ಚಾಮರಾಜನಗರ | ಅಂಬೇಡ್ಕರ್ ಜಯಂತಿ ಸಿದ್ದತಾ ಕಾರ್ಯ ಭರದಿಂದ ಸಾಗಿದೆ : ಮಾಜಿ ಸಂಸದ ಎ. ಸಿದ್ದರಾಜು

Date:

Advertisements

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕು ಅಗತಗೌಡನಹಳ್ಳಿ ಗ್ರಾಮದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಸಂಘಕ್ಕೆ ಐವತ್ತು ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ 134 ನೇ ಅಂಬೇಡ್ಕರ್ ಜನ್ಮ ದಿನಾಚರಣೆ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಅದ್ದೂರಿಯಾಗಿ ಇದೇ ತಿಂಗಳ ಜೂನ್. 29 ರಂದು ನಡೆಸಲು ಸಿದ್ದತಾ ಕಾರ್ಯ ಭರದಿಂದ ಸಾಗಿದೆ ಎಂದು ಮಾಹಿತಿ ನೀಡಿದ್ದಾರೆ.

‘ ಬಾಬಾ ಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಸರ್ವರಿಗೂ ಸಮಾನ ಅವಕಾಶ ಹಾಗೂ ಸಮಾನ ಹಕ್ಕುಗಳನ್ನು ನೀಡಿದ್ದಾರೆ. ಇದರ ಪರಿಣಾಮವಾಗಿ ನಮ್ಮ ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಪ್ರಗತಿ ಸಾಧಿಸಲು ಸಾಧ್ಯವಾಯಿತು. ಹಾಗೆಯೇ, ಅನೇಕರು ಸರ್ಕಾರಿ ಅಧಿಕಾರಿಗಳಾಗಲು, ರಾಜಕೀಯವಾಗಿ ಅಧಿಕಾರ ಹೊಂದಲು ಅವರು ನೀಡಿದ ಸಂವಿಧಾನ ಕಾರಣವಾಯಿತು ‘ ಎಂದರು.

ಅಂಬೇಡ್ಕರ್ ಜನ್ಮ ದಿನಾಚರಣೆ ಸಮಿತಿಯ ಸದಸ್ಯರಾದ ನಿವೃತ್ತ ಪ್ರಾಂಶುಪಾಲ ಸೋಮಶೇಖರ್ ಮೂರ್ತಿ ಮಾತನಾಡಿ, ಈಗಾಗಲೇ ಎಲ್ಲಾ ಸಿದ್ದತೆ ನಡೆಸಲಾಗಿದೆ. ಅಂಬೇಡ್ಕರ್ ಜ್ಞಾನದ ಬಲದಿಂದ ವಿಶ್ವ ಮಾನ್ಯತೆ ಪಡೆಯಲು ಸಾಧ್ಯವಾಯಿತು. ಶಿಕ್ಷಣ, ಸಂಘಟನೆ ಹಾಗೂ ಹೋರಾಟದ ಮಹತ್ವವನ್ನು ತಿಳಿಸಿದ್ದಾರೆ. ಆದ್ದರಿಂದ, ಅವರ ಹಾದಿಯಲ್ಲಿ ನಡೆಯಲು ಮುಂದಿನ ಪೀಳಿಗೆಗೆ ತಿಳಿಸಿ ಕೊಡುವ ಜವಾಬ್ದಾರಿ ನಮ್ಮದಾಗಿದೆ. ಸಮಾರಂಭಕ್ಕೆ ಗುಂಡ್ಲುಪೇಟೆ ತಾಲೂಕು ವ್ಯಾಪ್ತಿಯಲ್ಲಿ ಬರುವ ವಿವಿಧ ಮಾಡ್ರಹಳ್ಳಿ, ನೇನೇಕಟ್ಟೆ , ಮುಂಟೀಪುರ, ಮೂಖಹಳ್ಳಿ, ಆಲತ್ತೂರು, ಸಾವಕನಹಳ್ಳಿ , ಗರಗನಹಳ್ಳಿ, ಬೆಂಡಗಳ್ಳಿ, ಸೋಮಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಎಂದರು.

Advertisements

ಇದೇ ತಿಂಗಳ 29 ರಂದು ನಡೆಯುವ ಕಾರ್ಯಕ್ರಮದಲ್ಲಿ ಮನೋರಖ್ಖಿತ ಭಂತೇಜಿ, ಉರಿಲಿಂಗಿ ಪೆದ್ದಿ ಮಠದ ಜ್ಞಾನ ಪ್ರಕಾಶ್ ಸ್ವಾಮೀಜಿ, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ರೇಷ್ಮೆ ಹಾಗೂ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್, ಮುಖ್ಯ ಭಾಷಣಕಾರರಾಗಿ ವಿಚಾರವಾದಿ ಕೆ. ಎಸ್. ಭಾಗವಾನ್, ಅಧ್ಯಕ್ಷತೆಯನ್ನು ಶಾಸಕ ಹೆಚ್. ಎಂ. ಗಣೇಶ್ ಪ್ರಸಾದ್ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಸಂಸದ ಸುನೀಲ್ ಬೋಸ್, ಶಾಸಕರುಗಳಾದ ಪುಟ್ಟರಂಗ ಶೆಟ್ಟಿ,ಎ. ಆರ್. ಕೃಷ್ಣ ಮೂರ್ತಿ , ದರ್ಶನ್ ಧೃವನಾರಾಯಣ ಇರಲಿದ್ದಾರೆಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ; ಬಂಧಿತರ ಮೇಲೆ ದೇಶ ದ್ರೋಹದ ಪ್ರಕರಣ ದಾಖಲಿಸುವಂತೆ ದಸಂಸ ಆಗ್ರಹ

ಶಿವರಾಜ್, ಮಾನವ ಬಂಧುತ್ವ ವೇದಿಕೆಯ ಸುಭಾಷ್ ಮಾಡ್ರಹಳ್ಳಿ, ಯಶ್ವಂತ್ , ವಕೀಲ ಮುದ್ದ ಮಹದೇವ, ಪ್ರೊ. ಷಣ್ಮುಗಂ, ಸಣ್ಣಯ್ಯ, ಅಪುರಾ, ಗ್ರಾಮದ ಯಜಮಾನ ಅಂಕನಾಥ್ ಸೇರಿದಂತೆ ಪ್ರಮುಖರು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X