ಉಡುಪಿ | ಕರಾವಳಿಯಲ್ಲಿ ರಂಗಭೂಮಿಯ ಹೊಸ ಪ್ರಯಾಣ, ‘ನಿರ್ದಿಗಂತ’ ಉದ್ಘಾಟನೆ

Date:

ಇಂದಿನ ಸಮಾಜದಲ್ಲಿ ರಾಜಕೀಯ ಸುಳ್ಳುಗಳು ಅತ್ಯಂತ ಕ್ರೂರ ರೂಪದಲ್ಲಿ ನಮ್ಮ ಮುಂದೆ ನಿಂತಿವೆ. ಇಂತಹ ಸುಳ್ಳುಗಳನ್ನು ಎದುರಿಸುವುದು ಎಲ್ಲರಿಗೂ ಸಾಧ್ಯವಾಗುತ್ತಿಲ್ಲ. ಈ ಸನ್ನಿವೇಶದಲ್ಲಿ ರಂಗಭೂಮಿಯ ಮೂಲಕ ಸತ್ಯವನ್ನು ಪ್ರತಿಪಾದಿಸಿ, ಸುಳ್ಳುಗಳನ್ನು ಮಣಿಸುವ ಪ್ರಯತ್ನ ಅಗತ್ಯವಾಗಿದೆ ಎಂದು ಸಾಹಿತಿ ಹಾಗೂ ಚಿಂತಕ ಫಕೀರ್ ಮುಹಮ್ಮದ್ ಕಟಪಾಡಿ ಹೇಳಿದರು.

- Advertisement -
1009195577

ಇಂದು ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆದ ‘ಕರಾವಳಿಯ ನಿರ್ದಿಗಂತ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

‘ನಿರ್ದಿಗಂತ’ ಎಂಬ ಶಬ್ದವೇ ನಮ್ಮನ್ನು ವಿಭಿನ್ನ ಪ್ರಪಂಚಕ್ಕೆ ಕರೆದೊಯ್ಯುವ ಶಕ್ತಿ ಹೊಂದಿದೆ. ಕುವೆಂಪು ಅವರು ಕಲ್ಪಿಸಿದ ನಿರ್ದಿಗಂತದ ಆಲೋಚನೆಯನ್ನು ಪ್ರಕಾಶ್ ರಾಜ್ ಅವರು ಇನ್ನಷ್ಟು ವಿಶಾಲಗೊಳಿಸಿದ್ದಾರೆ. ನಿರ್ದಿಗಂತ ತಂಡದ ಉದ್ದೇಶಗಳು ಯಶಸ್ವಿಯಾಗಲಿ, ಅವರು ಸದಾ ಗೆಲ್ಲಲಿ ಎಂದು ಫಕೀರ್ ಮುಹಮ್ಮದ್ ಕಟಪಾಡಿ ಹಾರೈಸಿದರು.

1009195806

ನಿರ್ದಿಗಂತದ ಸ್ಥಾಪಕ, ರಂಗಕರ್ಮಿ ಹಾಗೂ ಚಿತ್ರನಟ ಪ್ರಕಾಶ್ ರಾಜ್ ಮಾತನಾಡಿ, ನಿರ್ದಿಗಂತ ಕೇವಲ ರಂಗ ತರಬೇತಿ ನೀಡುವ ಸಂಸ್ಥೆಯಲ್ಲ. ಅದು ಜೀವಂತ ಸೆಲೆಯಾಗಿ ಬೆಳೆಯಬೇಕು ಎಂಬುದು ನಮ್ಮ ಆಶಯ. ಹೊಸ ನೆಲೆ, ಹೊಸ ನಾಟಕಗಳು ಹಾಗೂ ಹೊಸ ಪ್ರಯೋಗಗಳ ಮೂಲಕ ರಂಗಭೂಮಿ ಪ್ರೇಕ್ಷಕರಿಗೆ ಹೊಸ ಅನುಭವ ನೀಡಬೇಕು. ಜೊತೆಗೆ ನಟರು ಹಾಗೂ ನಿರ್ದೇಶಕರ ಬೆಳವಣಿಗೆಯೂ ಆಗಬೇಕು ಎಂದರು.

