ಬೆಂಗಳೂರು | ಭೀಕರ ಅಪಘಾತ: ಗರ್ಭಿಣಿ ಹೊಟ್ಟೆಯಿಂದ ಹೊರಬಂದ ಮಗು ಸಾವು

Date:

Advertisements

ಟಿಪ್ಪರ್ ಡಿಕ್ಕಿಯಾಗಿ ಗರ್ಭಿಣಿ ಹೊಟ್ಟೆಯಿಂದ ಹೊರಬಂದು ಮಗು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.

ಈ ಭೀಕರ ಅಪಘಾತದಲ್ಲಿ ಗರ್ಭಿಣಿ ಎಡೇಹಳ್ಳಿಯ ಸಿಂಚನಾ (30) ಕೂಡಾ ಸಾವನ್ನಪ್ಪಿದ್ದಾರೆ. ಸಿಂಚನಾ ಹೊಟ್ಟೆಯಲ್ಲಿದ್ದ 8 ತಿಂಗಳ ಮಗು ಹೊರಬಂದು ಒದ್ದಾಡಿ ಸಾವನ್ನಪ್ಪಿದೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಕೋಲಾರ | ಮರಕ್ಕೆ ಡಿಕ್ಕಿ ಹೊಡೆದು ಆಡಿ ಕಾರು ಅಪಘಾತ; ಮೂವರು ವಿದ್ಯಾರ್ಥಿಗಳು ಮೃತ್ಯು

ಸಿಂಚನಾ ಪತಿ ಮಂಜುನಾಥ್ ಜೀವಾಪಾಯದಿಂದ ಪಾರಾಗಿದ್ದಾರೆ. ಸಿಂಚನಾಗೆ ಆಗಸ್ಟ್​ 17ಕ್ಕೆ 8 ಮುಗಿದು 9 ತಿಂಗಳು ತುಂಬುತ್ತಿತ್ತು. ಹೆರಿಗೆ ಸುಸೂತ್ರವಾಗಿ ಆಗಲಿ ಎಂದು ದಂಪತಿ ಬೈಕ್​ನಲ್ಲಿ​​ ದಾಬಸ್​ ಪೇಟೆಯಲ್ಲಿರುವ ಶಿವಗಂಗೆಯ ಗಣಪತಿ ದೇವಸ್ಥಾನಕ್ಕೆ ತೆರಳಿದ್ದರು ಎನ್ನಲಾಗಿದೆ. ದಾರಿ ಮಧ್ಯ ಟಿಪ್ಪರ್​ ಡಿಕ್ಕಿ ಹೊಡೆದು ಗರ್ಭಿಣಿ ಮತ್ತು ಮಗು ಸಾವನ್ನಪ್ಪಿದೆ.

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳದಲ್ಲೇ ಟಿಪ್ಪರ್ ನಿಲ್ಲಿಸಿ ಚಾಲಕ ಪರಾರಿಯಾಗಿದ್ದು ಈ ಬಗ್ಗೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

Download Eedina App Android / iOS

X