ಚಾಮರಾಜನಗರ | ಕಿಶೋರಿಯರ ಸಮಗ್ರ ಆರೋಗ್ಯ ಕಾಳಜಿಗೆ ‘ಪ್ರಾಣಸಖಿ’ ಯೋಜನೆ; ಶಿಕ್ಷಣ ಅಧಿಕಾರಿಗಳಿಗೆ ಕಾರ್ಯಾಗಾರ

Date:

ಚಾಮರಾಜನಗರ ಜಿಲ್ಲಾಡಳಿತ ಭವನದ ಹಳೆ ಕೆಡಿಪಿ ಸಭಾಂಗಣದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಪ್ರಾಂಶುಪಾಲರಿಗೆ ‘ಪ್ರಾಣಸಖಿ‘ ಯೋಜನೆ ಕುರಿತ ಕಾರ್ಯಗಾರ ಆಯೋಜಿತವಾಗಿತ್ತು.

- Advertisement -

ಶಿಕ್ಷಣ ಸಂಸ್ಥೆಗಳಲ್ಲಿ ಹದಿ ಹರೆಯದ ಹೆಣ್ಣು ಮಕ್ಕಳ ಸಮಗ್ರ ಆರೋಗ್ಯ, ಜಾಗೃತಿ, ಮಾರ್ಗದರ್ಶನ, ಸ್ವಚ್ಚ ಮೂಲ ಸೌಕರ್ಯ ಒದಗಿಸುವ ಉದ್ದೇಶದೊಂದಿಗೆ ಚಾಮರಾಜನಗರ ಜಿಲ್ಲಾಡಳಿತವು ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರ (ವಿಜಿಕೆಕೆ), ಬ್ಲಾಕ್‍ಚೇನ್ ಫಾರ್ ಇಂಪ್ಯಾಕ್ಟ್ ಹಾಗೂ ಫಿಯಾ ಫೌಂಡೇಶನ್ ಅವರ ನೆರವಿನೊಂದಿಗೆ ಇಂಡಿಯಾ ಹೆಲ್ತ್ ಅಂಡ್ ಕ್ಲೈಮೇಟ್ ರೆಸಿಲಿಯನ್ಸ್ ಫೆಲೋಶಿಪ್ (ಐಹೆಚ್‍ಸಿಆರ್‍ಎಫ್) ಪ್ರಾಜೆಕ್ಟ್ ಅಡಿ ರೂಪಿಸಿರುವ ಪ್ರಾಣಸಖಿ ಯೋಜನೆ ಕುರಿತ ವಿಶೇಷ ಕಾರ್ಯಗಾರ ಇಂದು ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ವಿಶೇಷ ಕಾಳಜಿ ಹಾಗೂ ಆಸಕ್ತಿಯಿಂದ 800ಕ್ಕೂ ಹೆಚ್ಚು ಜಿಲ್ಲಾಮಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ 10 ರಿಂದ 18 ವರ್ಷ ವಯಸ್ಸಿನ ಕಿಶೋರಿ ವಿದ್ಯಾರ್ಥಿನಿಯರಿಗೆ ಆರೋಗ್ಯ, ಸ್ವಚ್ಚತೆ ಕುರಿತು ಸಮಯೋಚಿತ ಮಾಹಿತಿ ನೀಡಿ ಅವರನ್ನು ಯಶಸ್ಸಿನ ದಾರಿಗೆ ಕೊಂಡೋಯ್ಯುವ ಮಹತ್ವಾಕಾಂಕ್ಷೆಯೊಂದಿಗೆ ಪ್ರಾಣಸಖಿ ಕಾರ್ಯಕ್ರಮ ರೂಪಿತವಾಗಿದೆ.

2554

ಹದಿಹರೆಯದವರಲ್ಲಿ ಇರಬಹುದಾದ ತಪ್ಪು ಕಲ್ಪನೆಗಳನ್ನು ನಿವಾರಿಸಿ ರಕ್ತಹೀನತೆ, ಅಪೌಷ್ಠಿಕತೆ, ಮುಟ್ಟಿನ ಸಂದರ್ಭದಲ್ಲಿ ವಹಿಸಬೇಕಾದ ಸ್ವಚ್ಚತೆ, ಮಾನಸಿಕ ಆರೋಗ್ಯ, ಸ್ವಚ್ಚ ಮೂಲ ಸೌಕರ್ಯಗಳ ಬಳಕೆ ಮಾಡುವ ಕುರಿತು ಜಾಗೃತಿ ಮೂಡಿಸಿ ಅವಶ್ಯಕ ಸೌಲಭ್ಯಗಳನ್ನು ಒದಗಿಸುವ ಮೂಲಕ ಆರೋಗ್ಯವನ್ನು ಸಧೃಢಗೊಳಿಸುವ ಮಹತ್ತರ ಉದ್ದೇಶದೊಂದಿಗೆ ಜಿಲ್ಲೆಯಲ್ಲಿ ಪ್ರಾಣಸಖಿ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲಾಗುತ್ತಿದೆ.

ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾಡಳಿತ, ವಿವಿಧ ಸಂಸ್ಥೆಗಳು ಕೈಗೊಂಡಿರುವ ಪ್ರಾಣಸಖಿ ವಿಶೇಷ ಆರೋಗ್ಯ ಯೋಜನೆಯ ಕಾರ್ಯಗಾರದಲ್ಲಿ ವರ್ಚುವಲ್ ಮೂಲಕ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಪಾಲ್ಗೊಂಡು ಅಗತ್ಯ ಮಾರ್ಗದರ್ಶನ ಮಾಡಿದರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ “800ಕ್ಕೂ ಹೆಚ್ಚು ಜಿಲ್ಲಾಮಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ 10 ರಿಂದ 18 ವರ್ಷ ವಯಸ್ಸಿನ ಕಿಶೋರಿ ವಿದ್ಯಾರ್ಥಿನಿಯರಿಗೆ ಆರೋಗ್ಯ, ಸ್ವಚ್ಚತೆ ಕುರಿತು ಸಮಯೋಚಿತ ಮಾಹಿತಿ ನೀಡಿ ಅವರನ್ನು ಯಶಸ್ಸಿನ ದಾರಿಗೆ ಕೊಂಡೋಯ್ಯುವ ಮಹತ್ವಾಕಾಂಕ್ಷೆಯೊಂದಿಗೆ ಪ್ರಾಣಸಖಿ ಕಾರ್ಯಕ್ರಮ ರೂಪಿಸಲಾಗಿದೆ. ಶಾಲಾ ಕಾಲೇಜು ಮಟ್ಟದಲ್ಲಿ ಹೆಣ್ಣು ಮಕ್ಕಳ ಆರೋಗ್ಯ, ಶಿಕ್ಷಣ ನೀಡುವ ಮೂಲಕ ಅವರ ಆರೋಗ್ಯವನ್ನು ಸದೃಢಗೊಳಿಸುವ ಉದ್ದೇಶ ಹೊಂದಲಾಗಿದೆ” ಎಂದರು.

2564

ಶಾಲಾ ಕಾಲೇಜು ಹಂತದಲ್ಲಿ ಶಿಕ್ಷಣಾಧಿಕಾರಿಗಳು, ಶಿಕ್ಷಕರು, ಉಪನ್ಯಾಸಕರು, ಇನ್ನಿತರ ಸಿಬ್ಬಂದಿ ಹೆಚ್ಚು ಆಸಕ್ತಿಯಿಂದ ಹೆಣ್ಣುಮಕ್ಕಳ ಆರೋಗ್ಯ ಸ್ವಚ್ಚತೆ ಕಾಪಾಡುವ ಅತ್ಯಂತ ಮಹತ್ವದ ಪ್ರಾಣಸಖಿ ಕಾರ್ಯಕ್ರಮವನ್ನು ಅನುಷ್ಠಾನ ಮಾಡುವ ಜವಾಬ್ದಾರಿ ನಿರ್ವಹಿಸಬೇಕಿದೆ. ಹದಿಹರೆಯದವರ ಸಮಗ್ರ ಆರೋಗ್ಯವನ್ನು ಸಶಕ್ತಗೊಳಿಸುವ ಗುರಿಯೊಂದಿಗೆ ಹಮ್ಮಿಕೊಂಡಿರುವ ಜಿಲ್ಲೆಗಾಗಿಯೇ ವಿಶೇಷವಾಗಿ ವಿನ್ಯಾಸಗೊಳಿಸಲಾಗಿರುವ ಯೋಜನೆಗೆ ಬೆಂಬಲ ನೀಡುವುದು ಅತ್ಯಾವಶ್ಯವಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ‘ಕಿಶೋರಿಯರಿಗೆ ಸ್ನೇಹಪೂರ್ಣ ವಾತಾವರಣ ಒದಗಿಸುವುದು ಅತ್ಯಂತ ಮುಖ್ಯವಾಗಿದೆ. ಈ ಯೋಜನೆಗೆ ಸ್ವಯಂಸೇವಾ ಸಂಸ್ಥೆಗಳು ಮತ್ತು ಸಮುದಾಯಗಳು ಒಟ್ಟಾಗಿ ಕೈಜೋಡಿಸಿರುವುದು ಶ್ಲಾಘನೀಯ’ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ಕೊಡುಗೆ ಅಪಾರ : ಡಾ ಮಂತರ್ ಗೌಡ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರ ರಾಜೇ ಅರಸ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಟ್ಟ ಗೌರಮ್ಮ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್. ಎಸ್. ಬಿಂದ್ಯಾ, ವಿಜಿಕೆಕೆಯ ಡಾ. ತಾನಿಯಾ ಶೇಷಾದ್ರಿ, ಐಹೆಚ್‍ಸಿಆರ್‍ಎಫ್ ಯೋಜನೆಯ ಮಲ್ಲಿಕಾರ್ಜುನ್, ಧನಲಕ್ಷ್ಮಿ, ಇನ್ನಿತರರು ಕಾರ್ಯಗಾರದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...