1009195573

ರಂಗ ನಿರ್ದೇಶಕ ಗಣೇಶ್ ಮಂದಾರ್ತಿ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮಕ್ಕೂ ಮೊದಲು ಪ್ರಕಾಶ್ ರಾಜ್ ಹಾಗೂ ನಿರ್ದಿಗಂತ ತಂಡದಿಂದ ಸಮತೆಯ ಹಾಡು ಪ್ರಸ್ತುತಪಡಿಸಲಾಯಿತು.

1009195568

ಮಕ್ಕಳ ನಾಟಕಗಳ ಪ್ರದರ್ಶನ

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಬಿಂದು ರಕ್ಷಿದಿ ನಿರ್ದೇಶನದಲ್ಲಿ ಆರೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳಿಂದ ‘ಮೃಗ ಮತ್ತು ಸುಂದರಿ’ ನಾಟಕ ಪ್ರದರ್ಶನಗೊಂಡಿತು. ಅಪರಾಹ್ನ ವರದರಾಜ್ ಬಿರ್ತಿ ರಚನೆ ಹಾಗೂ ರೋಹಿತ್ ಎಸ್. ಬೈಕಾಡಿ ನಿರ್ದೇಶನದಲ್ಲಿ ಕೊಕ್ಕರ್ಣೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಮಕ್ಕಳಿಂದ ವಿಜ್ಞಾನ ನಾಟಕ ‘ಕ್ಯೂರಿಯಸ್’ ಪ್ರದರ್ಶನಗೊಂಡಿತು. ಸಂಜೆ ಉದ್ಘಾಟನಾ ಸಮಾರಂಭದ ಬಳಿಕ ರೋಹಿತ್ ಎಸ್. ಬೈಕಾಡಿ ನಿರ್ದೇಶನದಲ್ಲಿ ಎಚ್.ಎಸ್. ವೆಂಕಟೇಶ್ ಮೂರ್ತಿ ಅವರ ಮಕ್ಕಳ ನಾಟಕ ‘ಕುಣಿ ಕುಣಿ ನವಿಲೇ’ ಪ್ರದರ್ಶನಗೊಂಡಿತು.

1009195567

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.76.52ರಷ್ಟು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಉತ್ತರ ಕನ್ನಡ...

ಚಿಕ್ಕಮಗಳೂರು | ಮಳೆ ಅಬ್ಬರ: ಜಾಲವೃತಗೊಂಡ ಪಟ್ಟಣ 

ತರೀಕೆರೆ ತಾಲೂಕಿನಲ್ಲಿ ವರುಣನ ಭರ್ಜರಿಯಾಗಿ ಆರ್ಭಟಿಸಿದ್ದು, ನಿನ್ನೆ ಮಧ್ಯಾಹ್ನ ಆರಂಭವಾದ ಮಳೆ...

ಚಿಕ್ಕಮಗಳೂರು | ವಯಕ್ತಿಕ ದ್ವೇಷಕ್ಕೆ 150 ಅಡಿಕೆ ಗಿಡ ಕತ್ತರಿಸಿದ ಕಿಡಿಗೇಡಿಗಳು 

ಜಿಲ್ಲೆಯ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ಅ.21ರ ಬುಧವಾರದಂದು ವೈಯಕ್ತಿಕ ದ್ವೇಷದ...

ಚಿಕ್ಕಮಗಳೂರು | ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಾಳಿಯಲ್ಲಿ ಗುಂಡು ಹಾರಿಸಿದಕ್ಕೆ ಪ್ರಕರಣ ದಾಖಲು 

ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ಜನವಸತಿ ಪ್ರದೇಶದಲ್ಲಿ ಬಿಜೆಪಿ ಯುವ ಮೋರ್ಚಾ...