ಮೇ.5ರಂದು ಮೈಸೂರಿನಲ್ಲಿ ‘ಅದಮ್ಯ ಕಾಯಕಯೋಗಿ ಪ್ರಶಸ್ತಿ’ ಪ್ರದಾನ-ಮಕ್ಕಳ ನಾಟಕ ಪ್ರದರ್ಶನ

Date:

ಅದಮ್ಯ ರಂಗಶಾಲೆಯ ವತಿಯಿಂದ ವಿ.ಕೆ. ಪಬ್ಲಿಕ್ ಸ್ಕೂಲ್ ಸಹಯೋಗದೊಂದಿಗೆ ಮೈಸೂರು ನಗರದ ಕಲಾಮಂದಿರದ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಮೇ. 5ರಂದು ಸಂಜೆ 6 ಗಂಟೆಗೆ ‘ಅದಮ್ಯ ಕಾಯಕಯೋಗಿ’ ಪ್ರಶಸ್ತಿ ಪ್ರದಾನ ಹಾಗೂ ಮಕ್ಕಳ ನಾಟಕ ಪ್ರದರ್ಶನ ನಡೆಯಲಿದೆ.

- Advertisement -

ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯ ಡಾ. ಈ.ಸಿ. ನಿಂಗರಾಜ್ ಗೌಡ ಉದ್ಘಾಟಿಸಲಿದ್ದು, ವಿಜಯನಗರದ ಮೂರನೇ ಹಂತದಲ್ಲಿರುವ ವಿ.ಕೆ. ಪಬ್ಲಿಕ್ ಸ್ಕೂಲ್ ಕಾರ್ಯದರ್ಶಿ ರವಿಕುಮಾರ್ ಬೆಕ್ಯಾ ಅಧ್ಯಕ್ಷತೆ ವಹಿಸಲಿದ್ದಾರೆ. ಅದಮ್ಯ ರಂಗಶಾಲೆಯ ಗೌರವ ಕಾರ್ಯದರ್ಶಿ ಹಾಗೂ ಸಾಹಿತಿ ಟಿ. ಸತೀಶ್ ಜವರೇಗೌಡ ಆಶಯ ನುಡಿಗಳನ್ನಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ‘ಅದಮ್ಯ ಕಾಯಕಯೋಗಿ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಶಿಕ್ಷಣ ಕ್ಷೇತ್ರದಲ್ಲಿ ಮದ್ದೂರು ತಾಲೂಕಿನ ಕೆ.ಎಂ. ದೊಡ್ಡಿಯ ಭಾರತೀ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎಸ್.ಎಲ್. ಸುರೇಶ್, ಮಾಧ್ಯಮ ಕ್ಷೇತ್ರದಲ್ಲಿ ‘ಆಂದೋಲನ’ ದಿನಪತ್ರಿಕೆಯ ಹಿರಿಯ ಉಪಸಂಪಾದಕ ಗಿರೀಶ್ ಹುಣಸೂರು, ಸಂಘಟನಾ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ ರಾಜ್ಯಾಧ್ಯಕ್ಷೆ ಹೆಚ್.ಎಲ್. ಯಮುನಾ ಹಾಗೂ ಉದ್ಯಮ ಮತ್ತು ಸಮಾಜಸೇವಾ ಕ್ಷೇತ್ರದಲ್ಲಿ ಮೈಸೂರಿನ ತೇಗು ಮೆಸ್‌ನ ಮಾಲೀಕ ಟಿ. ಶಾಮ್ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಕನ್ನಡಪ್ರಭ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಅಂಶಿ ಪ್ರಸನ್ನ ಕುಮಾರ್ ಪ್ರಶಸ್ತಿ ಪ್ರದಾನ ಮಾಡುವರು.

ಈ ವಿಶೇಷ ಸುದ್ದಿ ಓದಿದ್ದೀರಾ? ಮೈಸೂರು | ಚೆಲುವಾಂಬ ಆಸ್ಪತ್ರೆಯಲ್ಲಿ ಶಿಶುಗಳ ಸರಣಿ ಸಾವು: ವ್ಯವಸ್ಥೆಯ ವೈಫಲ್ಯವೇ?

ಕಾರ್ಯಕ್ರಮದ ಬಳಿಕ ಬಾಲಂಗೋಚಿ ಶಿಬಿರದ ಮಕ್ಕಳು ಅಭಿನಯಿಸುವ ‘ಮಳೆ ಹುಚ್ಚ’ ಹಾಗೂ ‘ಗುಬ್ಬಿ ಮತ್ತು ಗೋಪಿ’ ಮಕ್ಕಳ ನಾಟಕಗಳು ಪ್ರದರ್ಶನಗೊಳ್ಳಲಿವೆ ಎಂದು ರಂಗಶಾಲೆಯ ಕಾರ್ಯದರ್ಶಿ ಚಂದ್ರು ಮಂಡ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...