ಅಕ್ಟೋಬರ್ 28ರಂದು ಕಾರವಾರ, ಕುಮಟಾ ಹಾಗೂ ಗೋಕರ್ಣ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

Date:

ಕಾರವಾರ: ತುರ್ತು ವಿದ್ಯುತ್ ಮಾರ್ಗ ನಿರ್ವಹಣೆ ಹಾಗೂ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗಳ ಹಿನ್ನೆಲೆಯಲ್ಲಿ ಅಕ್ಟೋಬರ್ 28ರಂದು ಕಾರವಾರ ಮತ್ತು ಕುಮಟಾ ಉಪವಿಭಾಗಗಳ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

ಕಾರವಾರ ಹೆಸ್ಕಾಂ ಉಪವಿಭಾಗದ ವ್ಯಾಪ್ತಿಯಲ್ಲಿ ತುರ್ತು ಲೈನ್ ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ಬೆಳಗ್ಗೆ 9.30ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಾರವಾರ ಟೌನ್ ಮತ್ತು ಕೋಡಿಭಾಗ ಫೀಡರ್‌ಗಳ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಈ ಸುದ್ದಿ ಓದಿದ್ದೀರಾ? ಅಂಕೋಲಾ | ಬಾಳೆಗುಳಿ–ಮಾಸ್ತಿಕಟ್ಟಾ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ

ಇನ್ನು ಕುಮಟಾ ಹೆಸ್ಕಾಂ ಉಪವಿಭಾಗದ ನಗರ ಶಾಖೆಯ 11 ಕೆ.ವಿ. ಚಿತ್ರಗಿ ಮತ್ತು ಗ್ರಾಮೀಣ ಶಾಖೆಯ 11 ಕೆ.ವಿ. ಧಾರೇಶ್ವರ ಮಾರ್ಗಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗಾಗಿ ವಿದ್ಯುತ್ ಮಾರ್ಗ ಸ್ಥಳಾಂತರಿಸಲಾಗುತ್ತದೆ. ಹೀಗಾಗಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಚಿತ್ರಗಿ ಮಾರ್ಗದ ಎಪಿಎಂಸಿ ಹೊನ್ಮಾಂವ್, ಕುಂಬಾರಮಕ್ಕಿ, ಅಳ್ವೆಕೊಡಿ, ಅಳ್ವೆದಂಡೆ ಹಾಗೂ ಧಾರೇಶ್ವರ ಮಾರ್ಗದ ಎಲ್ಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಅದೇ ರೀತಿ 33 ಕೆ.ವಿ. ಗೋಕರ್ಣ ಮತ್ತು ಮಿರ್ಜಾನ್ ಉಪಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ಮಾದನಗೇರಿ, ಗೋಕರ್ಣ, ತದಡಿ, ಬಂಕಿಕೊಡ್ಲ, ಬಿಜ್ಜೂರ, ಗಂಗಾವಳಿ, ಮಿರ್ಜಾನ್, ಖಂಡಗಾರ, ನಾಗೂರ, ಕೋಡ್ಕಣಿ, ದಿವಗಿ ಮತ್ತು ಉಪ್ಪಿನಪಟ್ಟಣ ಮಾರ್ಗಗಳಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಸಂಬಂಧಪಟ್ಟ ಪ್ರದೇಶಗಳ ಗ್ರಾಹಕರು ಹೆಸ್ಕಾಂನೊಂದಿಗೆ ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ಆಲಳ್ಳಿಯಲ್ಲಿ ವೃದ್ಧೆ ಅನುಮಾನಾಸ್ಪದ ಸಾವು; ₹1.70 ಲಕ್ಷ ನಗದು, ಚಿನ್ನಾಭರಣ ನಾಪತ್ತೆ

ಮುಂಡಗೋಡ ತಾಲೂಕಿನ ಆಲಳ್ಳಿ ಗ್ರಾಮದಲ್ಲಿ 75 ವರ್ಷದ ಮಹಿಳೆಯೊಬ್ಬರು ಮನೆಯಲ್ಲಿ ಅನುಮಾನಾಸ್ಪದವಾಗಿ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ, ಬಡಪಾಯಿ ಜನರಿಗೆ ರೊಟ್ಟಿಯೂ ತುಟ್ಟಿ!

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ...

ಅಂಕೋಲಾ | ಬಾಳೆಗುಳಿ–ಮಾಸ್ತಿಕಟ್ಟಾ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ

ಯಲ್ಲಾಪುರ–ಅಂಕೋಲಾ ರಾಷ್ಟ್ರೀಯ ಹೆದ್ದಾರಿ 52ರ ಬಾಳೆಗುಳಿ ಕ್ರಾಸ್‌ನಿಂದ ಮಾಸ್ತಿಕಟ್ಟಾವರೆಗಿನ ರಸ್ತೆ ಸಂಪೂರ್ಣ...

ಚಿಂತಾಮಣಿ ಪೊಲೀಸರ ಭರ್ಜರಿ ಕಾರ್ಯಾಚರಣೆ : ಡಿವೈಎಸ್ಪಿ ರಘು ಎನ್ ನೇತೃತ್ವದಲ್ಲಿ ವಾಹನ ತಪಾಸಣೆ

ಇತ್ತೀಚೆಗೆ ಹೆಚ್ಚಾಗುತ್ತಿರುವ ರಸ್ತೆ ಅಪಘಾತಗಳ ಬೆನ್ನೆಲೆಯಲ್ಲಿ, ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು...