ಕಾಂಗ್ರೆಸ್ ಗ್ಯಾರಂಟಿಗಳನ್ನು ಜಾರಿಗೆ ತಂದು ನಾಡಿನ ಜನರ ಬದುಕನ್ನು ಹಸನಾಗಿಸುವುದು ನಮ್ಮ ಮೊದಲ ಆದ್ಯತೆ ಎಂದು ಶಾಸಕ ಪ್ರಿಯಾಂಕ ಖರ್ಗೆ ಹೇಳಿದರು.
ಚಿತ್ತಾಪುರ ವಿಧಾನಸಭಾ ಕ್ಷೇತ್ರದಿಂದ ಸತತವಾಗಿ ಮೂರು ಬಾರಿ ಆಶೀರ್ವಾದಿಸಿ ಬೆಂಬಲಿಸಿದ ಚಿತ್ತಾಪುರದ ಮಹಾ ಜನತೆಗೆ ತುಂಬು ಹೃದಯದ ಧನ್ಯವಾದ ತಿಳಿಸಿದರು.
ಕಾಂಗ್ರೆಸ್ ಅಭೂತಪೂರ್ವ ಗೆಲುವಿಗಾಗಿ ಹಗಲಿರುಳು ಕಾರ್ಯನಿರ್ವಹಿಸಿದ ಚಿತ್ತಾಪುರದ ಕಾಂಗ್ರೆಸ್ ನಾಯಕರಿಗೆ, ಮುಖಂಡರಿಗೆ, ಕಾರ್ಯಕರ್ತರಿಗೆ ಹಾಗೂ ಮತನೀಡಿ ಆಶೀರ್ವಾದಿಸಿ ಬೆಂಬಲಿಸಿದ ಎಲ್ಲ ಮತದಾರಿಗೆ ಕೃತಜ್ಞತೆ ಎಂದರು.
ಚಿತ್ತಾಪುರವನ್ನು ಪ್ರಗತಿಯ ಹಾದಿಯಲ್ಲಿ ಮುನ್ನಡೆಸಿಕೊಂಡು ಹೋಗುವುದಕ್ಕೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಕಾಂಗ್ರೆಸ್ ಗ್ಯಾರಂಟಿಗಳನ್ನು ಜಾರಿಗೆ ತಂದು ನಾಡಿನ ಜನರ ಬದುಕನ್ನು ಹಸನಾಗಿಸುವುದು ನಮ್ಮ ಮೊದಲ ಆದ್ಯತೆ ಆಗಿರುತ್ತದೆ ಎಂದು ಹೇಳಿದರು.
ನನ್ನ ಮೇಲೆ ಅಪಾರ ನಂಬಿಕೆ , ನಿರೀಕ್ಷೆಗಳನ್ನು ಇರಿಸಿಕೊಂಡು ಕರ್ನಾಟಕದ ಸಹೃದಯರ ಸೇವೆ ಮಾಡಲು ನನಗೆ ಮತ್ತೊಂದು ಅವಕಾಶ ನೀಡಿದ್ದಾರೆ. ಈ ನಂಬಿಕೆಗೆ ಚ್ಯುತಿ ಬಾರದಂತೆ ಕರ್ನಾಟಕದ ಜನತೆಗೆ ಸಾಮಾಜಿಕ ನ್ಯಾಯ ನೀಡಲು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೇನೆ ಎಂದರು.
ಈ ಸುದ್ದಿ ಓದಿದ್ದೀರಾ? ಯಾರಾಗ್ತಾರೆ ರಾಜ್ಯದ ಮುಖ್ಯಮಂತ್ರಿ?; ಮಂಗಳವಾರ ದೆಹಲಿಯತ್ತ ಡಿಕೆಶಿ