ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಪ್ರಕರಣ | ಹಾಸನ ಚಲೋ; ವಿಕೃತ ಕಾಮಿ ಪ್ರಜ್ವಲ್ ಬಂಧನಕ್ಕೆ ಮೊಳಗಿದ ಘೋಷಣೆ

Date:

ಬಂಧಿಸಿ ಬಂಧಿಸಿ ವಿಕೃತಿ ಕಾಮಿ ಪ್ರಜ್ವಲ್‌ನನ್ನು ಬಂಧಿಸಿ. ಅಡಗಲಿ ಅಡಗಲಿ ಪಾಳೇಗಾರಿಕೆ ಅಡಗಲಿ. ಪ್ರಜ್ವಲ್ ರೇವಣ್ಣನ ಬಂಧನ ಕೂಡಲೇ ಆಗಬೇಕು. ದೇವೆಗೌಡರ ಕುಟುಂಬಕ್ಕೆ ಧಿಕ್ಕಾರ. ಸಂತ್ರಸ್ತ ಮಹಿಳೆಯರೇ ಹೆದರಬೇಡಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಿದ್ದಾರೆ.

ಹಾಸನ ನಗರದ ಮಹಾರಾಜ ಪಾರ್ಕ್ ಮುಂಭಾಗ ಆರಂಭವಾದ ಹಾಸನ ಚಲೋ ಬೃಹತ್ ಹೋರಾಟದ ಆರಂಭದಲ್ಲಿ ಘೋಷವಾಕ್ಯಗಳನ್ನು ಕೂಗುವ ಮೂಲಕ ಅತ್ಯಾಚಾರಿ ಆರೋಪಿ ಪ್ರಜ್ವಲ್‌ ರೇವಣ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸುಮಾರು 11 ಗಂಟೆಗೆ ಆರಂಭವಾದ ಹೋರಾಟದಲ್ಲಿ ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ಪ್ರಗತಿಪರ ಹೋರಾಟಗಾರರು, ಸಾಹಿತಿಗಳು, ಚಿಂತಕರು, ಕೂಲಿ ಕಾರ್ಮಿಕರು ಸೇರಿದಂತೆ ಹಲವು ಮಹಿಳಾಪರ ಸಂಘಟನೆಗಳು, ಜನಪರ ಸಂಘಟನೆಗಳು ಬ್ಯಾನರ್, ಪೋಸ್ಟರ್‌ಗಳನ್ನು ಹಿಡಿದು ಕಾಮುಕ ಪ್ರಜ್ವಲ್‌ ರೇವಣ್ಣ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಪ್ರತಿಭಟನಾ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಜ್ಯದ ಮೂಲೆ ಮೂಲೆಗಳಿಂದ ಟೆಂಪೋ, ಟ್ರಕ್‌ಗಳಲ್ಲಿ ಬಂದ ಸಾವಿರಾರು ಮಂದಿ ಮಹಿಳೆಯರು, ಹೋರಾಟಗಾರರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.

ಮಹಾರಾಜ ಪಾರ್ಕ್‌ನಿಂದ ಆರಂಭವಾದ ಹಾಸನ ಚಲೋ ಪ್ರತಿಭಟನಾ ಮೆರವಣಿಗೆಯು ಎನ್ ಆರ್ ವೃತ್ತದ ಮೂಲಕ ಸಾಗಿ ತಾಲೂಕು ಕಚೇರಿ ವೃತ್ತದ ಬಳಿಯ ಹಾಸನ ಚಲೋ ವೇದಿಕೆಯನ್ನು ಸೇರಿತು.

ಪ್ರತಿಭಟನೆಯ ದಾರಿಯುದ್ದಕ್ಕೂ ಧಿಕ್ಕಾರದ ಘೋಷಣೆಗಳು ಹಾಸನ ಜನರ ಗಮನ ಸೆಳೆದವು. ಎತ್ತ ನೋಡಿದರೂ ಮಹಿಳೆಯರ ಸಾಲು. ಸರ್ವಾಧಿಕಾರಿಗಳ ವಿರುದ್ಧದ ಹೋರಾಟವನ್ನು ಕಂಡು ಹಾಸನದ ಜನತೆ ನಿಬ್ಬೆರಗಾಗಿ ನಿಂತು ನೋಡುತ್ತಿದ್ದ ದೃಶ್ಯಗಳು ಕಂಡುಬಂದಿತು.

