ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣ ಪ್ರಕರಣ | ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟರೆ ಸೈಬರ್ ಕ್ರೈಂಗೆ ದೂರು: ಬಾಳುಗೋಪಾಲ್ ಕಡಕ್ ಎಚ್ಚರಿಕೆ

Date:

ಶಿಲ್ಪಕಲೆಗಳ ತವರೂರು ಆಗಿರುವ ಹಾಸನ ಜಿಲ್ಲೆ ಎಲ್ಲೆಡೆ ತನ್ನದೆಯಾದ ಹೆಸರನ್ನು ಮಾಡಿದ್ದು, ಇಂತಹ ಜಿಲ್ಲೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈಯಕ್ತಿಕ ವಿಚಾರಗಳ ಟ್ರೋಲ್ ವಿಡಿಯೋ ಮತ್ತು ಸಂದೇಶವನ್ನು ರವಾನೆ ಮಾಡುವ ಮೂಲಕ ಹಾಸನಕ್ಕೆ ಕಳಂಕ ತರುವ ಕೆಲಸ ಮಾಡಲಾಗುತ್ತಿದೆ. ಇದನ್ನು ಕೂಡಲೇ ನಿಲ್ಲಿಸಬೇಕು ಎಂದು ಕನ್ನಡಪರ ಹೋರಾಟಗಾರ ಬಾಳ್ಳುಗೋಪಾಲ್ ಮನವಿ ಮಾಡಿ ಕಡಕ್ ಎಚ್ಚರಿಕೆ ಕೊಟ್ಟರು.

ಹಾಸನ ನಗರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, “ಹಾಸನದ ಹೆಣ್ಣು ಮಕ್ಕಳ ಬಗ್ಗೆ ತೇಜೋವಧೆ ಮಾಡುವ ಮೂಲಕ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಕೆಟ್ಟದಾಗಿ ಮಾತನಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಜತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೂಡ ಹಾಸನ ಜಿಲ್ಲೆಯ ಬಗ್ಗೆ ಅಪಪ್ರಚಾರ ಆಗುತ್ತಿದ್ದು, ಅದನ್ನು ಕೂಡಲೇ ನಿಲ್ಲಿಸಬೇಕು” ಎಂದು ಒತ್ತಾಯಿಸಿದರು.

“ಶಿಲ್ಪ ಕಲೆಗಳ ತವರೂರು ಆಗಿರುವ ಹಾಸನ ಜಿಲ್ಲೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ತನ್ನದೇ ಆದ ಕೊಡುಗೆ ನೀಡಿದೆ. ರಾಜಕೀಯವಾಗಿ, ಕಲೆ ಸಾಹಿತ್ಯ, ಸಂಗೀತ, ಕ್ಷೇತ್ರಕ್ಕೆ ಕೂಡ ಅನೇಕ ಕೊಡುಗೆಗಳನ್ನು ನೀಡಿದೆ. ಇಂತಹ ಜಿಲ್ಲೆಯ ಬಗ್ಗೆ ಹಾಗೂ ಜಿಲ್ಲೆಯ ಹೆಣ್ಣು ಮಕ್ಕಳ ಬಗ್ಗೆ ಅಪಪ್ರಚಾರ ಮಾಡಿದರೆ ಮುಂದಿನ ದಿನಗಳಲ್ಲಿ ಅಂಥವರ ವಿರುದ್ದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿ ಕಾನೂನು ಹೋರಾಟ ಮಾಡುವುದಾಗಿ ಎಚ್ಚರಿಸಿದರು. ಯಾರೋ ಒಬ್ಬರು ಮಾಡಿದ ತಪ್ಪಿನಿಂದ ಹಾಸನದ ಮಹಿಳೆಯರಿಗೆ ಮುಜುಗರ ಆಗುತ್ತಿದೆ. ಮಕ್ಕಳ ಮನಸ್ಸಿನ ಮೇಲೆ ಕೂಡ ಪರಿಣಾಮ ಬೀರುತ್ತಿದ್ದು, ಹಾಸನದ ಹೆಣ್ಣು ಮಕ್ಕಳ ವಿವಾಹದ ಮೇಲೆಯೂ ದುಷ್ಪರಿಣಾಮ ಬೀರಲಿದೆ. ಇದನ್ನೆಲ್ಲ ಗಮನದಲ್ಲಿ ಇಟ್ಟುಕೊಂಡು ಹಾಸನ ಜಿಲ್ಲೆಯ ವಿರುದ್ಧ ಟ್ರೋಲ್ ಮಾಡುವುದು, ಜೊತೆಗೆ ಅಪಮಾನ ಮಾಡುವ ಕೆಲವವನ್ನು ಕೂಡಲೇ ನಿಲ್ಲಿಸಬೇಕು” ಎಂದು ಕೋರಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದಲಿತ ಮುಖಂಡ ನಾಗರಾಜು ಹೆತ್ತೂರ್ ಮಾತನಾಡಿ, “ಹೆಣ್ಣು ಮಕ್ಕಳ ಬಗ್ಗೆ ಅಪಪ್ರಚಾರ ಮಾಡಿ ಹಾಸನದಲ್ಲಿ ಏನೋ ನಡೆಯುತ್ತಿದೆ ಎಂದು ಒಂದು ಕೆಟ್ಟ ಸುದ್ದಿಯನ್ನು ಹರಡಲಾಗುತ್ತಿದೆ. ಇಲ್ಲಿನ ಮಹಿಳೆಯರ ಬಗ್ಗೆ ಬಹಳ ಕೇವಲವಾಗಿ ಮಾತನಾಡುವ ಪರಿಸ್ಥಿತಿ ನಿರ್ಮಾಣ ಮಾಡಲಾಗುತ್ತಿದೆ. ಈ ಜಿಲ್ಲೆಯು ಅನೇಕ ಸಾಹಿತಿಗಳನ್ನು ಕೊಟ್ಟು ಉನ್ನತ ಶಿಖರಕ್ಕೆ ಕೊಂಡೂಯ್ದಿದೆ. ಆದರೆ ಈಗ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಇಲ್ಲಿನ ಮಹಿಳೆಯರ ಬಗ್ಗೆ ಕೇವಲವಾಗಿ ಮಾತನಾಡುವ ಪತಿಸ್ಥಿತಿಗೆ ತರಲಾಗುತ್ತಿದೆ ಎಂದು ಆತಂಕವ್ಯಕ್ತಪಡಿಸಿದರು. ಇಂತಹ ವಿಚಾರದಲ್ಲಿ ಸೂಕ್ಷ್ಮವಾಗಿ ಯೋಚಿಸಿ ಸಾಮಾನ್ಯ ಪ್ರಜೆಯಾಗಿ ಪ್ರಜ್ಞಾವಂತರಾಗಿ ಇನ್ನು ಮುಂದೆ ಯಾರು ಅಸಭ್ಯ ರೀತಿಯ ವಿಡಿಯೋ ಹಾಕುವುದು ಹಾಗೂ ಹಾಸನವನ್ನು ಹಾಸ್ಯದ ರೀತಿ ರೀಲ್ಸ್ ಮಾಡುವುದು ನಿಲ್ಲಿಸಬೇಕು” ಎಂದರು.

ಚಲನಚಿತ್ರ ನಟ, ನಿರ್ಮಾಪಕ ಹಾಗೂ ಲೇಖಕ ಬನವಾಸೆ ಮಂಜು ಮಾತನಾಡಿ, “ಇತ್ತಿಚಿಗೆ ನಡೆದ ಪ್ರಕರಣದ ನಂತರ ಹಾಸನವನ್ನು ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ರೀತಿಯಲ್ಲಿ ಟ್ರೋಲ್ ಮಾಡಲಾಗುತ್ತಿದೆ. ಇದರಿಂದ ಹಾಸನವನ್ನು ಒಂದು ಕಳಂಕಿತ ಪ್ರದೇಶ ಎನ್ನುವ ಭಾವನೆ ಭರಿಸಲಾಗುತ್ತಿದೆ. ಹಾಸನದಿಂದ ಎಲ್ಲೇ ಹೋಗಿ ಊರು ಹೆಸರು ಹೇಳಿದರೆ ಜನರು ಗುರುತಿಸುತ್ತಾರೆ. ಈ ಪ್ರಕರಣವಾದ ನಂತರ ಬೇರೆಯವರಿಗೆ ಮಾನವೀಯತೆ ಇರುವವರಿಗೆ ಬೇಸರವಾಗಿ ತಲೆ ತಗ್ಗಿಸುವ ಪರಿಸ್ಥಿತಿ ಬಂದಿದೆ. ಇಂತಹ ಕೇಸ್‌ಗಳು ನಡೆದಾಗ ಸಾಮಾಜಿಕ ಜಾಲತಾಣದಲ್ಲಿ ಬೇಗ ಪ್ರತಿಕ್ರಿಯೆ ಕೊಡುತ್ತಾರೆ” ಎಂದು ಟೀಕಿಸಿದರು.

