ಬಾಣಂತಿಯರ ಸರಣಿ ಸಾವು | ಬಳ್ಳಾರಿ ಬಿಮ್ಸ್ ಆಸ್ಪತ್ರೆಗೆ ಲೋಕಾಯುಕ್ತ ದಾಳಿ

Date:

ಬಳ್ಳಾರಿಯ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಮ್ಸ್ ಆಸ್ಪತ್ರೆಗೆ ಶನಿವಾರ ಲೋಕಾಯುಕ್ತ ದಾಳಿ ನಡೆದಿದೆ. ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಐವರು ಬಾಣಂತಿಯರು ಸಾವನ್ನಪ್ಪಿದ್ದಾರೆ.

- Advertisement -

ಈ ಹಿನ್ನೆಲೆ ಜಿಲ್ಲಾಸ್ಪತ್ರೆಯ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಲೋಕಾಯುಕ್ತ ಎಸ್‌ಪಿ ಸಿದ್ದರಾಜು ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

25ಕ್ಕೂ ಹೆಚ್ಚು ಅಧಿಕಾರಿಗಳ ಲೋಕಾಯುಕ್ತ ತಂಡವು ಹೆರಿಗೆ ವಾರ್ಡ್, ಐಸಿಯು ಮತ್ತು ಔಷಧಿ ದಾಸ್ತಾನು ಉಗ್ರಾಣಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಅಧಿಕಾರಿಗಳು ಐವಿ, ಆರ್‌ಎಲ್‌ ಪ್ಲೂಯಿಡ್ ಔಷಧಿ ಬಗ್ಗೆಯೂ ಮಾಹಿತಿ ತಿಳಿಯುತ್ತಿದ್ದಾರೆ.

ಇದನ್ನು ಓದಿದ್ದೀರಾ? ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು; ಡ್ರಗ್ ಕಂಟ್ರೋಲರ್ ಸಸ್ಪೆಂಡ್: ಸಿ.ಎಂ.ಸಿದ್ದರಾಮಯ್ಯ

ಇನ್ನು ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಬಗ್ಗೆ ಹೇಳಿಕೆ ನೀಡಿರುವ ಕರ್ನಾಟಕ ಆರೋಗ್ಯ ಸಚಿವ ಡಿ ದಿನೇಶ್ ಗುಂಡೂರಾವ್, “ಬಳ್ಳಾರಿಯಲ್ಲಿ 9 ಮಂದಿಯ ಪೈಕಿ ಐವರು ಸಾವನ್ನಪ್ಪಿದ್ದಾರೆ. ಇದು ಅತೀ ಗಂಭೀರ ವಿಷಯ. ನಾವು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಇದಕ್ಕೆ ಯಾರು ಕಾರಣವೋ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ಹಾಗೆಯೇ “ಈಗಾಗಲೇ ಒಬ್ಬರ ಅಮಾನತು ಮಾಡಲಾಗಿದೆ. ನಿಜವಾಗಿ ಅಲ್ಲಿ ಏನು ನಡೆದಿದೆ ಎಂಬ ಬಗ್ಗೆ ನಾವು ವರದಿ ಪಡೆಯಬೇಕಿದೆ. ಎಲ್ಲಾ ಪರೀಕ್ಷೆಗಳನ್ನು ಮಾಡಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...