ಉಡುಪಿ ಪ್ರಕರಣ | ಅಯ್ನಾಝ್ ಕೊಲ್ಲುವ ಉದ್ದೇಶದಿಂದಲೇ ಪ್ರವೀಣ್ ಚೌಗಲೆ ಬಂದಿದ್ದ: ಎಸ್‌ಪಿ

Date:

Advertisements

ಉಡುಪಿಯಲ್ಲಿ ಒಂದೇ ಮನೆಯ ನಾಲ್ವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್, ಅಯ್ನಾಝ್ ಕೊಲ್ಲುವ ಉದ್ದೇಶದಿಂದಲೇ ಪ್ರವೀಣ್ ಮನೆಗೆ ಬಂದಿದ್ದ. ಕೊಲೆಗೆ ಎರಡು ಮೂರು ಕಾರಣಗಳನ್ನು ನೀಡಿದ್ದಾನೆ. ಆದರೆ ಅದನ್ನು ಪರಿಶೀಲನೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

sp udupi arun
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್

ಪ್ರಾಥಮಿಕ ಹಂತದ ವಿಚಾರಣೆಯ ಬಳಿಕ ಇಂದು(ನ.15) ಸಂಜೆ ಕರೆದಿದ್ದ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ನಾಲ್ವರನ್ನು ಕೊಲೆಗೈದಿರುವುದು ತಾನೇ ಎಂದು ಪ್ರವೀಣ್ ಅರುಣ್ ಚೌಗಲೆ(39) ಎಂದು ತಿಳಿಸಿದ್ದಾನೆ. ಕೊಲೆಗೈಯಲು ಎರಡು ಮೂರು ಕಾರಣ ತಿಳಿಸಿದ್ದಾನೆ. ಈ ಎಲ್ಲ ಕಾರಣಗಳ ಬಗ್ಗೆ ನಾವು ದೃಢಪಡಿಸದೆ ವಿಚಾರ ತಿಳಿಸಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

‘ಏರ್ ಇಂಡಿಯಾ ಕ್ಯಾಬಿನ್ ಕ್ರೂ ಉದ್ಯೋಗಿಯಾಗಿರುವ ಈತ ಮಹಾರಾಷ್ಟ್ರದ ಸಾಂಗ್ಲಿ ಮೂಲದವ. ತನ್ನ ಸಹೋದ್ಯೋಗಿಯಾಗಿದ್ದ ಅಯ್ನಾಝ್ ಅವರನ್ನು ಕೊಲೆಗೈಯಲು ಮನೆಗೆ ಬಂದಿದ್ದಾನೆ. ಇದು ಆತನ ಪೂರ್ವ ನಿಯೋಜಿತ ಕೃತ್ಯ. ಚಾಕುವಿನಿಂದ ಕೊಲೆಗೈದಿರುವುದಾಗಿ ಒಪ್ಪಿಕೊಂಡಿದ್ದಾನೆ. ಅಯ್ನಾಝ್ ಅವರನ್ನು ಕೊಲೆಗೈಯುತ್ತಿದ್ದಾಗ ತಡೆಯಲು ಬಂದ ಹಿನ್ನೆಲೆಯಲ್ಲಿ ಸಾಕ್ಷಿ ನಾಶ ಮಾಡುವ ಉದ್ದೇಶದಿಂದಲೇ ಮನೆಯಲ್ಲಿದ್ದವರ ಮೇಲೂ ಚಾಕು ಇರಿದು ಕೊಲೆಗೈದಿದ್ದೇನೆ ಎಂಬುದನ್ನು ಒಪ್ಪಿಕೊಂಡಿದ್ದಾನೆ. ಸದ್ಯದ ವಿಚಾರಣೆಯಲ್ಲಿ ಈತನೊಬ್ಬನೇ ಕೃತ್ಯ ಎಸಗಿದ್ದಾನೆ. ಕೊಲೆಗೈದ ನಂತರ ಹೇಗೆಲ್ಲ ಪರಾರಿಯಾದ ಎಂಬ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇವೆ. ಈತ ಮದುವೆಯಾಗಿರುವುದಾಗಿಯೂ ತನಿಖೆಯಿಂದ ತಿಳಿದುಬಂದಿದೆ’ ಎಂದು ಉಡುಪಿ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ.

Advertisements

Udupi Murder Case

‘ಪ್ರಕರಣದ ಬಗ್ಗೆ ಇನ್ನಷ್ಟು ಮಾಹಿತಿ ಕಲೆ ಹಾಕುತ್ತಿದ್ದೇವೆ. ಮೇಲ್ನೋಟಕ್ಕೆ ಎರಡು ಮೂರು ಉದ್ದೇಶ ತಿಳಿಸಿದ್ದಾನೆ. ಶೀಘ್ರದಲ್ಲೇ ಆರೋಪಿಯು ನೀಡಿರುವ ಮಾಹಿತಿಯನ್ನಾಧರಿಸಿ, ತನಿಖಾಧಿಕಾರಿಗಳು ದೃಢೀಕರಿಸಲಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ 15-20 ಜನರನ್ನು ವಿಚಾರಣೆ ನಡೆಸಿದ್ದೇವೆ. ಈತ ಕೊಲೆಗೈದಿರುವುದನ್ನು ಒಪ್ಪಿಕೊಂಡಿರುವುದರಿಂದ ಪ್ರವೀಣ್ ಅರುಣ್ ಚೌಗಲೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದೇವೆ’ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X