ಬೊಲೆರೋ ಟೆಂಪೊಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕಿನ ಚೇಳೂರು ರಸ್ತೆಯ ಸಿದ್ದೇಪಲ್ಲಿ ಕ್ರಾಸ್ ಬಳಿ ಮಂಗಳವಾರ ಬೆಳಗ್ಗೆ 7 ಗಂಟೆ ಸಮಯದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ಪಾತಪಾಳ್ಯ ಸಮೀಪದ ಶಿವಪುರ ಗ್ರಾಮದ ರೆಡ್ಡಪ್ಪ(35) ಮೃತ ದುರ್ದೈವಿ. ಮಂಗಳವಾರ ಬೆಳಗ್ಗೆ ನೆರೆಯ ಆಂಧ್ರದಿಂದ ಚಿಂತಾಮಣಿ ಟೊಮೊಟೋ ಮಾರುಕಟ್ಟೆಗೆ ಟೊಮೊಟೋ ಸಾಗಿಸುತ್ತಿದ್ದ ಬೊಲೆರೋ ಟೆಂಪೋಗೆ ಚಿಂತಾಮಣಿ ಕಡೆಯಿಂದ ಆಂಧ್ರ ಕಡೆಗೆ ಚಲಿಸುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೊಲೆರೋ ಟೆಂಪೋ ಚಾಲಕ ರೆಡ್ಡಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಖಾಸಗಿ ಬಸ್ ಚಾಲಕ ಕಿರಣ್ ಹಾಗೂ ಇತರೆ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸುದ್ದಿ ಓದಿದ್ದೀರಾ? ಪಕ್ಷೇತರರ ಪಾಲಾದ ಗೌರಿಬಿದನೂರು ನಗರಸಭೆ
ಅಪಘಾತದ ಹಿನ್ನೆಲೆ ರಸ್ತೆ ತುಂಭಾ ಟೊಮೊಟೋ ಚೆಲ್ಲಾಪಿಲ್ಲಿಯಾಗಿದ್ದ ಹಿನ್ನೆಲೆ ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು. ಸ್ಥಳಕ್ಕಾಗಮಿಸಿದ ಕೆಂಚಾರ್ಲಹಳ್ಳಿ ಪೊಲೀಸರು ಟ್ರಾಫಿಕ್ ತೆರವುಗೊಳಿಸಿ ಸಂಚಾರಕ್ಕೆಅನುವು ಮಾಡಿಕೊಟ್ಟಿದ್ದಾರೆ. ಕೆಂಚಾರ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.