ಖಾಸಗಿ ಸಾರಿಗೆಯವರಿಗೆ ಪರಿಹಾರ ಕೊಡಲು ಪ್ರಾಯೋಗಿಕವಾಗಿ ಸಾಧ್ಯವಿಲ್ಲ: ರಾಮಲಿಂಗಾರೆಡ್ಡಿ

Date:

  • ‘ಸಾರಿಗೆ ಚಾಲಕರು 3 ಲಕ್ಷ ಮಂದಿ ಇದ್ದು, ಅವರ ಬೇಡಿಕೆ ಈಡೇರಿಕೆ ಕಷ್ಟ’
  • ‘ಪ್ರತಿಯೊಬ್ಬರಿಗೆ ಪರಿಹಾರ ಕೊಟ್ಟರೆ 5,009 ಕೋಟಿ ರೂ. ಬೇಕಾಗುತ್ತದೆ’

ಖಾಸಗಿ ಸಾರಿಗೆಯವರು ಶಕ್ತಿ ಯೋಜನೆಯಿಂದ ನಷ್ಟ ಆಗಿದೆ ಪರಿಹಾರ ಕೊಡಿ ಅಂತಿದ್ದಾರೆ. ಅದು ಪ್ರಾಯೋಗಿಕವಾಗಿ ಸಾಧ್ಯವಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದರು.

ಖಾಸಗಿ ಸಾರಿಗೆ ಒಕ್ಕೂಟದ ಮುಷ್ಕರ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, “ನಮ್ಮ ಶಕ್ತಿ ಯೋಜನೆಗೆ ಬಜೆಟ್‌ನಲ್ಲಿ 2500 ಕೋಟಿ ರೂ. ಇಡಲಾಗಿದೆ. ಆಟೋ ಚಾಲಕರು ಪ್ರತಿ ತಿಂಗಳು 10 ಸಾವಿರ ಕೊಡು ಅಂತಾರೆ. ಎಲ್ಲಿಂದ ಹಣ ತರಬೇಕು? ಸಾರಿಗೆ ಚಾಲಕರು 3 ಲಕ್ಷ ಮಂದಿ ಇದ್ದಾರೆ. ಅವರ ಬೇಡಿಕೆ ಪ್ರಕಾರ ಪರಿಹಾರ ಕೊಟ್ಟರೆ ಅದೇ 5,009 ಕೋಟಿ ರೂ. ಆಗುತ್ತದೆ. ಇದನ್ನು ಈಡೇರಿಸಲು ಸಾಧ್ಯವೇ” ಎಂದು ಪ್ರಶ್ನಿಸಿದರು.

“ಸಾರಿಗೆ ಸಂಸ್ಥೆಗಳ ಬೇಡಿಕೆ ಎಲ್ಲವೂ ಈಗಿನದ್ದಲ್ಲ. ಕಳೆದ ನಾಲ್ಕೈದು ವರ್ಷಗಳ ಹಳೆಯ ಬೇಡಿಕೆಗಳು ಅವು. ಟ್ಯಾಕ್ಸ್ ಹೆಚ್ಚಳ ಮತ್ತು ಶಕ್ತಿ ಯೋಜನೆ ಮಾತ್ರ ನಮ್ಮ ಸರ್ಕಾರ ಬಂದ ಮೇಲೆ ಆಗಿದೆ. ಮುಖ್ಯಮಂತ್ರಿಗಳು ಸಭೆ ಕರೆದಾಗ ಸಾರಿಗೆ ಸಂಘಗಳು ಬರಲಿಲ್ಲ. ಕಾನೂನಾತ್ಮಕವಾಗಿ ಏನು ಈಡೇರಿಸಲು ಸಾಧ್ಯ ಅದನ್ನು ಈಡೇರಿಸುತ್ತೇವೆ. ಸಾರಿಗೆ ಚಾಲಕರ ಪರವಾಗಿಯೇ ನಮ್ಮ ‌ಸರ್ಕಾರ ಇದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಖಾಸಗಿ ಸಾರಿಗೆಯವರ ನಷ್ಟ ತುಂಬಿಕೊಡಲು ಸರ್ಕಾರಕ್ಕೆ ಆಗಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಖಾಸಗಿ ಸಾರಿಗೆ ಬೇಡಿಕೆ ವಿಚಾರವಾಗಿ ಕೆಲವು ಪ್ರಕರಣ ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ನಲ್ಲಿವೆ. ನಮ್ಮ ವಕೀಲರಿಗೆ ಹೇಳಿ ಅವರ ನ್ಯಾಯಯುತ ಬೇಡಿಕೆ ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಬಿಜೆಪಿ ಅವಧಿಯಲ್ಲಿ ಬೇಡಿಕೆ ಈಡೇರಿಕೆಗೆ ಅವರು ಪ್ರಯತ್ನಿಸದೇ ಈಗ ನಮ್ಮ ಸರ್ಕಾರದ ಅವಧಿಯಲ್ಲಿ ಎಲ್ಲ ಬೇಡಿಕೆ ಮುಂದಿಟ್ಟರೆ ಹೇಗೆ? ಸಭೆಗೆ ಕರೆದಾಗ ಬರಲಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಬಿಜೆಪಿಗೆ ನೈತಿಕತೆ ಇಲ್ಲ

ಖಾಸಗಿ ಸಾರಿಗೆ ಪ್ರತಿಭಟನೆಗೆ ಬೆಂಬಲಿಸುವ ಹಕ್ಕು ಬಿಜೆಪಿಗೆ ಇದೆಯಾ? ತಮ್ಮ ಅಧಿಕಾರ ಅವಧಿಯಲ್ಲಿ ಬಿಜೆಪಿ ಏನು ಮಾಡಿತು? ಈಗ ಅವರ ಬಗ್ಗೆ ಸಿಂಪಥಿ ಮಾತುಗಳನ್ನಾಡುತ್ತಿದೆ” ಎಂದು ಟೀಕಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿರ್ಗಮಿಸುವ ಪ್ರಧಾನಿ ತನ್ನನ್ನು ತಾನು ದೇವಮಾನವನೆಂದು ಭಾವಿಸಬಹುದು: ಕಾಂಗ್ರೆಸ್‌

"ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ...

ಕೊಪ್ಪಳ | ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ : ಕೆ.ಫಣಿರಾಜ್

ದಶಕಗಳ ಹಿಂದೆ ನಡೆದಿರುವ ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ. ಆದರೆ...

ರಾಯಚೂರು | ಕುರಿಗೆ ನೀರು ಕುಡಿಸಲು ನದಿಗೆ ತೆರಳಿದ್ದ ಬಾಲಕನ್ನು ಹೊತ್ತೊಯ್ದ ಮೊಸಳೆ

ಕೃಷ್ಣ ನದಿಯಲ್ಲಿ ಕುರಿಗಳಿಗೆ ನೀರು ಕುಡಿಸಲು ಹೋಗಿದ್ದ ವೇಳೆ ಬಾಲಕನ ಮೇಲೆ...

ಕೊಪ್ಪಳ | ಬಂಡವಾಳಶಾಹಿಗಳಿಂದ ಭೂಮಿ ಉಳಿಸಬೇಕಿದೆ: ರಾಕೇಶ್ ಟಿಕಾಯತ್

ಉದ್ಯಮಿಗಳಿಗೆ ರೈತರ ಜಮೀನು ಕಡಿಮೆ ದರದಲ್ಲಿ ಖರೀದಿಸಿ ಬಡಜನರ ಹೊಟ್ಟೆಗೆ ಬಟ್ಟೆ...