ರಾಯಚೂರು ಶಾಖೋತ್ಪನ್ನ ಕೇಂದ್ರದ ವಿದ್ಯುತ್ ಸ್ಥಾವರದ 4ನೇ ಘಟಕದಲ್ಲಿ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ರಾಯಚೂರು ತಾಲೂಕಿನ ಶಕ್ತಿನಗರದಲ್ಲಿ ನಡೆದಿದೆ.
ಯಾದಗಿರಿ ನಗರದ ನಿವಾಸಿ ನಿಂಗಪ್ಪ(45) ಎಂಬುವರು ವಿದ್ಯುತ್ ಸ್ಪರ್ಶಕ್ಕೆ ಬಲಿಯಾದ ದುರ್ದೈವಿ, ಮೃತ ಕಾರ್ಮಿಕರು ಆರ್‌ಟಿಪಿಎಸ್ 4ನೇ ಘಟಕದಲ್ಲಿ ಇಎಸ್‌ಪಿಸಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸದ ವೇಳೆ ವಿದ್ಯುತ್ ಸ್ಪರ್ಶವಾಗಿ ಕಾರ್ಮಿಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಹಲವು ಬಾರಿ ಈ ರೀತಿಯಾದ ಘಟನೆಗಳು ನಡೆಯುತ್ತಿದ್ದರೂ ಆಡಳಿತ ಮಂಡಳಿ ಕಾರ್ಮಿಕರಿಗೆ ಸೇವಾ ಭದ್ರತೆ ನೀಡದೆ ಸತಾಯಿಸುತ್ತಿದೆ ಎಂದು ಆರ್‌ಟಿಪಿಎಸ್ ಆಡಳಿತ ಮಂಡಳಿಯ ವಿರುದ್ಧ ಕಾರ್ಮಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರ್‌ಟಿಪಿಎಸ್ ಘಟಕದ ಎದುರು ದಿಢೀರನೆ ಪ್ರತಿಭಟನೆ ನಡೆಸಿ ಕಾರ್ಮಿಕರಿಗೆ ಸೂಕ್ತ ಭದ್ರತೆ, ಮೃತ ಕಾರ್ಮಿಕ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸುವಂತೆ ಆಗ್ರಹಿಸಿದ್ದಾರೆ.