ಉಡುಪಿ | ಜಲ್ ಜೀವನ್ ಮಿಷನ್, ಬಾಕಿ ಉಳಿದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ : ಸಿ.ಇ.ಓ ಪ್ರತೀಕ್ ಬಾಯಲ್

Date:

Advertisements

ಉಡುಪಿ ಜಿಲ್ಲೆಯ ಗ್ರಾಮೀಣ ಭಾಗದ ಪ್ರತಿಯೊಂದು ಮನೆ ಮನೆಗೂ ನಲ್ಲಿ ನೀರು ಪೂರೈಸುವ ಜಲ್ ಜೀವನ ಮಿಷನ್ ಕಾಮಗಾರಿಯು ಈಗಾಗಲೇ ಶೇ. 92 ಪೂರ್ಣಗೊಂಡಿದೆ. ಬಾಕಿ ಉಳಿದ ಕಾಮಗರಿಗಳನ್ನು ಆದ್ಯತೆಯ ಮೇಲೆ ತ್ವರಿತವಾಗಿ ಪೂರ್ಣಗೊಳಿಸಬೇಕು. ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಜಾಗ್ರತಿ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್ ಅಭಿಯಂತರರಿಗೆ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದರು.
ಜಿಲ್ಲೆಯಲ್ಲಿ ಗ್ರಾಮೀಣ ಭಾಗದ 247000 ಮನೆಗಳಿಗೆ ಕುಡಿಯುವ ನೀರಿನ ನಳ ಸಂಪರ್ಕವನ್ನು ಕಲ್ಪಿಸಲು ಜಲ ಜೀವನ ಅಡಿಯಲ್ಲಿ ಗುರಿ ಹೊಂದಲಾಗಿದ್ದು, ಇವರೆಗೆ 2,14,000 ಮನೆಗಳಿಗೆ ನಳ ಸೌಲಭ್ಯವನ್ನು ಒದಗಿಸಲಾಗಿದೆ. ಬಾಕಿ ಉಳಿದ ಮನೆಗಳಿಗೆ ನಳ ಸೌಲಭ್ಯ ಕಲ್ಪಿಸುವ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಲ ಜೀವನ್ ಮಿಷನ್ ಯೋಜನೆಯಡಿ 525 ಕಾಮಗಾರಿಗಳನ್ನು 687.66 ಕೋ. ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಈಗಾಗಲೇ 484 ಕಾಮಗಾರಿಗಳು ಪೂರ್ಣಗೊಂಡಿವೆ. ಬಾಕಿ ಉಳಿದ 41 ಕಾಮಗಾರಿಗಳು ಪ್ರಗತಿಯಲ್ಲಿವೆ. ಈಗಾಗಲೇ 501.40 ಕೋಟಿ ರೂ. ವಹಿಸಲಾಗಿದೆ ಎಂದರು.

Advertisements
1004701695

ಈಗಾಗಲೇ ಕಳೆದ ಒಂದು ವರ್ಷದಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ ಕೈಗೊಳ್ಳಲು ಯಾವುದೇ ಜಾಗದ ಸಮಸ್ಯೆಗಳು ಇಲ್ಲ. ಆದರೂ ಸಹ ಕಾಮಗರಿ ಪೂರ್ಣಗೊಂಡಿಲ್ಲ. ಕೆಲವು ತಾಂತ್ರಿಕ ಕಾರಣಗಳನ್ನು ಹೇಳುತ್ತಾರೆ. ಇದು ಸರಿಯಲ್ಲ. ನಿಗದಿತ ಕಾಲಾವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸದೇ ಇದ್ದಲ್ಲಿ ಗುತ್ತಿಗೆದಾರರಿಗೆ ದಂಡ ಹಾಕಬೇಕು ಎಂದರು.

