ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌ಐಟಿ ಪರವಾಗಿ ವಾದ ಮಂಡಿಸುತ್ತಿದ್ದ ಹೆಚ್ಚುವರಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಪಿ) ಜಾಯ್ನಾ ಕೊಥಾರಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಲು ಎಸ್‌ಪಿಪಿಯಾಗಿ ಬಿ.ಎನ್ ಜಗದೀಶ್ ಅವರನ್ನು ರಾಜ್ಯ ಸರ್ಕಾರ ನೇಮಿಸಿತ್ತು. ಅಲ್ಲದೆ, ನ್ಯಾಯಾಲಯದ ವಿಚಾರಣೆ ವೇಳೆ ಪ್ರಾಸಿಕ್ಯೂಷನ್‌ಅನ್ನು ಸಮರ್ಥಿಸಲು ಹೆಚ್ಚುವರಿ ಎಸ್‌ಪಿಪಿಗಳಾಗಿ ಅಶೋಕ್ ಎನ್ ನಾಯಕತ್ ಮತ್ತು ಜಾಯ್ನಾ ಕೊಥಾರಿ ಅವರನ್ನು ನೇಮಿಸಲಾಗಿತ್ತು. ಆದರೆ, ಇದೀಗ, ಅವರು ರಾಜೀನಾಮೆ ನೀಡಿದ್ದಾರೆ.
ಚುನಾವಣೆ ಮುಗಿದ ಬಳಿಕ, ಜರ್ಮನಿಗೆ ಪರಾರಿಯಾಗಿದ್ದ ಪ್ರಜ್ವಲ್ ರೇವಣ್ಣ ಬರೋಬ್ಬರಿ 43 ದಿನಗಳ ಬಳಿಕ ರಾಜ್ಯಕ್ಕೆ ಮರಳಿದ್ದರು. ಅವನ್ನು ಎಸ್‌ಐಟಿ ಬಂಧಿಸಿದ್ದು, ನ್ಯಾಯಾಲಯವು ಜೂನ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
Kanada kaigalu Kelasa Maduttive