾರಿ ಕಳಪೆ ಮಟ್ಟದಿಂದ ನಡೆಸಿ, ನಕಲಿ ಬಿಲ್ ಸೃಷ್ಟಿಸಿ ಸರ್ಕಾರದ ಕೋಟ್ಯಾಂತರ ಹಣ ಲೂಟಿ ಮಾಡಿದ್ದಾರೆʼ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ʼಈ ಸಂಬಂಧ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಹಲವು ಬಾರಿ ಖುದ್ದು ಭೇಟಿಯಾಗಿ ಮನವಿ ಸಲ್ಲಿಸಿದರೂ ಇಲ್ಲಿಯವರೆಗೂ ಪರಿಶೀಲನೆ ನಡೆಸಿಲ್ಲ. ಸಂಬಂಧಪಟ್ಟ ಅಧಿಕಾರಿಗಳ, ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಂಡಿಲ್ಲ. ಈಗಲಾದರೂ ಉನ್ನತ ಮಟ್ಟದ ತನಿಖೆ ತಂಡ ರಚಿಸಿ ತಪ್ಪಿಸ್ಥ ಅಧಿಕಾರಿಗಳ, ಗುತ್ತಿಗೆದಾರರ ವಿರುದ್ಧ ಕಾನೂನಿನ ಕ್ರಮ ಜರುಗಿಸಬೇಕು. ಒಂದು ವಾರದೊಳಗೆ ಕ್ರಮ ತೆಗೆದುಕೊಳ್ಳದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರ ಮನೆ ಮುಂದೆ ಆಮರಣ ಉಪವಾಸ ಸತ್ಯಗ್ರಹ ನಡೆಸಲಾಗುವುದುʼ ಎಂದು ಎಚ್ಚರಿಸಿದರು.

ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಸಲ್ಲಿಸಿದರು..

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬುಲ್ಡೋಜರ್‌, ತಲವಾರು ಹೇಳಿಕೆ; ಬಿಜೆಪಿ ಮುಖಂಡರಿಗೆ ಸೌಹಾರ್ದ ಕರ್ನಾಟಕ ಬೇಕಿಲ್ಲವೇ?!

ಕರ್ನಾಟಕ ಪ್ರಜಾ ಶಕ್ತಿ ಸಮಿತಿ ಜಿಲ್ಲಾಧ್ಯಕ್ಷ ಸಾಯಿ ಶಿಂಧೆ, ನಗರ ಘಟಕ ಅಧ್ಯಕ್ಷ ವಿನೋದ ಶಿಂಧೆ, ಉಪಾಧ್ಯಕ್ಷ ಮಹೇಂದ್ರಕುಮಾರ ಹೊಸಮನಿ ಸೇರಿದಂತೆ ಪ್ರಮುಖರಾದ ಶಿವ ಬೇಲೂರೆ, ಆಕಾಶ ತ್ರಿಮುಖೆ, ಧನರಾಜ ಮೇತ್ರೆ, ಗುರು ನೇಮತಾಬಾದ, ಸಂದೀಪ ಕಾಂಟೆ, ಸಂಗಮೇಶ ಭಾವಿದೊಡ್ಡಿ, ಜೈಭೀಮ ಖ್ಯಾದೆ, ಗೌತಮ ಪ್ರಸಾದ, ಅಖೀಲೇಶ ಸಾಗರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶರೈತರ ಹಕ್ಕುಗಳ ಅರಿವಿನಿಂದ ಅರಣ್ಯ ಅಧಿಕಾರಿಗಳಿಗೆ ನಡುಕ: ಆರ್. ಶ್ರೀನಿವಾಸನ್

ರೈತರು ನಿದ್ದೆ ಮಾಡುವ ಸಂದರ್ಭವನ್ನು ಬಳಸಿಕೊಂಡು ಬೆಳಗಿನ ಜಾವ ಪೊಲೀಸ್ ಬೆಂಗಾವಲಿನಲ್ಲಿ...

OBC ವಿದ್ಯಾವಂತ ನಿರುದ್ಯೋಗಿಗಳ ಕುರಿತು ಅಧ್ಯಯನ; ಪ್ರವೀಣ ಪತ್ತಾರಗೆ ಕವಿವಿ ಪಿಎಚ್‌ಡಿ

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಸಮಾಜಶಾಸ್ತ್ರ ವಿಭಾಗದ ಸಂಶೋಧಕರಾದ ಪ್ರವೀಣ ಪತ್ತಾರ ಅವರು...

ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...

ಬೀದರ್‌ | ಬೈಕ್ ಅಪಘಾತ: ಇಬ್ಬರು ಯುವಕರು ಸಾವು

ನೆರೆಯ ತೆಲಂಗಾಣದ ಸಂಗಾರೆಡ್ಡಿ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ...