ಉಡುಪಿ | ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹ ಫಲಾನುಭವಿಗಳಿಗೆ ತಲುಪಿಸಿ : ಸಿ.ಇ.ಒ ಪ್ರತೀಕ್ ಬಾಯಲ್

Date:

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರಾಯೋಜಿತ ಯೋಜನೆಗಳಡಿ ಆಯ್ಕೆಯಾಗಿ ಆರ್ಥಿಕ ನೆರವು ನೀಡಲು ಶಿಫಾರಸಾದ ಅರ್ಜಿಗಳನ್ನು ಆದ್ಯತೆಯ ಮೇಲೆ ಜನರಿಗೆ ಅನುಕೂಲವಾಗುವಂತೆ ಸರಳ ರೀತಿಯಲ್ಲಿ ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹೇಳಿದರು.

- Advertisement -

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಪಿ.ಎಂ.ವಿಶ್ವಕರ್ಮ ಯೋಜನೆಯಡಿ ಈವರೆಗೆ 5661 ಅರ್ಜಿಗಳು ಸ್ವೀಕೃತವಾಗಿದ್ದು, 1337 ಅರ್ಜಿಗಳು ತಿರಸ್ಕೃತಗೊಂಡು, 3937 ಫಲಾನುಭವಿಗಳಿಗೆ 35.29 ಕೋಟಿ ರೂ. ಸಾಲ ವಿತರಿಸಲಾಗಿದೆ. ತಿರಸ್ಕೃತ ಅರ್ಜಿಗಳ ಸಂಖ್ಯೆ ಕಡಿಮೆಯಾಗಬೇಕು ಎಂದ ಅವರು, ಬಾಕಿ ಇರುವ ಅರ್ಜಿಗಳ ವಿಲೇವಾರಿಗೆ ಶೀಘ್ರ ಕ್ರಮ ವಹಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಜಿಲ್ಲೆಯ ಉದ್ಯಮಿಗಳಿಗೆ ಜೀವನೋಪಾಯದ ಚಟುವಟಿಕೆಗಳನ್ನು ನಿರ್ಮಿಸಲು ಹಾಗೂ ಜಿಲ್ಲೆಯ ಉದ್ಯಮಿಗಳನ್ನು ಬೆಂಬಲಿಸುವುದರೊಂದಿಗೆ ಉದ್ಯೋಗಾವಕಾಶ ಸೃಷ್ಠಿಸಲು ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆಯಡಿ 129 ನಿಗಧಿತ ಗುರಿಗೆ, 91 ಜನ ಫಲಾನುಭವಿಗಳಿಗೆ 10.06 ಕೋಟಿ ಆರ್ಥಿಕ ನೆರವು ವಿತರಿಸಲಾಗಿದೆ. ಯಾವುದೇ ಯೋಜನೆಗಳಡಿ ಅರ್ಜಿ ಸಲ್ಲಿಕೆಯಾದಾಗ ಅರ್ಜಿಗಳನ್ನು ಬಾಕಿ ಉಳಿಸದೇ ಅರ್ಜಿಗಳನ್ನು ಆದ್ಯತೆಯ ಮೇಲೆ ವಿಲೇವಾರಿ ಮಾಡಬೇಕು ಎಂದರು.

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಗೆ ಆದ್ಯತೆಯ ಮತ್ತು ಆದ್ಯತೆಯೇತರ ವಲಯಗಳೆರಡಕ್ಕೂ ಒಟ್ಟಾರೆಯಾಗಿ 15,514.16 ಕೋಟಿ ರೂ.ಗಳ ವಾರ್ಷಿಕ ಕ್ರೆಡಿಟ್ ಯೋಜನೆ ಗುರಿಯನ್ನು ನಿಗದಿಪಡಿಸಲಾಗಿದ್ದು, ಈವರೆಗೆ 8,941.11 ಗುರಿ ಸಾಧಿಸಿ, ಶೇ. 57.63 ಸಾಧನೆ ಮಾಡಲಾಗಿದೆ ಎಂದ ಅವರು, ಕೃಷಿ ವಲಯಕ್ಕೆ 4230 ನಿಗಧಿತ ಗುರಿಗೆ 2274 ಗುರಿ ಸಾಧಿಸಿ ಶೇ. 53.76, ಎಂ.ಎಸ್.ಎಂ.ಇ ವಲಯಕ್ಕೆ 3713 ಗುರಿ ನಿಗಧಿಪಡಿಸಲಾಗಿದ್ದು, 2426 ಗುರಿ ಸಾಧಿಸಿ ಶೇ. 65.35 ರಷ್ಟು, ಶಿಕ್ಷಣ ವಲಯಕ್ಕೆ 187 ನಿಗಧಿತ ಗುರಿಗೆ 116 ಗುರಿ ಸಾಧಿಸಿ ಶೇ. 62.12 ರಷ್ಟು, ವಸತಿ ಕ್ಷೇತ್ರಗಳಿಗೆ 510 ನಿಗಧಿತ ಗುರಿಗೆ 111 ಗುರಿ ಸಾಧಿಸಿ ಶೇ. 21.85 ರಷ್ಟು, ಇತರೆ ಕ್ಷೇತ್ರಗಳಿಗೆ 399 ನಿಗಧಿತ ಗುರಿಗೆ, 194 ಗುರಿ ಸಾಧಿಸಿ ಶೇ. 48.46 ಹಾಗೂ ಆದ್ಯತೇತರ ವಲಯಗಳಿಗೆ 6474 ನಿಗಧಿತ ಗುರಿಗೆ, 3819 ಗುರಿ ಸಾಧಿಸಿ ಶೇ. 58.99 ರಷ್ಟು ಸಾಧನೆ ಮಾಡಲಾಗಿದೆ ಎಂದರು.

ಬೆಂಗಳೂರು ಆರ್.ಬಿ.ಐ ಎಫ್.ಐ.ಡಿ.ಡಿ ಲೀಡ್ ಡಿಸ್ಟಿçಕ್ಟ್ ಆಫೀಸರ್ ನಿಶಾ ಠಾಕೂರ್, ಮಾತನಾಡಿ, ಆರ್.ಬಿ.ಐ ನಿಯಮಾನುಸಾರ ಜಿಲ್ಲೆಗಳ ಸಿ.ಡಿ ಅನುಪಾತವು ಶೇ. 50 ಕ್ಕಿಂತ ಕಡಿಮೆ ಇರಬಾರದು. ಇದನ್ನು ಹೆಚ್ಚಿಸಲು ಎಲ್ಲಾ ಬ್ಯಾಂಕ್‌ಗಳ ಅಧಿಕಾರಿಗಳೂ ಕಾರ್ಯಪ್ರವೃತ್ತರಾಗಬೇಕು ಎಂದರು.

ಕೆನರಾ ಬ್ಯಾಂಕ್ ರೀಜನಲ್ ಮ್ಯಾನೆಜರ್ ಮಹಾಮಾಯ ಪ್ರಸಾದ್ ರಾಯ್ ಮಾತನಾಡಿ, ಕಳೆದ ವರ್ಷಕ್ಕೆ ಹೋಲಿಸಿದ್ದಲ್ಲಿ ಬ್ಯಾಂಕಿಂಗ್ ಠೇವಣಿ ಅನುಪಾತವು ಶೇ.47.66 ಇದ್ದು, ಪ್ರಸಕ್ತ ಸಾಲಿನಲ್ಲಿ ಶೇ.48.62 ರಷ್ಟಾಗಿ ಶೇ. 0.96 ರಷ್ಟು ಏರಿಕೆಯಾಗಿದೆ. ಸಿ.ಡಿ ಅನುಪಾತದಲ್ಲಿ ಜಿಲ್ಲೆಯು ಶೇ. 50 ಕ್ಕಿಂತ ಕಡಿಮೆ ಇರುವುದು ವಿಷಾಧನೀಯವಾಗಿದ್ದು, ಮುಂದಿನ ದಿನಗಳಲ್ಲಿ ಸಿ.ಡಿ ಅನುಪಾತ ಹೆಚ್ಚಿಸಲು ಎಲ್ಲಾ ಬ್ಯಾಂರ‍್ಸ್ಗಳು ಕಾರ್ಯಪ್ರವೃತ್ತರಾಗಬೇಕು ಎಂದರು.

ಸಭೆಯಲ್ಲಿ ನಬಾರ್ಡ್ನ ಡಿ.ಡಿ.ಎಂ ಸಂಗೀತಾ ಕಾರ್ಥಾ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕುಗಳ ಮುಖ್ಯಸ್ಥರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...