ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ರಾಷ್ಟ್ರಮಟ್ಟದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಲೈಂಗಿಕ ಹಗರಣ ಸಂಬಂಧ ಮಾಜಿ ಸಚಿವ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಎರಡು ಎಫ್‌ಐಆರ್‌ಗಳು ದಾಖಲಾಗಿವೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಕಾ ತಂಡ (ಎಸ್‌ಐಟಿ) ರೇವಣ್ಣ ಕುಟುಂಬಕ್ಕೆ ಸಂಬಂಧಿಸಿದ ಮನೆ, ಫಾರಂ ಹೌಸ್‌ಗಳ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಸಾಕ್ಷ್ಯಾಧಾರಗಳನ್ನು ಕಲೆ ಹಾಕುತ್ತಿದ್ದಾರೆ.
ಸುಮಾರು 30ಕ್ಕೂ ಅಧಿಕ ಅಧಿಕಾರಿಗಳು, ಸಿಬ್ಬಂದಿಗಳು ಹಲವೆಡೆ ರೇವಣ್ಣ ಕುಟುಂಬಕ್ಕೆ ಸಂಬಂಧಿಸಿದ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಬುಧವಾರ ರಾತ್ರಿ ಬೆಂಗಳೂರಿನ ಬಸವನಗುಡಿಯಲ್ಲಿರುವ ರೇವಣ್ಣ ಕುಟುಂಬದ ಮನೆ ಮೇಲೆ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಗುರುವಾರ ಮುಂಜಾನೆ, ಎಸ್‌ಐಟಿ ತಂಡದ ಐವರು ಅಧಿಕಾರಿಗಳು ಹೊಳೆನರಸೀಪುರದಲ್ಲಿರುವ ರೇವಣ್ಣ ಕುಟುಂಬದ ಮನೆಗಳು ಹಾಗೂ ಪಡುವಲಹಿಪ್ಪೆಯಲ್ಲಿರುವ ಫಾರಂ ಹೌಸ್‌ಗಳ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದಾರೆ.
ಹಾಸನದ ಆರ್‌ಸಿ ರಸ್ತೆಯ ಸಂಸದರ ನಿವಾಸದ ಮೇಲೂ ದಾಳಿ ನಡೆಸಿ, ಸಾಕ್ಷ್ಯ ಸಂಗ್ರಹಿಸಲಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಅತ್ಯಾಚಾರಿ ಪ್ರಜ್ವಲ್ ಹಾಗೂ ಎಚ್.ಡಿ. ರೇವಣ್ಣ ವಿರುದ್ದ ಎಸ್.ಐ.ಟಿ.ಮೂರು ನೋಟೀಸ್ ಜಾರಿ ಮಾಡಿದ್ರೂ ಕೇರ್ ಮಾಡದ ಆರೋಪಿಗಳನ್ನು ಏಕೆ ಒದ್ದು ಕರೆದೊಯ್ಯುತ್ತಿಲ್ಲ ಪೋಲೀಸ್ರು..