‘ಪ್ರಸಾದ್ ಯೋಜನೆ’ಯಿಂದ ಚಾಮುಂಡಿಬೆಟ್ಟ ಪಾರಂಪರಿಕತೆಗೆ ದಕ್ಕೆಯಾಗದಂತೆ ಅಭಿವೃದ್ಧಿ ಮಾಡಲಾಗುವುದು: ಸಚಿವ ಮಹದೇವಪ್ಪ

Date:

‘ಪ್ರಸಾದ್ ಯೋಜನೆ’ಯಿಂದ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ದಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ತಿಳಿಸಿದರು.

- Advertisement -

ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಸಾದ್ ಯೋಜನೆ’ಯ ‘ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಚಾಮುಂಡಿ ಬೆಟ್ಟದಲ್ಲಿ ಪರಿಸರಕ್ಕೆ ದಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುತ್ತಿದೆ. ಬೆಟ್ಟಕ್ಕೆ ಭೇಟಿ ನೀಡುವ ಭಕ್ತಾದಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಮಾಡಲು ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಚಾಮುಂಡಿ ಬೆಟ್ಟದಲ್ಲಿ ವಾಸಿಸುವ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು. ಆದ್ದರಿಂದಲೇ, ಇಂದು ಚಾಮುಂಡಿ ಬೆಟ್ಟದ ನಿವಾಸಿಗಳ ಅಹವಾಲುಗಳನ್ನು ಹಾಗೂ ಅನಿಸಿಕೆಗಳನ್ನು ಸ್ವೀಕರಿಸಲಾಗುತ್ತಿದೆ. ನಿವಾಸಿಗಳ ಸಲಹೆಗಳನ್ನು ಪಡೆದು ಅದರಂತೆ ಯೋಜನೆ ರೂಪಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಾಸಕರಾದ ಜಿ.ಟಿ. ದೇವೇಗೌಡ ಮಾತನಾಡಿ, ವಿವಿಐಪಿ ದರ್ಶನದ ಸಂಧರ್ಭದಲ್ಲಿ ಇತರೆ ಜನರು 50 ಜನ ನುಗ್ಗುವುದರಿಂದ ಗೊಂದಲ ಉಂಟಾಗುತ್ತದೆ. ಇದಕ್ಕೆ ಒಂದು ಪರಿಹಾರವನ್ನು ರೂಪಿಸಬೇಕು. ದೇವಸ್ಥಾನದ ಪ್ರವೇಶಕ್ಕೆ ಒಂದು ಕಡೆ, ಹೊರಗೆ ಬರಲು ಇನ್ನೊಂದು ಕಡೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು. ಈ ಹಿಂದೆ ಬೆಟ್ಟದಲ್ಲಿ ಅಂಗಡಿ ಮಳಿಗೆಗಳನ್ನು ಇದ್ದವರಿಗೆ, ಮೂಲದಲ್ಲಿ ಇದ್ದ ಅರ್ಹರಿಗೆ ಮಾತ್ರ ಮಳಿಗೆ ಮಾಡಲು ಅವಕಾಶ ನೀಡಬೇಕು ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಮಲೆ ಮಹದೇಶ್ವರ ಬೆಟ್ಟ | ಚಿರತೆ ದಾಳಿಗೆ ಯುವಕ ಮೃತಪಟ್ಟ ಪ್ರಕರಣ; ರೈತ ಸಂಘದಿಂದ ರಸ್ತೆ ತಡೆ

ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿ, ಪ್ರಸಾದ್ ಯೋಜನೆಯಡಿ ₹45.70 ಕೋಟಿ ರೂಪಾಯಿ ಅನುಧಾನ ಮಂಜೂರು ಆಗಿರುತ್ತದೆ. ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಲು ಸರತಿ ಸಾಲಿಗೆ ಕಲ್ಲಿನ ಕ್ಯೂ ಮಂಟಪ ಮಾಡಲಾಗುತ್ತಿದೆ. ಮಹಾಬಲೇಶ್ವರ ದೇವಸ್ಥಾನದ ಪಕ್ಕದಲ್ಲಿ ಕ್ಯೂ ಬಂದು ದೇವಸ್ಥಾನದ ಮುಂಭಾಗದಲ್ಲಿ ಬಂದು ಸೇರುತ್ತದೆ ಎಂದು ಮಾಹಿತಿ ನೀಡಿದರು.

ಈ ವಿಶೇಷ ಸುದ್ದಿ ಓದಿದ್ದೀರಾ? ಮೈಸೂರು ಜಿಲ್ಲೆಯಾದ್ಯಂತ 18 ಸಾವಿರಕ್ಕೂ ಅಧಿಕ BPL ಕಾರ್ಡ್ ರದ್ದು; ಅನರ್ಹತೆಗೆ ಕಾರಣಗಳೇನು?

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್. ಯುಕೇಶ್ ಕುಮಾರ್, ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...