ಉಡುಪಿ | ಸರ್ವಜ್ಞರು ತಮ್ಮ ವಚನಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದಿದರು – ಪ್ರಭಾಕರ ಪೂಜಾರಿ

Date:

ಸರ್ವಜ್ಞರು ತಮ್ಮ ವಚನಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಮೂಲಕ ಸಮಾಜದಲ್ಲಿ ಸಮಾನತೆಯನ್ನು ಸಾರಿದರು ಎಂದು ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ ತಿಳಿಸಿದರು.

- Advertisement -

ಅವರು ಇಂದು ನಗರದ ಕಡಿಯಾಳಿಯ ಯು.ಕಮಲಬಾಯಿ ಪ್ರೌಢಶಾಲೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕುಲಾಲ ಸಂಘಗಳ ಒಕ್ಕೂಟ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು
ಸರ್ವಜ್ಙರ ವಚನಗಳು ಅರ್ಥಪೂರ್ಣವಾಗಿದ್ದು, ಪ್ರತಿಯೊಬ್ಬರು ಅವರ ವಚನಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದ ಅವರು ಸಮಾಜದಲ್ಲಿನ ಮೂಡನಂಬಿಕೆ ಜಾತಿ ವ್ಯವಸ್ಥೆ ಡಾಂಬಿಕ ಭಕ್ತಿಯನ್ನು ಕಟ್ಟುವಾಗಿ ಅವರು ಖಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿ, ದೇಶದ ಏಳಿಗೆಯಲ್ಲಿ ದಾರ್ಶನಿಕರು, ಸಾಹಿತಿಗಳು ಹಾಗೂ ಕವಿಗಳ ಸೇವೆ ಅಪಾರವಾಗಿದ್ದು, ಅವರ ಸಾಧನೆಗಳನ್ನು ತಿಳಿದುಕೊಂಡು ಅವರ ಧ್ಯೇಯೋದ್ದೇಶಗಳನ್ನು ನಮ್ಮ ಜೀವನದಲ್ಲಿ ಅನುಸರಿಸಬೇಕು. ಸಮಾಜಕ್ಕೆ ನಾಡಿಗೆ ಉತ್ತಮ ಕೊಡುಗೆ ನೀಡುವಲ್ಲಿ ಅವರು ನೀಡುವ ಪ್ರೇರಣೆ ನಮ್ಮ ಬದುಕಿನ ಸಾಧನೆಗೆ ಹೊಸ ಮುನ್ನುಡಿಯಾಗಲಿ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಶೇಖರ ಕುಲಾಲ್ ಉಪನ್ಯಾಸ ನೀಡಿ ಮಾತನಾಡಿ, ತ್ರಿಪದಿಯ ಬ್ರಹ್ಮ ಎಂದು ಕರೆಯಲ್ಪಡುವ ಸರ್ವಜ್ಙರು, ತ್ರಿಪದಿಗಳ ಮೂಲಕ ಬದುಕಿನ ಮೌಲ್ಯಗಳನ್ನು ಸರಳವಾಗಿ ಜನರಿಗೆ ಬೋಧಿಸಿದರು, , ಸಮಾಜದಲ್ಲಿನ ಜಾತಿ ಪದ್ದತಿಯನ್ನು ವಿರೋಧಿಸಿದ ಅವರು, ತಮ್ಮ ವಚನಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾಧನ್ಯತೆ ನೀಡುವುದರ ಜೊತೆಗೆ ದಾನಗಳ ಮಹತ್ವವನ್ನು ಜನರಿಗೆ ಮನದಟ್ಟು ಮಾಡುವಲ್ಲಿ ಶ್ರಮಿಸಿದರು ಎಂದರು.

ಕುಲಾಲ ಸಂಘದ ಅಧ್ಯಕ್ಷ ಕಾಳು ಕುಲಾಲ್ ಕವಿ ಸರ್ವಜ್ಙರ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಗಣಪತಿ, ಸರಕಾರದ ಗ್ಯಾರಂಟಿ ಯೋಜನೆಯ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಲಾಲ್, ಕುಲಾಲ್ ಸಮುದಾಯದ ಪದಾಧಿಕಾರಿಗಳು, ಶಾಲೆಯ ಬೋಧಕ ಹಾಗೂ ಬೋಧಕೇತರ ವರ್ಗ, ವಿದ್ಯಾರ್ಥಿಗಳು, ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ತೇಜಸ್ ವಿ.ಬಂಗೇರ ನಿರೂಪಿಸಿದರೆ ಕಡಿಯಾಳಿ ಯು. ಕಮಲಬಾಯಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸುದರ್ಶನ್ ನಾಯಕ್ ವಂದಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...