ಮಂಡ್ಯ | ಜೀತಕ್ಕಿದ್ದ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಿದ ಜಿಲ್ಲಾಡಳಿತ

Date:

ಅತ್ಯಾಧುನಿಕತೆಯ ಕಾಲದಲ್ಲೂ ಜೀತದಾಳುಗಳಾಗಿ ದುಡಿಯುತ್ತಿದ್ದ ಕುಟುಂಬವನ್ನು ಜೀತಮುಕ್ತಿಗೊಳಿಸಿರುವ ಜಿಲ್ಲಾಡಳಿತ ಯತ್ತಗದಹಳ್ಳಿ ಜ್ಞಾನಸಿಂಧು ವೃದ್ಧಾಶ್ರಮದಲ್ಲಿ ಪುನರ್ವಸತಿ ಕಲ್ಪಿಸಿದೆ.

- Advertisement -

ಮದ್ದೂರು ತಾಲೂಕಿನ ಕೋಣಸಾಲೆ ಗ್ರಾಮದ ವೆಂಕಟೇಶ್‌ ಮತ್ತು ಗೀತಾ ದಂಪತಿಗಳು ಕಳೆದ 7 ವರ್ಷಗಳಿಂದ ಮುರುಳಿ ಎಂಬುವರ ಹಂದಿ ಸಾಕಣಿಕೆ ಕೇಂದ್ರದಲ್ಲಿ ಜೀತದಾಳುಗಳಾಗಿ ದುಡಿಯುತ್ತಿದ್ದು, ಮಾಲೀಕನ ಹಿಂಸೆ ತಾಳಲಾರದೆ ದೂರವಾಣಿ ಕರೆ ಮೂಲಕ ತಹಶೀಲ್ದಾರ್‌ಗೆ ದೂರು ನೀಡಿದ್ದರು. ದೂರಿನ ಮೇರೆಗೆ ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದ ಅಧಿಕಾರಿಗಳು ಕುಟುಂಬವನ್ನು ಜೀತಮುಕ್ತಿಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಹಂದಿ ಸಾಕಾಣಿಕೆ ಕೇಂದ್ರದ ಮಾಲೀಕ ಮುರುಳಿ ಸಾಲದ ನೆಪವೊಡ್ಡಿ ಕಳೆದ 7 ವರ್ಷಗಳಿಂದ ದಂಪತಿಗಳನ್ನು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದ. ದಿನಕ್ಕೆ ತಲಾ 250 ರೂಪಾಯಿ ಕೂಲಿ ನಿಗದಿ ಮಾಡಿದ್ದ ಮಾಲೀಕ, ಕೇವಲ 5 ಸಾವಿರ ಮಾತ್ರ ಕೊಡುತ್ತಿದ್ದ. ದಂಪತಿಗಳಿಬ್ಬರನ್ನೂ ಒತ್ತಾಯಪೂರ್ವಕವಾಗಿ ದುಡಿಸಿಕೊಳ್ಳುತ್ತಿದ್ದು, ದೈಹಿಕ ಕಿರುಕುಳ ನೀಡುತ್ತಿದ್ದ. ಇದೆಲ್ಲವನ್ನು ಪರಿಶೀಲನೆ ನಡೆಸಿರುವ ತಹಶೀಲ್ದಾರ್‌ ಸೋಮಶೇಖರ್ ಮಾಲೀಕ ಮುರಳಿ ಎಂಬಾತನ ವಿರುದ್ಧ ಬೆಸಗರಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಕುರಿತು ಈ ದಿನ.ಕಾಮ್ ಜೊತೆ ಮಾತನಾಡಿರುವ ಸಂತ್ರಸ್ತರು, “ಏಳು ವರ್ಷಗಳ ಹಿಂದೆ ಸ್ನೇಹಿತರ ಸಂಪರ್ಕದ ಮೂಲಕ ಮುಂಗಡ ಹಣ ಪಡೆದು ಪ್ರತೀ ದಿನಕ್ಕೆ ತಲಾ 250 ರೂಗಳ ಕೂಲಿಯಂತೆ ಅಲ್ಲಿ ಕೆಲಸಕ್ಕೆ ಸೇರಿದ್ದೆವು. ಅಂದರೆ ಪ್ರತೀ ತಿಂಗಳಿಗೆ ಇಬ್ಬರಿಗೂ ಸೇರಿ 15 ಸಾವಿರ ಸಂಬಳವನ್ನು ಕೊಡುವುದಾಗಿ ಹೇಳಿದ್ದರು. ಆದರೆ, ನಾಲ್ಕೈದು ಸಾವಿರದ ಮೇಲೆ ಸಂಬಳ ಕೊಟ್ಟೇ ಇಲ್ಲ. ಬೆಳಗ್ಗೆಯಿಂದ ಸಂಜೆವರೆಗೆ ಕೆಲಸ ಮಾಡಬೇಕಿತ್ತು. ಕೆಲಸದಲ್ಲಿ ತಡವಾದರೆ ಹೊಡೆಯುವುದು ಮತ್ತು ಬೈಯ್ಯುವುದು ಮಾಡುತ್ತಿದ್ದರು” ಎಂದು ತಮ್ಮ ಅಳಲನ್ನು ತೋಡಿಕೊಂಡರು.

ಇದನ್ನು ಓದಿದ್ದೀರಾ? ಬೆಳಗಾವಿ | ಅಗ್ನಿ ಅವಘಡದಿಂದ ಯುವಕ ಸಾವು; ಪರಿಹಾರಕ್ಕೆ ಆಗ್ರಹ

ಜೀತ ಪ್ರಕರಣದ ಕುರಿತು ಈ ದಿನ.ಕಾಮ್‌ಗೆ ಪ್ರತಿಕ್ರಿಯಿಸಿದ ಮಂಡ್ಯ ಎಸಿ ಶಿವಮೂರ್ತಿ, “ಜೀತ ಸಂತ್ರಸ್ತರನ್ನು ರಕ್ಷಿಸಿ, ಪುನರ್ವಸತಿ ಕೇಂದ್ರದಲ್ಲಿ ಇರಿಸಲಾಗಿದೆ. ಮಾಲೀಕನ ಮೇಲೆ ಬೆಸಗರಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಅಟ್ರಾಸಿಟಿ ದೂರು ಕೂಡ ದಾಖಲಾಗಿದೆ. ಜಿಲ್ಲಾಡಳಿತ ವತಿಯಿಂದ ಸಂತ್ರಸ್ತ ದಂಪತಿಗೆ ತಲಾ 25 ಸಾವಿರ ಪರಿಹಾರ ನೀಡುತ್ತಿದ್ದು, ಜೀತ ವಿಮುಕ್ತಿ ಪ್ರಮಾಣಪತ್ರವನ್ನು ಕೊಡಲಾಗಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...