ಈ ಸುದ್ದಿ ಓದಿದ್ದೀರಾ? ಹಾಸನ ಚಲೋ | ಪ್ರಜ್ವಲ್-ರೇವಣ್ಣಗೆ ‘ಓನ್ಲೀ ಜೈಲ್ – ನೋ ಬೇಲ್’ ಎಂದು ಸರ್ಕಾರ ಹೇಳಬೇಕು: ಸುಭಾಷಿಣಿ ಅಲಿ

ಪ್ರತಿಭಟನಾ ಮೆರವಣಿಗೆಯಲ್ಲಿ ದಲಿತ ಸಂಘರ್ಷ ಸಮಿತಿ, ಜನ ಶಕ್ತಿ, ಜನವಾದಿ, ರೈತ ಸಂಘಟನೆಗಳು, ಎದ್ದೇಳು ಕರ್ನಾಟಕ, ಜಾಗೃತ ಕರ್ನಾಟಕ, ಸಿಐಟಿಯು, ಭೀಮ್‌ ಆರ್ಮಿ ಸೇರಿದಂತೆ 150ಕ್ಕೂ ಅಧಿಕ  ಸಂಘಟನೆಗಳು ಭಾಗವಹಿಸಿದ್ದು, ಕಾರ್ಯಕ್ರಮದಲ್ಲಿ ನ್ಯಾಯಕ್ಕಾಗಿ ಆಕ್ರೋಶ ವ್ಯಕ್ತಪಡಿಸಿವೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವದಾರಿ ಗಣಿಗಾರಿಕೆ ಯೋಜನೆ ಬಗ್ಗೆ ಕಳವಳ ಬೇಡ: ಕೇಂದ್ರ ಸಚಿವ ಕುಮಾರಸ್ವಾಮಿ

ಬಳ್ಳಾರಿಯ ಸಂಡೂರು ವ್ಯಾಪ್ತಿಯ ದೇವದಾರಿ ಪ್ರದೇಶದಲ್ಲಿ ಕುದುರೆಮುಖ ಕಬ್ಬಿಣ ಅದಿರು ಕಂಪನಿ...

ಜೂನ್ 19ರಂದು ಅಂಗನವಾಡಿ ನೌಕರರ ಸಂಘ ಅನಿರ್ದಿಷ್ಟಾವಧಿ ಹೋರಾಟ

ಅಂಗನವಾಡಿ ಕೇಂದ್ರಗಳಲ್ಲಿ ಇಸಿಸಿಇ (ECCE) ಜಾರಿಗಾಗಿ ಒತ್ತಾಯಿಸಿ, ಕೂಸಿನ ಮನೆ ರದ್ದು...

ಗದಗ | ಅತಿವೃಷ್ಟಿಯಿಂದಾದ ಹಾನಿಯ ಕುರಿತು ಸಭೆ; ಮುಂಜಾಗೃತಾ ಕ್ರಮಕ್ಕೆ ಡಿಸಿ ಸೂಚನೆ

ಅಧಿಕ ಮಳೆಯಿಂದಾಗುವ ಅತಿವೃಷ್ಟಿ ನಿಯಂತ್ರಣಕ್ಕೆ ಗದಗ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು...

ಸಾಹಿತಿಗಳೂ ರಾಜಕಾರಣಿಗಳೇ, ಸರ್ಕಾರದಿಂದ ನೇಮಕವಾಗಿದ್ದಾರೆ, ಸಭೆ ಮಾಡಿದ್ದೇನೆ: ಡಿ ಕೆ ಶಿವಕುಮಾರ್

ಇತ್ತೀಚೆಗೆ ಕೆಪಿಸಿಸಿ ಕಚೇರಿಗೆ ಸಾಹಿತ್ಯ, ಸಂಸ್ಕೃತಿ ಹಾಗೂ ಇತರ ಅಕಾಡೆಮಿಗಳ ಅಧ್ಯಕ್ಷರ...