“ಜಿಲ್ಲೆಯ ಹೆಣ್ಣು ಮಕ್ಕಳು ಮುಜುಗರವಾಗುವ ಹಾಸ್ಯದ ರೀತಿ ಹಾಸನವನ್ನು ಕಡೆಗಣಿಸಿ ವಿಡಿಯೋ ಮಾಡಬೇಡಿ. ಈ ವಿಡಿಯೋ ವಿಚಾರವಾಗಿ ಎಸ್‌ಐಟಿಗೆ ಹೋಗಿದೆ. ಕಾನೂನು ಪ್ರಕಾರ ತನಿಖೆ ನಡೆಯಲಿದೆ. ಈ ಪ್ರಕರಣ ಇಟ್ಟುಕೊಂಡು ಹಾಸನದ ಹೆಸರು ಕೆಡಿಸಬೇಡಿ” ಎಂದು ಮಾನವಿ ಮಾಡಿದ ಅವರು. “ಮುಂದೆ ಯಾರಾದರೂ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಯ ಘಟನೆ ಕಂಡುಬಂದರೆ ಸೈಬರ್ ಕ್ರೈಂ ಇಲಾಖೆಗೆ ದೂರು ದಾಖಲಿಸುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ತಡೆಗೆ ಡಿವೈಎಫ್‌ಐ ಆಗ್ರಹ

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಬೊಮ್ಮೇಗೌಡ ಮಾತನಾಡಿ, “ಎಲ್ಲರ ಮನೆಯಲ್ಲೂ ಕೂಡ ಹೆಣ್ಣು ಮಕ್ಕಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮುಜುಗರ ತರುವಂತಹ ಸಂದರ್ಭವನ್ನು ಯಾರೂ ತರಬೇಡಿ. ಹಾಸನ ಜಿಲ್ಲೆಯ ಮರ್ಯಾದೆಯನ್ನು ಕಳೆಯಬೇಡಿ” ಎಂದು ಮನವಿ ಮಾಡಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವೃದ್ಧರು ಹಾಗೂ ವಿಕಲಚೇತನರ ಬೆಂಬಲ ಸಭೆ

ಪಿಂಚಣಿ ಕಡಿತ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಮತ್ತು ವಿಕಲಚೇತನರಿಗೆ ಉಂಟಾಗುತ್ತಿರುವ...

ಕೋಲಾರ | ಜಡತ್ವಕ್ಕೆ ವಿವೇಕ ನೀಡಿದ ಕುಸ್‌ ಕುಸ್ ದಿಲ್ ಕುಶ್ ನಾಟಕ

ಯಾವುದು ಸ್ಥಿರವಲ್ಲ. ಗಳಿಗೆ ಗಳಿಗೆಯೂ ಬದಲಾಗುತ್ತಿರುತ್ತದೆ. ಸ್ಥಿರವೆಂದು ಭಾವಿಸಿದವನಿಗೆ ಅವನ ತಲೆಯೇ...

ರಾಯಚೂರು | ಮದುವೆಗೆ ಪ್ರಿಯಕರನ ಮನೆಯವರ ವಿರೋಧ : ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ

ಪ್ರೀತಿಸಿದ ಯುವಕನ ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದ ಯುವತಿ ಮಹಿಳಾ...

ದಕ್ಷಿಣ ಕನ್ನಡ | ಭಾರೀ ಮಳೆ; ಕಲ್ಲಡ್ಕದಲ್ಲಿ ರಸ್ತೆಯೇ ಮಾಯವಾದ ದೃಶ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಭಾರೀ ಮಳೆ ಸುರಿಯಿತು....