ಧರ್ಮಸ್ಥಳ | ಯೂಟ್ಯೂಬರ್‌ಗಳ ಮೇಲೆ ಹಲ್ಲೆ; ಆರೋಪಿಗಳ ಬಂಧನಕ್ಕೆ ಪ್ರೆಸ್ ಕ್ಲಬ್ ಕೌನ್ಸಿಲ್ ಆಗ್ರಹ

Date:

Advertisements

ಇತ್ತೀಚೆಗೆ ಧರ್ಮಸ್ಥಳದಲ್ಲಿ ನಿನ್ನೆ ಕುಡ್ಲ ರ‍್ಯಾಂಪೇಜ್ ಎಂಬ ಹೆಸರಿನ ಯೂಟ್ಯೂಬರ್ ಆಗಿರುವ ಅಜಯ್ ಅಂಚನ್, ಯುನೈಟೆಡ್‌ ಮೀಡಿಯಾದ ಅಭಿಷೇಕ್, ಸಂಚಾರಿ ಸ್ಟುಡಿಯೋದ ವಿಜಯ್ ಮತ್ತು ಕುಡ್ಲಾ ರಾಂಪೇಜ್‌ನ ಕ್ಯಾಮೆರಾ ಪರ್ಸನ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಈ ಪ್ರಕರಣದ ಆರೋಪಿಗಳನ್ನು ಬಂಧಿಸಬೇಕು ಎಂದು ಪ್ರೆಸ್ ಕ್ಲಬ್ ಕೌನ್ಸಿಲ್ ಆಗ್ರಹಿಸಿದೆ.

ಈ ಸಂಬಂಧ ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪ್ರೆಸ್ ಕ್ಲಬ್ ಕೌನ್ಸಿಲ್ ಮನವಿ ನೀಡಿದೆ. “ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಅಕ್ರಮವಾಗಿ ಹೂತಿಟ್ಟ ಪ್ರಕರಣದ ಬಗ್ಗೆ ಮಾಧ್ಯಮಗಳು ವರದಿ ಮಾಡುವ ಸಮಯದಲ್ಲಿ ಹಲ್ಲೆ ನಡೆದಿದೆ. ಹೂತು ಹಾಕಿರುವ ಶವಗಳ ಅಸ್ಥಿ ಪಂಜರಗಳು ದೊರೆತ ಬಗ್ಗೆ ಯಾರೂ ಪ್ರಸಾರ ಮಾಡಬಾರದೆಂದು ಬೆದರಿಕೆ ಒಡ್ಡಲಾಗುತ್ತಿದೆ” ಎಂದು ಕೌನ್ಸಿಲ್ ಆರೋಪಿಸಿದೆ.

ಇದನ್ನು ಓದಿದ್ದೀರಾ? ಧರ್ಮಸ್ಥಳ | ಯೂಟ್ಯೂಬರ್‌ಗಳ ಮೇಲೆ ಹಲ್ಲೆ; ನಟ ಪ್ರಕಾಶ್ ರಾಜ್ ಖಂಡನೆ

Advertisements

“ಈ ಘಟನೆಯನ್ನು ರಾಜ್ಯದ ಎಲ್ಲಾ ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ” ಎಂದು ಹೇಳಿರುವ ಕೌನ್ಸಿಲ್, “ಪತ್ರಕರ್ತರ ಮೇಲೆ ನಡೆದ ಹಲ್ಲೆಯನ್ನು ಪ್ರೆಸ್ ಕ್ಲಬ್ ಕೌನ್ಸಿಲ್ ಮಾಧ್ಯಮ ಸಂಸ್ಥೆಯು ತೀವ್ರವಾಗಿ ಖಂಡಿಸುತ್ತೇವೆ” ಎಂದು ತಿಳಿಸಿದೆ.

“ಯೂಟ್ಯೂಬರ್‌ಗಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದವರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಇವರ ಹಿಂದಿರುವ ಪ್ರಭಾವಿ ಶಕ್ತಿಗಳು ಯಾರೆಂಬುದನ್ನು ಪತ್ತೆ ಮಾಡಿ ಅವರ ಮೇಲೂ ಕ್ರಮ ಕೈಗೊಳ್ಳಬೇಕು” ಎಂದು ಪತ್ರಿಕಾ ಸಂಸ್ಥೆ ಆಗ್ರಹಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

Download Eedina App Android / iOS

X