ಕುಡಿಯುವ ನೀರನ್ನು ಒದಗಿಸುವ ಕೆಲವು ನಳ ಸಂಪರ್ಕದ ಪೈಪ್‌ಲೈನ್ ಹಾಕುವ ಕಾಮಗಾರಿ ಪೂರ್ಣಗೊಂಡಿದ್ದರು ಸಹ ನೀರಿನ ಮೂಲಗಳಿಲ್ಲದೇ ನೀರಿನ್ನು ಒದಗಿಸಲು ಆಗುತ್ತಿಲ್ಲ. ಸಮೀಪದಲ್ಲಿ ನೀರಿನ ಮೂಲ ವ್ಯವಸ್ಥೆಯನ್ನು ನೋಡಿ ಅವುಗಳಿಗೆ ನೀರು ಒದಗಿಸಬೇಕು. ಹೊಸದಾಗಿ ಬೋರ್ವೆಲ್‌ಗಳನ್ನು ಅಳವಡಿಸುವಾಗ ಅವುಗಳಿಗೆ ಮಳೆ ನೀರಿನ ಕೊಯ್ಲು ಕಾಮಗಾರಿಯನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದ ಅವರು, ಈಗಾಗಲೇ ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಸರಕಾರದ ಬೋರ್ವೆಲ್‌ಗಳಿಗೆ ಮಳೆ ನೀರಿನ ಕೊಯ್ಲು ಅಳವಡಿಸುರುವ ಕುರಿತ ಮಾಹಿತಿಯನ್ನು ಕ್ರೋಢಿಕರಿಸಿ ನೀಡಬೇಕು ಎಂದರು.
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯು ಯಾವುದೇ ಒಂದು ಗ್ರಾಮಗಳಲ್ಲಿ ಆಗದಂತೆ ಎಚ್ಚರವಹಿಸಬೇಕು. ಒಂದೊಮ್ಮೆ ನೀರಿನ ಸರಬರಾಜಿನ ಸಮಸ್ಯೆ ಉಂಟಾದಲ್ಲಿ ಸಮೀಪದ ಖಾಸಗಿ ಬೋರೆವೆಲ್ ಮಾಲೀಕರರಿಂದ ಪಡೆಯಲು ಅನುಕೂಲವಾಗುವಂತೆ ಗುರುತಿಸಿ, ಒಪ್ಪಂದ ಮಾಡಿಕೊಂಡು ಸಮಸ್ಯೆಯಾದಲ್ಲಿ ನೀರು ಸರಬರಾಜು ಮಾಡಲು ಮುಂದಾಗಬೇಕು ಎಂದು ಸೂಚನೆ ನೀಡಿದರು.

ಈಗಾಗಲೇ ಕೆಲವು ಕುಡಿಯುವ ನೀರು ಸೌಲಭ್ಯ ಒದಗಿಸುವ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಕಳೆದ ಐದು ವರ್ಷಗಳಿಂದ ಕೈಗೊಂಡಿರುವ ಕಾಮಗಾರಿಗಳ ಮಾಹಿತಿಗಳನ್ನು ಕಲೆಹಾಕಿ ಓವರ್ ಲ್ಯಾಪ್ ಅದ ಬಗ್ಗೆ ಎಚ್ಚರವಹಿಸಬೇಕು ಎಂದರು.

ಜಿಲ್ಲೆಯಾದ್ಯಂತ ಕುಡಿಯಲು ಯೋಗ್ಯವಾಗಿರುವ ಸ್ವಚ್ಛ ನೀರನ್ನು ಸರಬರಾಜು ಮಾಡಬೇಕು. ಎಲ್ಲಿಯೂ ಸಹ ಕಲುಷಿತ ನೀರು ಸರಬರಾಜು ಆಗದಂತೆ ಎಲ್ಲಾ ರೀತಿಯ ಎಚ್ಚರಿಕ ಕ್ರಮಗಳನ್ನು ಕೈಗೊಳ್ಳಬೇಕು ಎಂದ ಅವರೂ, ಕಳೆದ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದ ಗ್ರಾಮಗಳನ್ನು ಗುರುತಿಸಿ, ನೀರಿನ ಸಮಸ್ಯೆ ಉಂಟಾಗದಂತೆ ಯೋಜನೆ ಸಿದ್ದಗೊಳಿಸಬೇಕು ಎಂದರು.

ಸಭೆಯಲ್ಲಿ ಪೌರಯುಕ್ತ ಡಾ. ಉದಯ್ ಕುಮಾರ್ ಶೆಟ್ಟಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಉದಯ್ ಕುಮಾರ್, ಸಾಮಾಜಿಕ ಅರಣ್ಯ ವಿಭಾಗದ ಉಪ ಸಂರಕ್ಷಣಾ ಅಧಿಕಾರಿ ರವೀಂದ್ರ ಕುಮಾರ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ್ ಉಡುಪ, ಅಂತರ್ಜಲ ನಿರ್ದೇಶನಲಯದ ಹಿರಿಯ ಭೂ ವಿಜ್ಞಾನಿ ದಿನಕರ ಶೆಟ್ಟಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X