ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ ಪೂರ್ವಸಿದ್ಧತೆ ಆರಂಭ ಎಲ್ಲಾ ಇಲಾಖೆಗಳ ಸಮನ್ವಯಕ್ಕೆ ಜಿಲ್ಲಾಧಿಕಾರಿ ಸೂಚನೆ

Date:


ಡಿಸೆಂಬರ್‌ನಲ್ಲಿ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನವನ್ನು ಯಶಸ್ವಿಯಾಗಿ ನಡೆಸಲು ಜಿಲ್ಲೆಯ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ಬುಧವಾರ ಸುವರ್ಣ ವಿಧಾನಸೌಧದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,

“ಕಳೆದ ಬಾರಿಯಂತೆಯೇ ಈ ಬಾರಿಯೂ ದೋಷರಹಿತ ಹಾಗೂ ಅಚ್ಚುಕಟ್ಟಾದ ವ್ಯವಸ್ಥೆ ರೂಪಿಸಬೇಕು,”
ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಉಪಸಮಿತಿಗಳ ಜವಾಬ್ದಾರಿ

ಅಧಿವೇಶನದ ನಿರ್ವಹಣೆಗೆ ವಿವಿಧ ಉಪಸಮಿತಿಗಳನ್ನು ರಚಿಸಲಾಗಿದ್ದು, ಅವುಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕೆಂದು ಸೂಚಿಸಿದರು.

ಭದ್ರತೆ ಮತ್ತು ಪಾಸ್‌ ವಿತರಣಾ ಕ್ರಮ

ಅಧಿವೇಶನಕ್ಕೆ ಆಗಮಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಪಾಸ್‌ ವಿತರಣೆ ವೇಳೆ ಪೊಲೀಸ್‌ ಇಲಾಖೆಯೊಂದಿಗೆ ಸಮನ್ವಯ ಕಾಪಾಡಬೇಕು. ಸಾರ್ವಜನಿಕರಿಗೆ ಪಾಸ್‌ ನೀಡುವಾಗ ಅಗತ್ಯ ದಾಖಲೆಗಳ ಪರಿಶೀಲನೆ ಕಡ್ಡಾಯ ಎಂದು ತಿಳಿಸಿದರು.

ವೈದ್ಯಕೀಯ ಹಾಗೂ ಆಹಾರ ಸಿದ್ಧತೆ

ಸಚಿವರು, ಶಾಸಕರು, ಅಧಿಕಾರಿಗಳು ತಂಗುವ ಸ್ಥಳಗಳಲ್ಲಿ ವೈದ್ಯರ ತಂಡ ಮತ್ತು ಆ್ಯಂಬುಲೆನ್ಸ್‌ ವ್ಯವಸ್ಥೆ ಇರಬೇಕು. ಸುವರ್ಣ ವಿಧಾನಸೌಧದ ಒಳಗೆ ಆಹಾರ ವ್ಯವಸ್ಥೆ ಮತ್ತು ಹೊರಗಡೆ ಪೇಡ್‌ ಕ್ಯಾಂಟೀನ್‌ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುತ್ತದೆ.

ತಾಂತ್ರಿಕ ಸೌಲಭ್ಯ ಖಚಿತತೆ

ಅಧಿವೇಶನದ ಅವಧಿಯಲ್ಲಿ ದೂರವಾಣಿ ಹಾಗೂ ಇಂಟರ್ನೆಟ್‌ ಸಂಪರ್ಕದಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದರು.

“ಸುವರ್ಣ ವಿಧಾನಸೌಧದಲ್ಲಿ ನೆಟವರ್ಕ್‌ ಸಮಸ್ಯೆ ಆಗದಂತೆ ಎಲ್ಲಾ ಸಿದ್ಧತೆಗಳು ನಡೆಯಲಿ,”
ಎಂದು ಹೇಳಿದರು.

ಪೊಲೀಸ್‌ ಆಯುಕ್ತ ಗುಲಾಬ್‌ರಾವ್‌ ಭೂಷಣ ಬೊರಸೆ ಮಾತನಾಡಿ

“ಸುವರ್ಣ ವಿಧಾನಸೌಧಕ್ಕೆ ಬರುವ ವಾಹನಗಳು ಮತ್ತು ವ್ಯಕ್ತಿಗಳ ಪಾಸ್‌ಗಳನ್ನು ಪರಿಶೀಲಿಸಿದ ಬಳಿಕವೇ ಪ್ರವೇಶ ನೀಡಲಾಗುತ್ತದೆ,”
ಎಂದು ಎಚ್ಚರಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...