ಉಡುಪಿ | ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಪ್ರತಿಕೃತಿ ದಹಿಸಿ ಆಕ್ರೋಶ

Date:

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೆಹಲಿಯಲ್ಲಿ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಶುಕ್ರವಾರ ಬ್ರಹ್ಮಾವರ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು.

- Advertisement -
1011865965


ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪ್ರತಿಕೃತಿಯನ್ನು ದಹಿಸಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಪ್ರತಿಭಟನೆಯನ್ನು ಉದ್ದೇಶಿಸಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಹಲವು ರೀತಿಯ ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ಆರೋಪಿಸಿದರು. ಮೆಟ್ರೊ ಹಾಗೂ ಬಸ್ ಸೇವೆಗಳನ್ನು ಸ್ಥಗಿತಗೊಳಿಸುವ ಮೂಲಕ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ತಡೆಯಲು ಯತ್ನಿಸಲಾಗಿದೆ ಎಂದು ದೂರಿದರು.

IMG 20260724 WA0110

ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ದೇಶದ ವಿದ್ಯಾರ್ಥಿಗಳು, ಮಹಿಳೆಯರು ಮತ್ತು ಜನರ ಹಿತಾಸಕ್ತಿಯ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಟೀಕಿಸಿದರು.

1011866193

ಇದೇ ವೇಳೆ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಸೈನಿಕರಿಗೆ ಗೌರವ ನಮನ ಸಲ್ಲಿಸಲಾಯಿತು.
ಬಳಿಕ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೆಲಕಾಲ ರಸ್ತೆ ತಡೆ ನಡೆಸಿದ ಪರಿಣಾಮ ವಾಹನ ಸಂಚಾರದಲ್ಲಿ ಅಲ್ಪಕಾಲ ವ್ಯತ್ಯಯ ಉಂಟಾಯಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಸ್ಥಳದಿಂದ ಕರೆದೊಯ್ದರು.

ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ, ಮುಖಂಡರಾದ ವೆರೋನಿಕಾ ಕರ್ನೇಲಿಯೋ, ಡಾ. ಸುನೀತಾ ಶೆಟ್ಟಿ, ಭುಜಂಗ ಶೆಟ್ಟಿ, ಕೀರ್ತಿ ಶೆಟ್ಟಿ, ಸುರೇಶ್ ಶೆಟ್ಟಿ ಬನ್ನಂಜೆ, ಸಜ್ಜನ್ ಶೆಟ್ಟಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...