ಕೊಲೆಗಾರ ಬಿಜೆಪಿಯವ, ಆತನಿಗೆ ಜಾಮೀನು ಕೊಡಿಸದಿದ್ದರೆ ಅದೇ ರಾಜ್ಯಕ್ಕೆ ಮಾಡುವ ಉಪಕಾರ: ಆರಗಗೆ ಕುಟುಕಿದ ಪ್ರಿಯಾಂಕ್

Date:

  • ದುಷ್ಟ ಶಕ್ತಿಗಳಿಗೆಲ್ಲ ಬಿಜೆಪಿಯೇ ತವರು ಮನೆಯಾಗಿರುವುದೇಕೆ?
  • ಕರ್ನಾಟಕವನ್ನು ದುಷ್ಟಶಕ್ತಿ ಮುಕ್ತ ರಾಜ್ಯ ಮಾಡುತ್ತೇವೆ: ಪ್ರಿಯಾಂಕ್

“ದುಷ್ಟ ಶಕ್ತಿಗಳಿಗೆಲ್ಲ ಬಿಜೆಪಿಯೇ ತವರು ಮನೆಯಾಗಿರುವುದೇಕೆ? ಅಂದಹಾಗೆ, ಕಲಬುರಗಿಯಲ್ಲಿ ಪೇದೆ ಕೊಂದವನು ನಿಮ್ಮ ಪಕ್ಷದ ಕಾರ್ಯಕರ್ತ ಎಂಬುದನ್ನು ರವಿಕುಮಾರ್ ಅವರನ್ನು ಕೇಳಿ ತಿಳಿದುಕೊಳ್ಳಿ!” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಕುಟುಕಿದ್ದಾರೆ.

- Advertisement -

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ನಿಮ್ಮದೇ ತೀರ್ಥಹಳ್ಳಿಯಲ್ಲಿ ವಿದ್ಯಾರ್ಥಿನಿಯರಿಗೆ ವಂಚಿಸಿ ಬ್ಲಾಕ್‌ಮೇಲ್‌ ಮಾಡಿದ ದುಷ್ಟನ ಬಗ್ಗೆ ತಾವು ಮಾತಾಡುವುದಿಲ್ಲವೇಕೆ? ಆತ ಹಿಂದೆ ನಿಮ್ಮ ಮನೆಯ ಮೇಲೆ ದಾಳಿ ಮಾಡಿದ ದುಷ್ಟಶಕ್ತಿಯ ಗುಂಪಿಗೆ ಸೇರಿದವನು ಎಂಬುದಕ್ಕೆ ಭಯವೇ?” ಎಂದು ಲೇವಡಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಕಲಬುರಗಿಯಲ್ಲಿ ನಿಮ್ಮ ಪಕ್ಷದ ಕಾರ್ಯಕರ್ತ ಪೇದೆಯನ್ನು ಕೊಲೆ ಮಾಡಿದ್ದಲ್ಲದೆ, ಬಂಧಿಸಿದ ಪೊಲೀಸರಿಗೆ ಚಾಕು ಹಾಕಲು ಹೋಗಿ ಈಗ ಗುಂಡೇಟು ತಿಂದು ಬಂಧಿಯಾಗಿದ್ದಾನೆ. ತಾವು ಆತನಿಗೆ ಜಾಮೀನು ನೀಡಿ ಬಿಡಿಸಲು ಪ್ರಯತ್ನಿಸದಿದ್ದರೆ ಸಾಕು, ಅದೇ ತಾವು ಕರ್ನಾಟಕಕ್ಕೆ ಮಾಡುವ ಉಪಕಾರ!” ಎಂದು ಆರಗಗೆ ಪ್ರಿಯಾಂಕ್‌ ಕುಟುಕಿದ್ದಾರೆ.

“ನಮ್ಮ ಸರ್ಕಾರ ಬಂದು ಒಂದು ತಿಂಗಳಾಗಿದೆ ಅಷ್ಟೇ. ಇನ್ನು ಕೆಲವೇ ದಿನಗಳಲ್ಲಿ ಕಲಬುರಗಿ ಅಷ್ಟೇ ಅಲ್ಲ, ಕರ್ನಾಟಕವನ್ನು ದುಷ್ಟಶಕ್ತಿ ಮುಕ್ತ ರಾಜ್ಯ ಮಾಡುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮನ್‌ ಕಿ ಬಾತ್‌ನಲ್ಲಿ ಮಣಿಪುರದ ಬಾತ್‌ ಏಕಿಲ್ಲ: ಪ್ರಧಾನಿ ಮೋದಿಯ ಮೌನ ಪ್ರಶ್ನಿಸಿದ ಖರ್ಗೆ

ಪೊಲೀಸ್ ವಲಯದಲ್ಲಿ ಕಳವಳ

ಮರಳು ಅಕ್ರಮ ಸಾಗಾಣಿಕೆ ತಡೆಯಲು ಮುಂದಾದ ಕಾನ್‌ಸ್ಟೆಬಲ್‌ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆ ಮಾಡಿದ ಗಂಭೀರ ಪ್ರಕರಣ ಕಲಬುರಗಿಯಲ್ಲಿ ಇತ್ತೀಚೆಗೆ ನಡೆದಿದೆ. ಈ ಬೆನ್ನಲ್ಲಿಯೇ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸಿ ಕರೆತರುತ್ತಿದ್ದ ಯಡ್ರಾಮಿ ಪಿಎಸ್‌ಐ ಬಸವರಾಜ ಚಿತಕೋಟಿ ಅವರ ಮೇಲೆ ಕೊಲೆ ಪ್ರಕರಣದ ಆರೋಪಿಯೊಬ್ಬ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ಪೊಲೀಸ್ ವಲಯದಲ್ಲಿ ಕಳವಳವನ್ನುಂಟು ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...